Header Ads Widget

ಸರ್ಚ್ ಕೂರ್ಗ್ ಮೀಡಿಯ

ಸಕಾಲ ಸಪ್ತಾಹ ಪ್ರಯುಕ್ತ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಜಾಥ


ಮಡಿಕೇರಿ ಏ.20: ಸಕಾಲ ಸಪ್ತಾಹ ಪ್ರಯುಕ್ತ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ನೇತೃತ್ವದಲ್ಲಿ ಬುಧವಾರ ಜಾಥ ನಡೆಯಿತು.   

       ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಸಕಾಲ ಕಾರ್ಯಕ್ರಮವು ಸಾರ್ವಜನಿಕರಿಗೆ ಸಕಾಲದಲ್ಲಿ ವಿವಿಧ ಸೌಲಭ್ಯ ಕಲ್ಪಿಸುವಲ್ಲಿ ಜಾರಿಗೊಳಿಸಲಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಸಕಾಲ ಕಾರ್ಯಕ್ರಮವು 10 ವರ್ಷ ಪೂರೈಸುತ್ತಿರುವ ಹಿನ್ನೆಲೆ ಜಾಥ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. 

       ಸಕಾಲ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆಯು ಪ್ರಥಮ ಸ್ಥಾನಕ್ಕೆ ಬರಲು ಪ್ರಯತ್ನಿಸಲಾಗಿದೆ. ನಾಗರಿಕರಿಗೆ ನಿಗಧಿತ ಕಾಲಮಿತಿಯಲ್ಲಿ ಸರ್ಕಾರದ ಸೇವೆಗಳನ್ನು ಒದಗಿಸುವ ಉದ್ದೇಶದಿಂದ 2012ರ ಏಪ್ರಿಲ್, 02 ರಂದು ಸಕಾಲ ಯೋಜನೆಯನ್ನು ರಾಜ್ಯಾದ್ಯಂತ ಸರ್ಕಾರ ಜಾರಿಗೊಳಿಸಿತ್ತು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. 

      ಸಕಾಲ ಯೋಜನೆ ಆರಂಭವಾಗಿ 10 ವರ್ಷ ಪೂರೈಸುತ್ತಿರುವ ಹಿನ್ನೆಲೆ ಏಪ್ರಿಲ್ ಮಾಹೆಯಲ್ಲಿ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದರು.  

       ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಲೋಕೋಪಯೋಗಿ ಇಲಾಖೆಯ ಇಇ ನಾಗರಾಜು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಷೇಕ್, ತಹಶೀಲ್ದಾರ್ ಮಹೇಶ್, ತಾ.ಪಂ.ಇಒ ಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಮುತ್ತುರಾಜ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಪೊಲೀಸ್ ಇನ್ಸ್‍ಪೆಕ್ಟರ್ ಪಿ.ವಿ.ವೆಂಕಟೇಶ್ ಇತರರು ಇದ್ದರು.