Header Ads Widget

ಸರ್ಚ್ ಕೂರ್ಗ್ ಮೀಡಿಯ

ಭತ್ತ, ಕಾಳು ಮೆಣಸು, ಅಡಿಕೆ, ಶುಂಠಿ ಬೆಳೆಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು- ಕೆ.ವಿ.ಕೆ ಸಲಹೆ

ಭತ್ತ, ಕಾಳು ಮೆಣಸು,ಅಡಿಕೆ, ಶುಂಠಿ ಬೆಳೆಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು- ಕೆ.ವಿ.ಕೆ ಸಲಹೆ

ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಇನ್ನೇನು ಪ್ರಾರಂಭವಾಗಲಿದ್ದು, ರೈತರು ತಮ್ಮ ತಮ್ಮ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ರೈತರಿಗೆ ಭತ್ತ, ಕಾಳು ಮೆಣಸು, ಅಡಿಕೆ ಮತ್ತು ಶುಂಠಿ ಬೆಳೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗರೂಕತೆ ಕ್ರಮಗಳನ್ನು ಸೂಚಿಸಿದ್ದಾರೆ.

ಆದ್ದರಿಂದ ಜಿಲ್ಲೆಯ ರೈತರು ಸೂಚಿಸಿರುವ ಕ್ರಮಗಳನ್ನು ಅನುಸರಿಸಿ ಬೆಳೆಯಲ್ಲಿ ಬರುವ ಅನೇಕ ಕೀಟ ಮತ್ತು ರೋಗಗಳನ್ನು ಕಡಿಮೆ ಮಾಡಿ ಇಳುವರಿಯನ್ನು ಹೆಚ್ಚಿಸಬೇಕೆಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ತಜ್ಞ ಡಾ. ವೀರೇಂದ್ರ ಕುಮಾರ್ ಅವರು ಸಲಹೆ ಮಾಡಿದ್ದಾರೆ. 


ಭತ್ತ: 

ರೋಗ ರಹಿತ ಬಿತ್ತನೆ ಬೀಜಗಳನ್ನು ಮಾತ್ರ ನಾಟಿಗೆ ಉಪಯೋಗಿಸಬೇಕು ಮತ್ತು ಹೆಚ್ಚಿನ ಪ್ರಮಾಣದ ಕೊಟ್ಟಿಗೆ ಗೊಬ್ಬರ ಮತ್ತು ಹಸಿರೆಲೆ ಗೊಬ್ಬರವನ್ನು ಉಪಯೋಗಿಸಬೇಕು. ಪ್ರತೀ ಕಿ.ಗ್ರಾಂ ಬಿತ್ತನೆ ಬೀಜಕ್ಕೆ ಕಾರ್ಬೆಂಡೆಜಿಮ್+ ಮ್ಯಾಂಕೋಜೆಬ್ (ಸಾ¥sóï 2 ಗ್ರಾಂ) ಅಥವಾ ಟ್ರೈಸೈಕ್ಲೋಜೋಲ್( 2 ಗ್ರಾಂ)   ಎಂಬ ಶಿಲೀಂದ್ರನಾಶಕದಿಂದ ಕಡ್ಡ್ದಾಯವಾಗಿ ಬೀಜೋಪಚಾರ ಮಾಡಿ ಬಿತ್ತನೆಗೆ ಉಪಯೋಗಿಸಬೇಕು. 

