Header Ads Widget

Responsive Advertisement

‘ಅಮೃತ ಭಾರತಿಗೆ ಕನ್ನಡದ ಆರತಿ ಅಭಿಯಾನ’


‘ಅಮೃತ ಭಾರತಿಗೆ ಕನ್ನಡದ ಆರತಿ ಅಭಿಯಾನ’

ಭಾರತ ಸ್ವಾತಂತ್ರ್ಯಕ್ಕೆ ಹಲವು ಮಹನೀಯರ ಕೊಡುಗೆ ಸ್ಮರಣೀಯ: ಅಪ್ಪಚ್ಚು ರಂಜನ್   

ಮಡಿಕೇರಿ: ಭಾರತ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧಿ, ಬಾಲಗಂಗಾಧರ ನಾಥ ತಿಲಕ್, ಸರ್ದಾರ್ ವಲ್ಲಭಬಾಯಿ ಪಟೇಲ್, ಚಂದ್ರಶೇಖರ್ ಆಜಾದ್, ವೀರ ಸಾವರ್ಕರ್ ಹೀಗೆ ಹಲವು ಮಹನೀಯರು ಶ್ರಮಿಸಿದ್ದಾರೆ ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ತಿಳಿಸಿದ್ದಾರೆ.   

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ನಗರದ ಕ್ರಿಸ್ಟಲ್ ಕೋರ್ಟ್‍ನಲ್ಲಿ ಶನಿವಾರ ನಡೆದ ‘ಅಮೃತ ಭಾರತಿಗೆ ಕನ್ನಡದ ಆರತಿ’ ಅಭಿಯಾನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   

 ರಾಷ್ಟ್ರಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆ ಸರ್ಕಾರ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹನೀಯರನ್ನು ಸ್ಮರಿಸುವ ನಿಟ್ಟಿನಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ ಆಯೋಜಿಸಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ರಾಷ್ಟ್ರ ಅಭಿಮಾನ ಬೆಳೆಸಿಕೊಳ್ಳುವುದರ ಜೊತೆಗೆ, ಸ್ವಾತಂತ್ರ್ಯಕ್ಕಾಗಿ ದುಡಿದ ಮಹನೀಯರನ್ನು ಸದಾ ಸ್ಮರಿಸಿಕೊಳ್ಳಬೇಕು ಎಂದು ಶಾಸಕರು ಕರೆ ನೀಡಿದರು. 

ಮೇ 28 ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ 139 ನೇ ಜನ್ಮ ದಿನವಾಗಿದ್ದು, ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಜೈಲು ಶಿಕ್ಷೆ ಅನುಭವಿಸಿದ ಇಂತಹ ಮಹನೀಯರನ್ನು ಸ್ಮರಿಸಬೇಕು ಎಂದರು.  

 ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ ಅವರು ಮಾತನಾಡಿ 1857 ರಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ರಾಷ್ಟ್ರದೆಲ್ಲೆಡೆ ಹಬ್ಬಿತ್ತು. ಆ ನಿಟ್ಟಿನಲ್ಲಿ ಕೊಡಗು ಭಾಗದಲ್ಲಿಯೂ ಸಹ ಗುಡ್ಡೆಮನೆ ಅಪ್ಪಯ್ಯ ಗೌಡ ಸೇರಿದಂತೆ ಹಲವರು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದರು ಎಂದು ಅವರು ಸ್ಮರಿಸಿದರು. 

ಮಹಾತ್ಮ ಗಾಂಧೀಜಿ ಅವರು ಅಸ್ಪøಶ್ಯತೆ ನಿವಾರಣೆಗೆ ರಾಷ್ಟ್ರದ ಹಲವು ಕಡೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಗುಂಡುಕುಟ್ಟಿ ಮಂಜುನಾಥ ಅವರ ಮನೆಗೆ ಭೇಟಿ ನೀಡಿದಾಗ ಕೊಡಗಿನ ಗೌರಮ್ಮ ಅವರು ತಮ್ಮಲ್ಲಿದ್ದ ಒಡವೆಯನ್ನೆಲ್ಲಾ ಸ್ವಾತಂತ್ರ್ಯ ಚಳುವಳಿಗಾಗಿ ಅರ್ಪಿಸಿದರು ಎಂದು ರವಿಕುಶಾಲಪ್ಪ ಅವರು ಸ್ಮರಿಸಿದರು.   

‘ಸ್ವಾತಂತ್ರ್ಯ ದೊರೆತಿದೆ ಇದೆ ಎಂದು ಯಾರೇ ಆದರೂ, ಹೇಗೆ ಬೇಕಾದಲ್ಲಿ ನಡೆದುಕೊಳ್ಳುವುದಲ್ಲ. ಸಮಾಜಕ್ಕೆ, ರಾಷ್ಟ್ರಕ್ಕೆ ಒಳ್ಳೆಯದು ಮಾಡಬೇಕು. ಪ್ರಜಾಪ್ರಭುತ್ವವನ್ನು ಬಲಪಡಿಸಲು ಶ್ರಮಿಸಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ರವಿಕುಶಾಲಪ್ಪ ಅವರು ಕರೆ ನೀಡಿದರು.’  

ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ವಾಸಿಸುವ ಆದಿವಾಸಿ ಜನರಿಗೆ ವಿದ್ಯುತ್, ಕುಡಿಯುವ ನೀರು, ಶಾಲೆ ಮತ್ತಿತರ ಮೂಲ ಸೌಲಭ್ಯ ಕಲ್ಪಿಸಿದೆಯೇ ಎಂದು ಕೇಳಿದಾಗ ಎಲ್ಲರೂ ತಲುಪಿದೆ ಎಂದು ಹೇಳಿದರು. 

ಆದರೆ ಕೊಡಗು ಜಿಲ್ಲೆಯಲ್ಲಿ 250 ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದು ಬಾಕಿ ಇದೆ. ಎಲ್ಲಾ ಆದಿವಾಸಿ ಜನರಿಗೂ ಸಹ ಸರ್ಕಾರದ ಸೌಲಭ್ಯಗಳು ದೊರೆತಾಗ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ ದೊರೆತಂತಾಗುತ್ತದೆ. ಆ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆ ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಇದೇ ಸಂದರ್ಭದಲ್ಲಿ ಪ್ರಸ್ತಾಪಿಸಿದರು. 

ಸರ್ಕಾರದ ಸೌಲಭ್ಯಗಳು ಕಟ್ಟಕಡೆಯ ಪ್ರಜೆಗಳಿಗೂ ತಲುಪಬೇಕು. ಜಿಲ್ಲೆಯ ಆದಿವಾಸಿಗಳ ಕಣ್ಣೀರು ಒರೆಸುವ ಕೆಲಸ ಆಗಬೇಕು. ನಿಯಮಾನುಸಾರ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಬೇಕು. ಸರ್ಕಾರದ ಸೌಲಭ್ಯ ವಂಚಿತರಿಗೆ ತಲುಪಿದಾಗ ಮಾತ್ರ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ ದೊರೆತಿದೆ ಎಂದು ತಿಳಿಯಲು ಸಾಧ್ಯ ಎಂದು ರವಿಕುಶಾಲಪ್ಪ ಅವರು ಒತ್ತಿ ಹೇಳಿದರು.  

ಅಮೃತ ಭಾರತಿಗೆ ಕನ್ನಡದ ಆರತಿ ಕುರಿತು ಉಪನ್ಯಾಸ ನೀಡಿದ ಚಿಕ್ಕಮಗಳೂರು ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರಾದ ಸಿ.ಆರ್.ಪ್ರೇಮ್‍ಕುಮಾರ್ ಅವರು ಮಾತನಾಡಿ ಭಾರತ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧಿ ಸೇರಿದಂತೆ ಹಲವು ಮಹನೀಯರು ಶ್ರಮಿಸಿದ್ದಾರೆ ಎಂದರು. 

ಭಾರತ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಎಲ್ಲರನ್ನು ಸ್ಮರಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಾಷ್ಟ್ರದ ಯುವ ಜನರು ಸಾಹಿತ್ಯ, ಇತಿಹಾಸ ತಿಳಿಯುವುದು ಅತ್ಯಗತ್ಯ. ಇದರಿಂದ ರಾಷ್ಟ್ರದ ಬಗ್ಗೆ ಪ್ರೀತಿ, ಗೌರವ ಮೂಡಿಸಲು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.  

‘ಭಾರತ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧಿ, ಬಾಲಗಂಗಾಧರನಾಥ ತಿಲಕ್, ಚಂದ್ರಶೇಖರ್ ಆಜಾದ್, ವೀರ ಸಾವರ್ಕರ್  ಹೀಗೆ ಹಲವರು ಶ್ರಮಿಸಿದ್ದಾರೆ. ಇಂದಿನ ಯುವಜನರು ಸ್ವಭಾಷೆ, ಸ್ವಭೂಷಣ, ಸ್ವಧರ್ಮ ಪಾಲಿಸಬೇಕು ಎಂದು ಪ್ರೇಮ್‍ಕುಮಾರ್  ಅವರು ಕರೆ ನೀಡಿದರು.’  

ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಾರ್ಥ ನಿರ್ಮಿಸಲಾಗಿರುವ ‘ಶಿಲಾ ಫಲಕ’ವನ್ನು ಇದೇ ಸಂದರ್ಭದಲ್ಲಿ ಶಾಸಕರಾದ ಎಂ.ಪಿ.ಅಪಚ್ಚುರಂಜನ್ ಹಾಗೂ ಗಣ್ಯರು ಅನಾವರಣ ಮಾಡಿದರು. ಇದೇ ಸಂದರ್ಭದಲ್ಲಿ ಕಿರು ಹೊತ್ತಿಗೆ ಬಿಡುಗಡೆ ಮಾಡಿದರು. 

ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ್ ಹೊಳ್ಳ,  ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ನಗರಸಭಾ ಸದಸ್ಯರು ಇತರರು ಇದ್ದರು. 

ಅಮೃತ ಸ್ವಸಹಾಯ ಗುಂಪುಗಳಿಗೆ 1 ಲಕ್ಷ ರೂ.ಗಳ ಸಹಾಯಧನದ ಚೆಕ್‍ನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನಾ ಸ್ವಾಗತಿಸಿದರು. ಉಪನ್ಯಾಸಕರಾದ ಕುಮಾರ ನಿರೂಪಿಸಿದರು. ರಾಘವೇಂದ್ರ ಮತ್ತು ತಂಡದವರು ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ವಂದಿಸಿದರು.