Header Ads Widget

Responsive Advertisement

ಜನಕಲ್ಯಾಣ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಅವರಿಂದ ವಿಡಿಯೋ ಸಂವಾದ


ಜನಕಲ್ಯಾಣ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಅವರಿಂದ ವಿಡಿಯೋ ಸಂವಾದ

ಮಡಿಕೇರಿ ಮೇ.31: ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಭಾರತ ಸರ್ಕಾರದ ವಿವಿಧ ಯೋಜನೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾ ನಗರದಿಂದ ಏರ್ಪಡಿಸಲಾಗಿದ್ದ ವಿಡಿಯೋ ಸಂವಾದವನ್ನು ಫಲಾನುಭವಿಗಳೊಂದಿಗೆ ಮಂಗಳವಾರ ನಡೆಸಿದರು. 

      ನಗರದ ಜಿ.ಪಂ.ಸಭಾಂಗಣದಲ್ಲಿ ವರ್ಚುವಲ್ ಮೂಲಕ ಫಲಾನುಭವಿಗಳೊಂದಿಗೆ ಏರ್ಪಡಿಸಲಾಗಿದ್ದ ನೇರ ಸಂವಾದ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲಾಗಿತ್ತು.  

      ಫಲಾನುಭವಿಗಳ ಜೊತೆ ವಿಡಿಯೊ ಸಂವಾದ ನಡೆಸಿದ ನಂತರ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಡವರ ಕಲ್ಯಾಣಕ್ಕಾಗಿಯೇ ಹಲವು ಯೋಜನೆಗಳನ್ನು ಭಾರತ ಸರ್ಕಾರದಿಂದ ಜಾರಿಗೊಳಿಸಲಾಗಿದೆ ಎಂದರು. 

     ವಿವಿಧ ಯೋಜನೆಗಳಡಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಮೂಲಕ ಸರ್ಕಾರದ ಅನುದಾನವನ್ನು ಸೋರಿಕೆ ತಡೆಯಲಾಗಿದೆ. 08 ವರ್ಷಗಳ ಆಡಳಿತದಲ್ಲಿ ಪ್ರಧಾನ ಸೇವಕನಾಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ಪ್ರಧಾನಮಂತ್ರಿ ಅವರು ನುಡಿದರು. 

    ‘ರಾಷ್ಟ್ರದ 130 ಕೋಟಿ ಜನರ ಪರಿವಾರದ ಸದಸ್ಯನಾಗಿದ್ದೇನೆ. ನಾವೆಲ್ಲರೂ ಜೊತೆಗೂಡಿ ಭಾರತವನ್ನು ಇಡೀ ವಿಶ್ವದಲ್ಲಿ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಪ್ರಯತ್ನಿಸಬೇಕು. ಇಂದು ದೇಶದ 10 ಕೋಟಿಗೂ ಹೆಚ್ಚಿನ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದೇವೆ.  ಇಡೀ ರಾಷ್ಟ್ರದ ಜನ ಗರೀಬ್ ಕಲ್ಯಾಣ್ ಸಮ್ಮೇಳನದಲ್ಲಿ ಭಾಗವಹಿಸಿ ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದರು.’

     ಇದಕ್ಕೂ ಮೊದಲು ದೇಶದ ವಿವಿಧ ರಾಜ್ಯಗಳಿಂದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಅವರು ವರ್ಚುವಲ್ ಮೂಲಕ ಸಂವಾದ ನಡೆಸಿ, ಅಭಿಪ್ರಾಯ ಆಲಿಸಿದರು. ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಸಂತೋಷಿ ಎಂಬ ಮಹಿಳಾ ಫಲಾನುಭವಿಯೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಅವರು, ಸಂತೋಷಿ ಅವರು, ಆಯುμÁ್ಮನ್ ಭಾರತ್ ಆರೋಗ್ಯ ಯೋಜನೆಯಿಂದಾದ ಅನುಕೂಲದ ಬಗ್ಗೆ ವಿವರಣೆ ಪಡೆದುಕೊಂಡರು.

     ಬಳಿಕ ಮಹಿಳೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ‘ಯೋಜನೆಯ ಬಗ್ಗೆ ಮಾತನಾಡಿದ ರೀತಿ ನೋಡಿ ನನಗೆ ಅತೀವ ಸಂತೋಷವಾಯಿತು ಎಂದರು. 

     ಈ ವಿಡಿಯೋ ಸಂವಾದದಲ್ಲಿ ದೇಶದ ವಿವಿಧ ರಾಜ್ಯಗಳ ಫಲಾನುಭವಿಗಳಾದ ಲಡಖ್-ತಶಿ ಲೆಹ, ಬಿಹಾರ್ ಲಲಿತಾ ದೇವಿ, ವೆಸ್ಟ್ ತ್ರಿಪುರ- ಪಂಕಜ ಸಹನಿ, ಕರ್ನಾಟಕದ ಕಲಬುರಗಿ-ಸಂತೋಷಿ, ಇವರುಗಳೊಂದಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಉಜ್ವಲ ಯೋಜನೆ, ಪೆÇೀಷಣ್ ಅಭಿಯಾನ್, ಮಾತೃ ವಂದನಾ ಯೋಜನೆ, ಸ್ವಚ್ಛ ಭಾರತ್ ಮಿಷನ್, ಜಲ ಜೀವನ ಮಿಷನ್, ವನ್ ನೇಷನ್ ವನ್ ರೇಷನ್ ಯೋಜನೆ, ಪ್ರದಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ಆಯುμÁ್ಮನ್ ಭಾರತ್ ಕಾರ್ಡ್, ಪ್ರಧಾನಮಂತ್ರಿ ಮುದ್ರಾ ಯೋಜನೆ ಹೀಗೆ ಹಲವಾರು ಯೋಜನೆಗಳನ್ನು ಪಡೆದ ದೇಶದ ಫಲಾನುಭವಿಗಳ ಜತೆಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

     ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ರಾಜ್ಯ ಅಧ್ಯಕ್ಷರಾದ ಕೆ.ಜಿ.ಬೋಪಯ್ಯ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕರ್ನಾಟಕ ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷರಾದ ರವಿಕುಶಾಲಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ್ ಹೊಳ್ಳ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿ.ಪಂ. ಉಪಕಾರ್ಯದರ್ಶಿ ಪಿ.ಲಕ್ಷ್ಮಿ, ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ ನಾನಾ ಇಲಾಖೆ ಅಧಿಕಾರಿಗಳು ಇತರರು ಇದ್ದರು.