ಬೀಜದ ಆಯ್ಕೆ ಮತ್ತು ಬೀಜೋಪಚಾರ ಮಾಡುವ ವಿಧಾನ : ಪ್ರತೀ ಎಕರೆಗೆ ಶಿ¥sóÁರಸ್ಸು ಮಾಡಿದ 25-30 ಕೆ.ಜಿ ಭತ್ತದ ಬೀಜವನ್ನು ತೆಗೆದುಕೊಂಡು 1:4 ಪ್ರಮಾಣದ ಉಪ್ಪಿನ ದ್ರಾವಣದಲ್ಲಿ (4 ಲೀ. ನೀರಿಗೆ 1 ಕೆ.ಜಿ ಉಪ್ಪು) ಅದ್ದಿ ಗಟ್ಟಿ ಮತ್ತು ಜೊಳ್ಳು ಬೀಜಗಳನ್ನು ಬೇರ್ಪಡಿಸಬೇಕು. ಗಟ್ಟಿಯಾದ ಬೀಜಗಳನ್ನು ಬೇರ್ಪಡಿಸಿದ ನಂತರ 2-3 ಬಾರಿ ತಣ್ಣೀರಿನಲ್ಲಿ ತೊಳೆದು ಸುಮಾರು 8-12 ಗಂಟೆಗಳ ಕಾಲ ಬಿತ್ತನೆ ಬೀಜವನ್ನು ನೀರಿನಲ್ಲಿ ನೆನಸಬೇಕು. ನೆನೆಸಿದ ಬೀಜಗಳನ್ನು ನೀರಿನಿಂದ ತೆಗೆದು ಎಕರೆಗೆ ಬೇಕಾದ 25-30 ಕೆ.ಜಿ ಬಿತ್ತನೆ ಬೀಜಕ್ಕೆ 50-60  ಗ್ರಾಂ ಕಾರ್ಬೆಂಡೆಜಿಮ್ + ಮ್ಯಾಂಕೋಜೆಬ್ (ಸಾ¥sóï 2 ಗ್ರಾಂ) ಅಥವಾ ಟ್ರೈಸೈಕ್ಲೋಜೋಲ್( 2 ಗ್ರಾಂ)  ಎಂಬ ಶಿಲೀಂದ್ರನಾಶಕವನ್ನು ಚೆನ್ನಾಗಿ ಮಿಶ್ರಣ ಮಾಡಿ ನೆರಳಿನಲ್ಲಿ ಒಣಗಿಸಬೇಕು. ಈ ರೀತಿ ಬೀಜೋಪಚಾರ ಮಾಡಿದ ಬಿತ್ತನೆ ಬೀಜವನ್ನು ಒಂದು ಚೀಲದಲ್ಲಿ ಗಟ್ಟಿಯಾಗಿ ಕಟ್ಟಿ ಮೊಳಕೆಯೊಡೆಯಲು ಇಟ್ಟು ನಂತರ ಸಸಿಮಡಿಗೆ ಉಪಯೋಗಿಸಬೇಕು. 

ದೀರ್ಘಾವಧಿ ತಳಿಗಳ ನಾಟಿಯನ್ನು ಜುಲೈ ತಿಂಗಳ ಎರಡನೆ ವಾರದೊಳಗೆ ಕಡ್ಡಾಯವಾಗಿ ಮಾಡಲೇಬೇಕು. ದೀರ್ಘಾವಧಿ ತಳಿಗಳನ್ನು ತಡವಾಗಿ ನಾಟಿ ಮಾಡಿದರೆ ಬೆಂಕಿ ರೋಗದ ಭಾದೆ ತೀವ್ರವಾಗುತ್ತದೆ. ಸಸಿಯನ್ನು ನಾಟಿ ಮಾಡುವುದಕ್ಕಿಂತ ಮುಂಚಿತವಾಗಿ ಸಸಿ ಮಡಿಯ ಪೈರುಗಳ ತುದಿ ಭಾಗವನ್ನು ಕತ್ತರಿಸಿ ನಂತರ ನಾಟಿಗೆ ಉಪಯೋಗಿಸಬೇಕು. ಇದರಿಂದ ಕಾಂಡಕೊರೆಯುವ ಹುಳುವಿನ ಸಮಸ್ಯೆಯನ್ನು ಕಡಿಮೆ ಮಾಡಬಹುದು.

ಶಿಪಾರಸ್ಸು ಮಾಡಿದ ಪ್ರಮಾಣದ ರಸಗೊಬ್ಬರವನ್ನು ಮಾತ್ರ ಕೊಡಬೇಕು. ಪ್ರತಿ ಎಕರೆಗೆ 65 ಕೆ.ಜಿ ಯೂರಿಯ, 150 ಕೆ.ಜಿ ಶಿಲಾರಂಜಕ ಮತ್ತು 60 ಕೆ.ಜಿ ಮ್ಯೂರೇಟ್ ಆಪ್ ಪೆÇೀಟ್ಯಾಷ್ ಮಾತ್ರ ಕೊಡಬೇಕು. ಶಿಫಾರಸ್ಸಿಗಿಂತ ಹೆಚ್ಚಿನ ಪ್ರಮಾಣದ ಯೂರಿಯವನ್ನು ಕೊಡಬಾರದು. ಶಿ¥sóÁರಸ್ಸಿಗಿಂತ ಹೆಚ್ಚಿನ ಪ್ರಮಾಣದ ಯೂರಿಯವನ್ನು ಕೊಟ್ಟರೆ ಬೆಂಕಿ ರೋಗ ಬರುವ ಸಂಭವವುಂಟು. ಶಿಫಾರಸ್ಸಿನ 1/3 ಭಾಗ ಯೂರಿಯ, ಪೂರ್ತಿ ಶಿಲಾರಂಜಕ ಮತ್ತು ಅರ್ಧ ಭಾಗ ಪೆÇಟ್ಯಾಷನ್ನು ನಾಟಿ ಸಮಯದಲ್ಲಿ ಭೂಮಿಗೆ ಸೇರಿಸಬೇಕು. ನಾಟಿ ಮಾಡಿದ 30 ದಿನಗಳ ಮತ್ತೊಮ್ಮೆ ಯೂರಿಯ ಹಾಗೂ ಪೆÇಟ್ಯಾಷ್ ಗೊಬ್ಬರವನ್ನು ಕೊಡಬೇಕು. 

