ಕುಶಾಲನಗರ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ಜಿಲ್ಲೆಗಳ ಕ್ರೀಡಾಪಟುಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ಕೊಡಗು ಹಾಸನ ಮಂಡ್ಯ ಮೈಸೂರು ಜಿಲ್ಲೆಗಳ ಒಟ್ಟು 10 ತಂಡಗಳು ಪಾಲ್ಗೊಳ್ಳಲಿವೆ ಎಂದು ಹೇಳಿದ್ದಾರೆ. ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸಂಜೆ 4 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಡೆಯಲಿರುವ ಪಂದ್ಯಾಟದಲ್ಲಿ ಕ್ಷೇತ್ರ ಶಾಸಕರಾದ ಎಂ.ಪಿ ಅಪ್ಪಚ್ಚುರಂಜನ್, ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಸೇರಿದಂತೆ ಗಣ್ಯರು ಹಾಗೂ ಅರ್ಜುನ ಪ್ರಶಸ್ತಿ ವಿಜೇತ ಬಿ ಸಿ ರಮೇಶ್ ಅವರು ಪಾಲ್ಗೊಳ್ಳುವರು.
ವಿಜೇತ ತಂಡಗಳಿಗೆ ಪ್ರಥಮ ಬಹುಮಾನ ರೂ 50 ಸಾವಿರ ದ್ವಿತೀಯ 30 ಸಾವಿರ, ತೃತೀಯ ಮತ್ತು ಚತುರ್ಥ ಬಹುಮಾನವಾಗಿ 10 ಸಾವಿರ ನೀಡಲಾಗುವುದು ಎಂದು ಅವರು ತಿಳಿಸಿದರು.
ಆಟಗಾರರನ್ನು ಈ ತಿಂಗಳ 10ರಂದು ಹರಾಜು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9483825085 ಅಥವಾ 7337770011 ಸಂಪರ್ಕಿಸುವಂತೆ ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಸಿ ಎಸ್ ಮಧು, ಎಆರ್ ಅವಿನಾಶ್, ಅಭಿಷೇಕ್ ಮತ್ತು ನಿತಿನ್ ಇದ್ದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network