ರಾಷ್ಟ್ರೀಯ ಸೇವಾ ಯೋಜನೆ ಜೂ.15 ರವರೆಗೆ ವಾರ್ಷಿಕ ವಿಶೇಷ ಶಿಬಿರ
ಮಡಿಕೇರಿ ಜೂ.10: ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ವತಿಯಿಂದ 2021-22 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ಜೂನ್ 15 ರವರೆಗೆ ನಗರಸಭಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಆ ದಿಸೆಯಲ್ಲಿ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಗುರುವಾರ ನಡೆಯಿತು. ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಡಿ.ನಿರ್ಮಲ ಅವರು ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಶಶಿಧರ್, ನಗರಸಭೆ ಸದಸ್ಯರು ಇತರರು ಇದ್ದರು.
ಸ.ಪ್ರ.ದ ಕಾಲೇಜಿನ ದೈಹಿಕ ಶಿಕ್ಷಕರಾದ ಎವರೆಸ್ಟ್ ರೊಡ್ರಿಗಸ್ ಅವರು ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕರಾದ ಎಂ.ಎನ್.ಪ್ರಕಾಶ್ ಅವರು ವಂದಿಸಿದರು.
ಜೂನ್, 15 ರಂದು ಸಮಾರೋಪ ಸಮಾರಂಭ ನಡೆಯಲಿದೆ. ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷರಾದ ರವಿ ಕುಶಾಲಪ್ಪ, ಸ.ಪ್ರ.ದ.ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಡಿ.ನಿರ್ಮಲಾ, ನಗರಸಭೆ ಪೌರಾಯುಕ್ತರಾದ ರಾಮದಾಸ್, ನಗರಸಭೆ ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಸರೋಜಿನಿ ಇತರರು ಪಾಲ್ಗೊಳ್ಳಲಿದ್ದಾರೆ.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network