ನಾಟಿಗೆ 21 ರಿಂದ 28 ದಿನಗಳ ಸಸಿಗಳನ್ನೆ ಉಪಯೋಗಿಸಬೇಕು. ಪ್ರತೀ ಮೂರು ಬೆಳೆಗೆ ಒಂದು ಸಾರಿಯಂತೆ ಎಕರೆಗೆ 8 ಕೆ.ಜಿ. ಸತುವಿನ ಸಲ್ಫೇಟನ್ನು 25 ಕೆ.ಜಿ ಮರಳಿನ ಜೊತೆಯಲ್ಲಿ ಮಿಶ್ರಣ ಮಾಡಿ ನಾಟಿ ಮಾಡುವ ಸಂದರ್ಭದಲ್ಲಿ ಮಣ್ಣಿಗೆ ಸೇರಿಸಬೇಕು ಮತ್ತು 2.0 ಕೆ.ಜಿ ಬೋರಾಕ್ಸ್‍ನ್ನು 5 ಕೆ.ಜಿ ಕೊಟ್ಟಿಗೆ ಗೊಬ್ಬರದ ಜೊತೆಯಲ್ಲಿ ಮಿಶ್ರಣಮಾಡಿ ನಾಟಿಗೆ ಮುನ್ನ, ಇತರೆ ರಸಗೊಬ್ಬರಗಳ ಜೊತೆ ಬೆರೆಸದಂತೆ ಪ್ರತ್ಯೇಕವಾಗಿ ಮಣ್ಣಿಗೆ ಸೇರಿಸಿ. ಇದರಿಂದ ಭತ್ತದಲ್ಲಿ ಜಳ್ಳಿನ ಪ್ರಮಾಣ ಕಡಿಮೆಯಾಗುತ್ತದೆ. 


ಕಾಳುಮೆಣಸು:
 

ಚಿಬ್ಬು ರೋಗವನ್ನು ಹತೋಟಿ ಮಾಡಲು ಕಾರ್ಬೆಂಡೆಜಿಮ್ + ಮ್ಯಾಂಕೋಜೆಬ್ (ಸಾ¥sóï) 2 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪಡಿಸುವುದು. ರೋಗ ಬಾಧೆಯಿಂದ ಬಳಲಿ ಸತ್ತು ಹೋದ ಬಳ್ಳಿಗಳನ್ನು ಬೇರು ಸಮೇತ ಕಿತ್ತು ತೋಟದಿಂದ ಹೊರಗೊಯ್ದು ನಾಶಪಡಿಸಬೇಕು. ಪ್ರತೀ ಬಳ್ಳಿಗೆ 50 ರಿಂದ 60 ಗ್ರಾಂ ಟ್ರೈಕೋಡರ್ಮ ಎಂಬ ಜೈವಿಕ ಶಿಲೀಂದ್ರವನ್ನು 1 ಕೆ.ಜಿ ಬೇವಿನ ಹಿಂಡಿ ಅಥವಾ 5 ಕೆ.ಜಿ ಕೊಟ್ಟಿಗೆ ಗೊಬ್ಬರದಲ್ಲ್ಲಿ ಮಿಶ್ರಣ ಮಾಡಿ ಬುಡಕ್ಕೆ ಹಾಕಬೇಕು ಅಥವಾ 4 ಕೆ.ಜಿ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹ ಮತ್ತು ಒಂದು ಕೆ.ಜಿ ಬೆಲ್ಲವನ್ನು 200 ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ಗಿಡದ ಬುಡ ಭಾಗಕ್ಕೆ ನೇರವಾಗಿ (4 ರಿಂದ 5 ಲೀಟರ್‍ನಷ್ಟು) ಸುರಿಯಬೇಕು. ಬೇಸಾಯ ಕ್ರಮಗಳನ್ನು ಅನುಸರಿಸುವಾಗ ಬಳ್ಳಿಯ ಬೇರುಗಳಿಗೆ ಗಾಯಗಳಾಗದಂತೆ ನೋಡಿಕೊಳ್ಳಬೇಕು. 

