ರಾಷ್ಟ್ರೀಯ ಕ್ಷಯರೋಗ ನಿರ್ಮೂಲನೆ ಬಗ್ಗೆ ಎಲ್ಇಡಿ ವಾಹನದ ಮೂಲಕ ಅರಿವು ಕಾರ್ಯಕ್ರಮ
ಮಡಿಕೇರಿ: ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ರಾಜ್ಯ ಮಟ್ಟದಿಂದ ಬಂದಿರುವ ಎಲ್.ಇ.ಡಿ. ವಾಹನದ ಪ್ರಚಾರ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ ಅವರು ಜಿಲ್ಲಾ ಪಂಚಾಯತ್ ಆವರಣದಲ್ಲಿ ಗುರುವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ವಿಧಾನ ಪರಿಶತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ರಾಜ್ಯ ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎನ್. ಆನಂದ ಮತ್ತು ಜಿಲ್ಲಾ ಕ್ಷಯರೋಗ ನಿಯಂತ್ರಣಾ ಕೇಂದ್ರದ ಸಿಬ್ಬಂದಿಗಳು ಹಾಜರಿದ್ದರು.
ಈ ಎಲ್ಇಡಿ ವಾಹನವು ಜಿಲ್ಲೆಯ ಮೂರ್ನಾಡು, ಚೆಯ್ಯಂಡಾಣೆ, ಮಡಿಕೇರಿ ನಗರ, ವಿರಾಜಪೇಟೆ ನಗರ, ತಿತಿಮತಿ ಮತ್ತು ಕುಟ್ಟಂದಿ ಭಾಗಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತದೆ ಹಾಗೂ ಈ ಸ್ಥಳಗಳಲ್ಲಿ ಶಂಕಿತ ರೋಗಿಗಳ ಕಫದ ಮಾದರಿಗಳನ್ನು ಸ್ಥಳದಲ್ಲಿಯೇ ಸಂಗ್ರಹಿಸಿ ಸಮೀಪದ ನ್ಯಾಟ್ ಕೇಂದ್ರಗಳಲ್ಲಿ ಪರೀಕ್ಷೆ ಮಾಡಲಾಗುತ್ತದೆ.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network