Header Ads Widget

Responsive Advertisement

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ರೈತರಿಗೆ 3 ಲಕ್ಷ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಬೆಳೆ ಸಾಲ

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ರೈತರಿಗೆ 3 ಲಕ್ಷ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಬೆಳೆ ಸಾಲ


ರೈತರಿಗೆ ಬೆಳೆ ಬಿತ್ತನೆಯಿಂದ ಕಟಾವಿನವರೆಗೂ ಬೆಳೆ ಸಾಲ ನೀಡಲಾಗುತ್ತದೆ. ಆದರೆ ಬಹುತೇಕ ರೈತರಿಗೆ ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಬೆಳೆ ಸಾಲ ಸಿಗುತ್ತದೆ ಎಂಬ ಮಾಹಿತಿ ಗೊತ್ತಿರುವುದಿಲ್ಲ. ಈ ಬೆಳೆ ಸಾಲಕ್ಕೆ ರೈತರಿಗೆ ಸಹಾಯಧನವೂ ಸಿಗುತ್ತದೆ.  

ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತದೆ.  ರೈತರಿಗೆ ಕೃಷಿ ಚಟುವಟಿಕೆಯೊಂದಿಗೆ ಇನ್ನಿತರ ಯಾವ ಉಪಕಸುಬುಗಳಿಗೆ ಸಾಲ ಮತ್ತು ಎಷ್ಟು ಬಡ್ಡಿದರ ನೀಡಲಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವುದಕ್ಗಾಗಿ ಕೇಂದ್ರ ಸರ್ಕಾರವು ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಬೆಳೆ ಸಾಲ ಹಾಗೂ ಕೃಷಿ ಉಪಕಸುಬು ಅಂದರೆ ಹೈನುಗಾರಿಕೆ, ಕುರಿ, ಕೋಳಿ ಸಾಕಾಣಿಕೆಗೂ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು.

ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯಡಿಯಲ್ಲಿರೈತರು ಒಂದು ವರ್ಷದವರೆಗೆ ಅಥವಾ ನಿಗದಿತ ಅವಧಿಯವರೆಗೆ ವಾರ್ಷಿಕ ಶೇ. 7 ರ ದರದಲ್ಲಿ ಬಡ್ಡಿ ನೀಡಲಾಗುವುದು. ಈ ಸಾಲವನ್ನು ನಿಗದಿತ ಸಮಯದ ಮೊದಲೇ ಸಾಲ ಮರುಪಾವತಿ ಮಾಡಿದರೆ ಬಡ್ಡಿದರದಲ್ಲಿ ಶೇ. 3 ರಷ್ಟು ಸಹಾಯಧನ ಸಿಗಲಿದೆ. ಅಂದರೆ ರೈತರು ತಾವು ಪಡೆದ ಸಾಲಕ್ಕೆ ಶೇ. 4 ರಷ್ಟು ಬಡ್ಡಿ ದರ ಪಾವತಿಸಬೇಕಾಗುತ್ತದೆ.

ರೈತರು ಕಿಸಾನ್ ಕಾರ್ಡ್ ಗಳನ್ನು ಹತ್ತಿರದ ಬ್ಯಾಂಕು ಗಳಲ್ಲಿ ಪಡೆಯಬಹುದು. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ , ಇತ್ತೀಚಿನ ಪಾಸ್ಪೋರ್ಟ್ ಸೈಜಿನ ಫೋಟೊದೊಂದಿಗೆ ಅರ್ಜಿ ಪಡೆದು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಕಿಸಾನ್ ಕ್ರೇಡಿಟ್ ಕಾರ್ಡ್ ಪಡೆಯಬಹುದು. 

ಕಿಸಾನ್ ಕ್ರೇಡಿಟ್ ಕಾರ್ಡ್ ಅರ್ಜಿ ನಮೂನೆಯನ್ನುಆನ್ಲೈನ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು https://pmkisan.gov.in/NewHome3.aspx ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ಕೆಳಗಡೆ ಡೌನ್ಲೋಡ್ ಕೆಸಿಸಿ ಫಾರ್ಮ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕೆಸಿಸಿ ಫಾರ್ಮ್ ಓಪನ್ ಆಗುತ್ತದೆ. ಅದನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಹತ್ತಿರದ ಬ್ಯಾಂಕಿಗೆ ಹೋಗಿ ಅರ್ಜಿ  ಸಲ್ಲಿಸಬೇಕು.

ಕಿಸಾನ್ ಕ್ರೇಡಿಟ್ ಕಾರ್ಡ್ ಪಡೆಯಲು ಪಿಎಂ ಕಿಸಾನ್ ಯೋಜನೆಯ ಎಲ್ಲಾ ಫಲಾನುಭವಿಗಳು ಅರ್ಹರಾಗಿರುತ್ತಾರೆ.  ಈ ರೈತರು ಒಂದು ಅವಧಿಗೆ 3 ಲಕ್ಷ ರೂಪಾಯಿಯವರೆಗೆ ಸಾಲ ಪಡೆಯಬಹುದು. ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ಸಾಲ ಪಡೆದ ರೈತರ ಬೆಳೆಗಳಿಗೆ ಬೆಳೆ ವಿಮೆ ಕಡ್ಡಾಯವಾಗಿರುತ್ತದೆ. ರೈತರು ತಾವು ಪಡೆದ ಸಾಲದಲ್ಲಿಯೇ ಬೆಳೆ ವಿಮೆಯ ಹಣವನ್ನು ರೈತರ ವಂತಿಗೆಯನ್ನು ಕಡಿತಗೊಳಿಸಲಾಗುವುದು.

ಕಿಸಾನ್ ಕ್ರೇಡಿಟ್ ಕಾರ್ಡ್ ಪಡೆಯುವ ರೈತರ ಬಳಿ ಮತದಾರರ ಗುರುತಿನ ಚೀಟಿ ಇರಬೇಕು. ಪ್ಯಾನ್ ಕಾರ್ಡ್ ಇರಬೇಕು. ಪಾಸ್ ಪೋರ್ಟ್ ಸೈಜಿನ 3 ಫೋಟೋಗಳಿರಬೇಕು. ಆಧಾರ್ ಕಾರ್ಡ್ ಇರಬೇಕು.

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಮತ್ತು ಕಿಸಾನ್ ಕ್ರೇಡಿಟ್ ಕಾರ್ಡ್ ಅನ್ನು ಲಿಂಕ್ ಮಾಡಿದೆ. ಈ ಕಾರ್ಡ್ ಯೋಜನೆಯಡಿಯಲ್ಲಿ ರೈತರಿಗೆ ಕಡಿಮೆ ದರದಲ್ಲಿ ಬಡ್ಡಿ ಸಿಗುತ್ತದೆ.  ಕಿಸಾನ್ ಕ್ರೇಡಿಟ್ ಕಾರ್ಡ್ ಮೂಲಕ ಬ್ಯಾಂಕ್ ಸಾಲ ಪಡೆಯಬೇಕಾದರೆ ರೈತರು ಇನ್ಯಾವುದೋ ಬ್ಯಾಂಕಿನಿಂದ ಸಾಲ ಪಡೆದಿಲ್ಲ ಎನ್ನುವುದನ್ನು ಖಾತ್ರಿ ಪಡಿಸಿಕೊಳ್ಳಲು ಬ್ಯಾಂಕುಗಳಿಂದ ಎನ್.ಓ.ಸಿ ತೆಗೆದುಕೊಳ್ಳಬೇಕಾಗುತ್ತದೆ.