ಮುನ್ನೆಚ್ಚರಿಕೆಯಾಗಿ ಮುಂಗಾರಿಗೆ ಮುನ್ನ ಬಳ್ಳಿ, ಎಲೆ ಮತ್ತು ಕಾಂಡ ಪೂರ್ಣ ತೊಯ್ಯುವಂತೆ ಶೇ. 1 ರ ಬೋರ್ಡೊ ದ್ರಾವಣವನ್ನು ಸಿಂಪರಣೆ ಮಾಡಬೇಕು. ಟ್ರೈಕೋಡರ್ಮ ಅಥವಾ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಬುಡಕ್ಕೆ ಹಾಕದಿದ್ದರೆ ಪ್ರತಿ ಬಳ್ಳಿಗೆ 3 ರಿಂದ 5 ಲೀಟರ್ ಕಾಪರ್ ಆಕ್ಸಿಕ್ಲೋರೈಡ್ (ಬ್ಯಾರಲ್‍ಗೆ 500 ಗ್ರಾಂ) ದ್ರಾವಣದಿಂದ ಬಳ್ಳಿಯ ಬುಡದ ಭಾಗವನ್ನು ನೆನೆಸಬೇಕು ಮತ್ತು ಶೇ. 1 ರ ಬೋರ್ಡೊ ದ್ರಾವಣ ಅಥವಾ 3.0 ಮಿ. ಲಿ. ಪೊಟ್ಯಾಸಿಯಂ ಪಾಸ್ಪೋನೇಟ್‍ನ್ನು ಪ್ರತಿ ಲೀಟರ್ ನೀರಿಗೆ ಬೆರಸಿದ ದ್ರಾವಣವನ್ನು ಎಲೆಗಳಿಗೆ ಸಿಂಪರಣೆÉ ಮಾಡಬೇಕು.

ಶಿಪಾರಸ್ಸು ಮಾಡಿದ ಪ್ರಮಾಣದ ರಸಗೊಬ್ಬರವನ್ನು ಮಾತ್ರ ಕೊಡಬೇಕು. ಪ್ರತಿ ಗಿಡಕ್ಕೆ 300 ಗ್ರಾಂ ಯೂರಿಯಾ, 275 ಗ್ರಾಂ ಶಿಲಾರಂಜಕ ಮತ್ತು 450 ಗ್ರಾಂ ಎಂ.ಓ.ಪಿನ್ನು ಕೊಡಬೇಕು.ಮೇಲೆ ತಿಳಿಸಿರುವ ಪ್ರಮಾಣದ ಗೊಬ್ಬರವು ಒಂದು ಬಳ್ಳಿಗೆ ಒಂದು ವರ್ಷಕ್ಕೆ ಕೊಡಬೇಕಾದ ಪ್ರಮಾಣವಾಗಿದ್ದು ಮೊದಲನೆ ಕಂತನ್ನು ಜೂನ್ ತಿಂಗಳಿನಲ್ಲಿ ಎರಡನೆ ಕಂತಿನ ಗೊಬ್ಬರವನ್ನು ಆಗಸ್ಟ್ ತಿಂಗಳಿನಲ್ಲಿ ಕೊಡಬೇಕು. 

