Header Ads Widget

Responsive Advertisement

‘ಸಮಗ್ರ ಕೃಷಿ ಅಭಿಯಾನ’ ಪ್ರಚಾರ ವಾಹನಕ್ಕೆ ಕೆ.ಜಿ.ಬೋಪಯ್ಯ ಚಾಲನೆ


‘ಸಮಗ್ರ ಕೃಷಿ ಅಭಿಯಾನ’ ಪ್ರಚಾರ ವಾಹನಕ್ಕೆ ಕೆ.ಜಿ.ಬೋಪಯ್ಯ ಚಾಲನೆ

ಮಡಿಕೇರಿ ಜೂ.13: ಕೃಷಿ ಇಲಾಖೆ ವತಿಯಿಂದ ನೀಡಲಾಗುವ ಭಿತ್ತನೆ ಬೀಜ ಸೇರಿದಂತೆ ಕೃಷಿಗೆ ಪೂರಕವಾದ ಕಾರ್ಯಕ್ರಮಗಳ ಮಾಹಿತಿಯನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕೃಷಿ ಅಭಿಯಾನ ಕಾರ್ಯಕ್ರಮ ಪ್ರಚಾರ ಜಾಥಗೆ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಸೋಮವಾರ ಚಾಲನೆ ನೀಡಿದ್ದಾರೆ. 

ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಕೃಷಿ ಇಲಾಖೆ ವತಿಯಿಂದ ನೀಡಲಾಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೃಷಿ ಇಲಾಖೆಯಿಂದ ನೀಡಲಾಗುವ ಸಹಾಯಧನ ಸೇರಿದಂತೆ ಸರ್ಕಾರದ ಎಲ್ಲಾ ಸೌಲಭ್ಯಗಳು ಕೃಷಿಕರಿಗೆ ತಲುಪಬೇಕು ಎಂದು ಕೆ.ಜಿ.ಬೋಪಯ್ಯ ಅವರು ಹೇಳಿದರು.  

ಕೃಷಿ ಜೊತೆಗೆ ಕೃಷಿ ಸಂಬಂಧಿತ ಇಲಾಖೆಗಳ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ದೊರೆಯಬೇಕು. ಸರ್ಕಾರದ  ಸೌಲಭ್ಯಗಳು ಕೃಷಿಕರಿಗೆ ತಲುಪಬೇಕು ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು. 

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಷೇಕ್ ಅವರು ಮಾತನಾಡಿ ಕೃಷಿ ಇಲಾಖೆಯ ನಡಿಗೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮದಡಿ ಕೃಷಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. 

ಕೃಷಿ ಯಾಂತ್ರೀಕರಣ, ಸೂಕ್ಷ್ಮ ನೀರಾವರಿ, ರಾಷ್ಟ್ರೀಯ ಕೃಷಿ ಮೂಲ ಭೂತ ಸೌಕರ್ಯ ನಿಧಿ ಯೋಜನೆ ಹಾಗೂ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣೆ ನಿಯಮಬದ್ದಗೊಳಿಸುವಿಕೆ, ಬೆಳೆ ಸಮೀಕ್ಷೆ, ಬೆಳೆ ವಿಮೆ ಮತ್ತು ಕೃಷಿ ಸಾಲ ಸೌಲಭ್ಯ, ಕೃಷಿ ಪರಿಕರಗಳು, ಕೃಷಿ ಯಂತ್ರೋಪಕರಣಗಳು, ಬಾಡಿಗೆ ಆಧಾರಿತ ಸೇವಾ ಕೇಂದ್ರ (ಯಂತ್ರಧಾರೆ) ಕೃಷಿ ಉತ್ಪನ್ನ ಸಂಸ್ಕರಣಾ ಘಟಕಗಳು ಮತ್ತಿತರ ಬಗ್ಗೆ ಮಾಹಿತಿ ನೀಡಿದರು. 

ಕೀಟನಾಶಕ/ ಕಳೆನಾಶಕ ಬಳಕೆ ಹೆಚ್ಚಾಗುತ್ತಿರುವುದರಿಂದ ಪರೋಪಕಾರಿ ಜೀವಿಗಳ ಸಂತತಿ ಅವನತಿಯ ಕಡೆಗೆ ಹೋಗುತ್ತಿರುವುದರಿಂದ ಕಳೆನಾಶಕಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು ಎಂದು ಶಬಾನಾ ಎಂ.ಷೇಖ್ ಅವರು ಕೋರಿದರು. 

ಸಮಗ್ರ ಕೃಷಿ ಅಭಿಯಾನ ಪ್ರಚಾರ ವಾಹನವು ಜೂನ್, 14 ರಂದು ಕರಿಕೆ, ಭಾಗಮಂಡಲ ಅಯ್ಯಂಗೇರಿ ಗ್ರಾಮ ಪಂಚಾಯಿತಿಗಳಲ್ಲಿ ಪ್ರಚಾರ ಕೈಗೊಂಡು, ಜೂನ್, 15 ರಂದು ಬಲ್ಲಮಾವಟಿ, ನಾಪೋಕ್ಲು, ಎಮ್ಮೆಮಾಡು ಗ್ರಾಮ ಪಂಚಾಯಿತಿಗಲ್ಲಿ ಪ್ರಚಾರ ಕೈಗೊಂಡು, ಜೂನ್, 16 ರಂದು ಕಕ್ಕಬೆ, ನರಿಯಂದಡ ಪಾರಾಣೆ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿ ಮಾಹಿತಿ ನೀಡಲಾಗುತ್ತದೆ ಎಂದು ಕೃಷಿ ಅಧಿಕಾರಿ ನಾರಾಯಣ ರೆಡ್ಡಿ ಅವರು ಮಾಹಿತಿ ನೀಡಿದರು. 

ತೋಟಗಾರಿಕೆ ಇಲಾಖೆಯ ಮುತ್ತಪ್ಪ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಸ್ನೇಹ, ಕೃಷಿ ಇಲಾಖೆಯ ಎ.ಸಿ.ಗಿರೀಶ್, ತಾಂತ್ರಿಕ ಅಧಿಕಾರಿ ಇತರರು ಇದ್ದರು.