Header Ads Widget

ಸರ್ಚ್ ಕೂರ್ಗ್ ಮೀಡಿಯ

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ


ಮಡಿಕೇರಿ ಏ.06: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭವು ಕುಶಾಲನಗರದ ಶ್ರೀ ಪ್ಲಾಂಟರ್ಸ್ ಇನ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. 

ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಲಾಯಿತು.

 ಜಿಲ್ಲಾ ಸ್ಕೌಟ್ ಆಯುಕ್ತರಾದ ಜಿಮ್ಮಿ ಸಿಕ್ವೇರಾ ಅವರು ಸ್ಕೌಟ್ ಗೈಡ್ಸ್‍ನ ಬಗ್ಗೆ ಸಂಪೂರ್ಣ ವಿವರಣೆ ನೀಡಿದರು. ಉದ್ಯಮಿ ದಿನೇಶ್ ರವರಿಗೆ ಜಿಲ್ಲಾ ಸ್ಕೌಟ್ ಆಯುಕ್ತರಾದ ಜಿಮ್ಮಿ ಸಿಕ್ವೇರಾ ರವರು ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಪ್ರಧಾನ ಆಯುಕ್ತರಾದ  ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಕಂಠ ವಸ್ತ್ರ್ತ್ರ ತೊಡಿಸುವ ಮೂಲಕ ಸಂಸ್ಥೆಗೆ ಆತ್ಮೀಯವಾಗಿ ಸ್ವಾಗತಿಸಿದರು. 

ಇದೇ ಸಂದರ್ಭ ಕುಶಾಲನಗರ ಸ್ಥಳೀಯ ಸಂಸ್ಥೆಯ ಬೈಲಾ ವನ್ನು ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ. ಬೇಬಿ ಮ್ಯಾಥ್ಯೂ ನೀಡಿದರು. ಉಪಾಧ್ಯಕ್ಷರಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಎ.ವಿ, ಮೂರ್ತಿ ಮತ್ತು ಮೈಮುನ ಇವರಿಗೂ ಪ್ರತಿಜ್ಞಾವಿಧಿ ಬೋಧಿಸಿ, ಸಂಸ್ಥೆಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷರಾದ ರಾಣಿ ಮಾಚಯ್ಯ, ಜಿಲ್ಲಾ ಸ್ಥಾನಿಕ ಆಯುಕ್ತರಾದ            ಎಚ್.ಆರ್.ಮುತ್ತಪ್ಪ, ಜಿಲ್ಲಾ ತರಬೇತಿ ಆಯುಕ್ತರಾದ ಸುರೇಶ್ ಕುಮಾರ್ ಎನ್.ಎಲ್, ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಧನುಜಯ್, ಜಿಲ್ಲಾ ಸಂಸ್ಥೆಯ ಸಹ ಕಾರ್ಯದರ್ಶಿ ಸರೋಜಾ, ಜಿಲ್ಲಾ ಸಂಸ್ಥೆಯ ಖಜಾಂಚಿ ಪುಷ್ಪವೇಣಿ, ಸ್ಕೌಟ್ ಮಾಸ್ಟರ್ ರಂಜಿತ್, ಸಂಪಾಜೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉμÁರಾಣಿ ಮತ್ತು ಸ್ಕೌಟ್ ಮಾಸ್ಟರ್ ಗಣೇಶ್, ಗೈಡ್ ಕ್ಯಾಪ್ಟನ್ ಸುಲೋಚನಾ ವಿಜ್ಞಾನ ಪರಿಷತ್ತಿನ ಅಧ್ಯಕ್ಷರಾದ ಪ್ರೇಮ್ ಕುಮಾರ್, ಜಿಲ್ಲಾ ಸಂಘಟಕರಾದ ಯು.ಸಿ.ದಮಯಂತಿ ಉಪಸ್ಥಿತರಿದ್ದರು. 

ಜಿಲ್ಲಾ ಗೈಡ್  ಆಯುಕ್ತರಾದ ಬಿ.ಬಿ. ಸಾವಿತ್ರಿ ಅವರು ಸ್ವಾಗತಿಸಿದರು, ಸೋಮವಾರಪೇಟೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಟಿ.ಎಸ್.ಚಂದ್ರಶೇಖರ್ ನಿರೂಪಿಸಿದರು. ಸ್ಕೌಟ್ ಮಾಸ್ಟರ್ ಗಣೇಶ್ ಅವರು ವಂದಿಸಿದರು.