ನೆಲದ ಮೇಲೆ ಹರಡಿರುವ ಹಾಗೂ ಹೆಚ್ಚಾದ ಕವಲು ಬಳ್ಳಿಗಳನ್ನು ಮುಂಗಾರಿಗೆ ಮುನ್ನ ಕತ್ತರಿಸಿ ತೆಗೆಯಬೇಕು. ಉಳಿದ ಬಳ್ಳಿಗಳನ್ನು ಆಶ್ರಯ ಮರಕ್ಕೆ ಕಟ್ಟಿ ಬೆಳೆಯಲು ಬೀಡಬೇಕು. ಕತ್ತರಿಸಿದ ಭಾಗಕ್ಕೆ ಕಾಪರ್ ಆಕ್ಸಿಕ್ಲೋರೈಡ್ ಪೇಸ್ಟನಿಂದ ಲೇಪನ ಮಾಡಬೇಕು. ಕಾಫಿû ಮತ್ತು ಅಡಿಕೆ ತೋಟಗಳಲ್ಲಿ ಒಂದಕ್ಕಿಂತ ಹೆಚ್ಚು ತಳಿಗಳಿರುವಂತೆ ಕಾಳುಮೆಣಸು ಬಳ್ಳಿಗಳನ್ನು ನಾಟಿ ಮಾಡಬೇಕು.ಬಳ್ಳಿಯ ಗಾತ್ರ ಹೆಚ್ಚಿಸಲು 5-8 ಬಳ್ಳಿಗಳನ್ನು ನಾಟಿಮಾಡುವುದು ಜಂತುಹುಳುಗಳ ಬಾಧೆಯನ್ನು ತಪ್ಪಿಸಲು (ನಿಧಾನ ಸೊರಗು ರೋಗ) ಮಳೆಗಾಲ ಪ್ರಾರಂಭವಾಗುವುದಕ್ಕಿಂತ ಮುಂಚೆ ಪ್ರತೀ ಬಳ್ಳಿಗೆ 1 ಕಿ. ಗ್ರಾಂ ಬೇವಿನ ಹಿಂಡಿ ಗಿಡದ ಬುಡಕ್ಕೆ ಹಾಕಬೇಕು.


ಅಡಿಕೆ:
ಮಳೆಗಾಲ ಪ್ರಾರಂಭವಾಗುವುದಕ್ಕಿಂತ ಮುಂಚಿತವಾಗಿ ಕಳೆದ ವರ್ಷ ರೋಗ ಪೀಡಿತ ಕಾಯಿಗಳು ತೋಟದಲ್ಲಿ ಬಿದ್ದಿದ್ದರೆ ಅಂತಹ ಕಾಯಿಗಳನ್ನು ಆರಿಸಿ ತೆಗೆದು ಸುಡಬೇಕು. ಕೊಳೆ ರೋಗವನ್ನು ಹತೋಟಿ ಮಾಡಲು ರೈತರು ಶೇ. 1 ರ ಬೋರ್ಡೊ ದ್ರಾವಣವನ್ನು ಸರಿಯಾಗಿ ತಯಾರಿಸಿ ಮೊದಲನೆ ಸಿಂಪರಣೆಯನ್ನು ಜೂನ್ ತಿಂಗಳ ಮೊದಲನೆ ವಾರದೊಳಗೆ ಕಡ್ಡಾಯವಾಗಿ ಸಿಂಪರಣೆ ಮಾಡಲೇಬೇಕು. ಪರಿಣಾಮಕಾರಿಯಾಗಿ ಕೊಳೆರೋಗವನ್ನು ಹತೋಟಿ ಮಾಡಲು ಶೇ. 1 ರ ಬೋರ್ಡೊ ದ್ರಾವಣವನ್ನು ಅಡಿಕೆಯ ಗೊಂಚಲು, ಸುಳಿ ಮತ್ತು ಎಲೆಗಳು ಸಂಪೂರ್ಣ ತೊಯ್ಯುವ ಹಾಗೆ ಸಿಂಪಡಿಸಬೇಕು. ಪ್ರತಿ ಅಡಿಕೆಯ ಬುಡದ ಭಾಗಕ್ಕೆ 3 ರಿಂದ 5 ಲೀಟರ್ ಕಾಪರ್ ಆಕ್ಸಿಕ್ಲೋರೈಡ್ (ಬ್ಯಾರಲ್‍ಗೆ 500 ಗ್ರಾಂ) ದ್ರಾವಣವನ್ನು ಸುರಿಯಬೇಕು. 

ಬೋರ್ಡೊ ದ್ರಾವಣವನ್ನು ಸಿಂಪರಣೆ ಮಾಡುವುದಕ್ಕಿಂತ ಮೊದಲು ಕಡ್ಡಾಯವಾಗಿ ದ್ರಾವಣದ ರಸಸಾರವನ್ನು ಪರೀಕ್ಷಿಸಿ ನಂತರ ಸಿಂಪರಣೆಗೆ ಉಪಯೋಗಿಸಬೇಕು. ನೀರು ನಿಲ್ಲದ ಹಾಗೆ ಬಸಿಗಾಲುವೆಗಳನ್ನು ನಿರ್ಮಿಸಬೇಕು. 

