Header Ads Widget

ಸರ್ಚ್ ಕೂರ್ಗ್ ಮೀಡಿಯ

ಕ್ರೀಡಾ ವಸತಿ ನಿಲಯ ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ


ಕ್ರೀಡಾ ವಸತಿ ನಿಲಯ ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಮಡಿಕೇರಿ: ಕಿರಿಯರ ಕ್ರೀಡಾ ವಸತಿ ನಿಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಮತ್ತು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿ ಗುದ್ದಲಿ ಪೂಜೆಯನ್ನು ಶುಕ್ರವಾರ ನೆರವೇರಿಸಿದರು.

ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು,  ಕಲಿಕಾ ಚೇತರಿಕೆ ಹೆಸರಿನಲ್ಲಿ ಮೇ, 16 ರಂದು ರಾಜ್ಯದ ಎಲ್ಲಾ ಶಾಲೆಗಳನ್ನು ಪ್ರಾರಂಭಿಸಲಾಗುವುದು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹದಿನೈದು ದಿನಗಳ ಮೊದಲೇ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಮೇ, 19 ರಂದು ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವರು ಹೇಳಿದರು.  

ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ಬಿ.ಸಿ.ಸತೀಶ್. ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಇತರರು ಇದ್ದರು.