Ad Code

Responsive Advertisement

ರೋಟರಿ ಮಿಸ್ಟಿಹಿಲ್ಸ್ ವತಿಯಿಂದ ವಿದ್ಯಾರ್ಥಿಗಳಿಗೆ ಉಡುಗೊರೆ ವಿತರಣೆ


ರೋಟರಿ ಮಿಸ್ಟಿಹಿಲ್ಸ್ ವತಿಯಿಂದ ವಿದ್ಯಾರ್ಥಿಗಳಿಗೆ ಉಡುಗೊರೆ ವಿತರಣೆ

ಮಡಿಕೇರಿ ಮೇ.17: ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನದಲ್ಲಿ ಮಂಗಳವಾರ ರೋಟರಿ ಮಿಸ್ಟಿಹಿಲ್ಸ್ ವತಿಯಿಂದ ವಿದ್ಯಾರ್ಥಿಗಳಿಗೆ ಉಡುಗೊರೆ ವಿತರಿಸಲಾಯಿತು.  

ನಗರದ ಸನ್ನಿಸೈಡ್‍ನಲ್ಲಿ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಮಂದಿರ ಹಾಗೂ ಶಿಶು ಕಲ್ಯಾಣ ಸಂಸ್ಥೆಗೆ ಸೇರಿದ ಒಟ್ಟು 100 ಮಕ್ಕಳಿಗೆ ಉಡುಗೊರೆಯನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ್ತು ರೋಟರಿ ಜಿಲ್ಲಾ ರಾಜ್ಯಪಾಲರಾದ ರವೀಂದ್ರ ಭಟ್ ಅವರು ವಿತರಿಸಿದರು. 

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಉಡುಗೊರೆ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು. 

ರೋಟರಿ ಜಿಲ್ಲಾ ರಾಜ್ಯಪಾಲ ರವೀಂದ್ರ ಭಟ್ ಅವರು ಮಾತನಾಡಿ ಜನರಲ್ ತಿಮ್ಮಯ್ಯ ಅವರು ಹುಟ್ಟಿದ ಮನೆ ಸನ್ನಿಸೈಡ್‍ನಲ್ಲಿ ವಿದ್ಯಾರ್ಥಿಗಳಿಗೆ ಉಡುಗೊರೆ ನೀಡುವ ಕಾರ್ಯ ರೋಟರಿಗೆ ಹೆಮ್ಮೆಯ ವಿಚಾರ ಎಂದರು. 

ಜನರಲ್ ತಿಮ್ಮಯ್ಯ ಅವರು ಹುಟ್ಟಿದ ಮನೆ ಪವಿತ್ರ ಸ್ಥಳವಾಗಿದ್ದು, ಈ ಸ್ಮಾರಕ ಭವನವನ್ನು ಜಿಲ್ಲಾಡಳಿತ ಅತ್ಯುತ್ತಮವಾಗಿ ನಿರ್ವಹಿಸಿದೆ ಎಂದು ರವೀಂದ್ರ ಭಟ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. 

ಕಾರ್ಯಕ್ರಮದಲ್ಲಿ ರೋಟರಿ ಉಪ ರಾಜ್ಯಪಾಲ ಅನಿಲ್ ಎಚ್.ಟಿ., ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷರಾದ ಅನಿತಾ ಪೂವಯ್ಯ, ಕಾರ್ಯದರ್ಶಿ ಪಿ.ಆರ್.ರಾಜೇಶ್, ವಲಯ ಕಾರ್ಯದರ್ಶಿ ಎಚ್.ಎಸ್.ವಸಂತಕುಮಾರ್, ವಲಯ ಸೇನಾನಿ ಜಗದೀಶ್ ಪ್ರಶಾಂತ್, ರೋಟರಿ ಮಿಸ್ಟಿ ಹಿಲ್ಸ್ ಸ್ಥಾಪಕ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಮಡಿಕೇರಿ ರೋಟರಿ ಕಾರ್ಯದರ್ಶಿ ಲಲಿತಾ ರಾಘವನ್, ಶಿಶು ಕಲ್ಯಾಣ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಬಿ.ಕೆ.ರವೀಂದ್ರ ರೈ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನಾ, ಬಾಲಕರ ಬಾಲಮಂದಿರದ ಮೇಲ್ವಿಚಾರಕರಾದ ಸೂರಜ್, ಮಣಜೂರು ಮಂಜುನಾಥ್ ಇದ್ದರು.