ಅಡಿಕೆ ಕಾಯಿ ಹೊಡೆದು ಬೀಳುವ /ಸೀಳುವ ಸಮಸ್ಯೆ ಇದ್ದಲ್ಲಿ ಪ್ರತಿ ಅಡಿಕೆ ಗಿಡಕ್ಕೆ 25 ರಿಂದ 30 ಗ್ರಾಂ ಬೋರಾಕ್ಸ್‍ನ್ನು ಕೊಡಬೇಕು.  ಪ್ರತಿ ಮರವೊಂದಕ್ಕೆ ವರ್ಷಕ್ಕೆ 20 ಕಿ. ಗ್ರಾಂ ನಂತೆ ಕೊಟ್ಟಿಗೆ ಗೊಬ್ಬರ ಹಾಗೂ ಹಸಿರೆಲೆ ಗೊಬ್ಬರವನ್ನು ಕೊಡಬೇಕು.

ಪ್ರತಿ ಗಿಡಕ್ಕೆ 220 ಗ್ರಾಂ ಯೂರಿಯಾ, 200 ಗ್ರಾಂ ಶಿಲಾರಂಜಕ ಮತ್ತು 230 ಗ್ರಾಂ ಎಂ.ಓ.ಪಿನ್ನು ಕೊಡಬೇಕು.ಮೇಲೆ ತಿಳಿಸಿರುವ ಪ್ರಮಾಣದ ಗೊಬ್ಬರವು ಒಂದು ಗಿಡಕ್ಕೆ ಒಂದು ವರ್ಷಕ್ಕೆ ಕೊಡಬೇಕಾದ ಪ್ರಮಾಣವಾಗಿದ್ದು ಮೊದಲನೆ ಕಂತನ್ನು ಜೂನ್ ತಿಂಗಳಿನಲ್ಲಿ ಎರಡನೆ ಕಂತಿನ ಗೊಬ್ಬರವನ್ನು ಆಗಸ್ಟ್ ತಿಂಗಳಿನಲ್ಲಿ ಕೊಡಬೇಕು. 


ಶುಂಠಿ: 

ನೀರು ನಿಲ್ಲದ ಹಾಗೆ ಬಸಿಗಾಲುವೆಗಳನ್ನು ನಿರ್ಮಿಸಬೇಕು. ಪ್ರತೀ ಶುಂಠಿಯ ಗಿಡದ ಬುಡದ ಭಾಗಕ್ಕೆ 50 ರಿಂದ 60 ಗ್ರಾಂ ಟ್ರೈಕೋಡರ್ಮ ಎಂಬ ಜೈವಿಕ ಶಿಲೀಂದ್ರವನ್ನು 1 ಕೆ.ಜಿ ಬೇವಿನ ಹಿಂಡಿ ಅಥವಾ 5 ಕೆ.ಜಿ ಕೊಟ್ಟಿಗೆ ಗೊಬ್ಬರದಲ್ಲ್ಲಿ ಮಿಶ್ರಣ ಮಾಡಿ ಬುಡಕ್ಕೆ ಹಾಕಬೇಕು. ಗೆಡ್ಡೆಕೊಳೆ ರೋಗವನ್ನು ಹತೋಟಿ ಮಾಡಲು ಶೇ. 1 ರ ಬೋರ್ಡೊ ದ್ರಾವಣವನ್ನು ಸಿಂಪರಣೆ ಮಾಡಲೇಬೇಕು. ಪ್ರತಿ ಶುಂಠಿಯ ಗಿಡದ ಬುಡದ ಭಾಗಕ್ಕೆ 1 ರಿಂದ 2 ಲೀಟರ್ ಕಾಪರ್ ಆಕ್ಸಿಕ್ಲೋರೈಡ್ (200 ಲೀಟರ್ ಬ್ಯಾರಲ್‍ಗೆ 600 ಗ್ರಾಂ) ದ್ರಾವಣವನ್ನು ಸುರಿಯಬೇಕು.

ಹೆಚ್ಚಿನ ಮಾಹಿತಿಗೆ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥರು, ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು, ಕೊಡಗು ಜಿಲ್ಲೆ, ದೂರವಾಣಿ: 08274-247274 ನ್ನು ಸಂಪರ್ಕಿಸಬಹುದು.