ಹಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಸವ ವಸತಿ ಯೋಜನೆಯಡಿ ಮನೆ ನಿರ್ಮಿಸಲು ಅಧೀಕೃತ ಚಾಲನೆ
ಹಾತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದಾ-ಈಚೂರು ವಾರ್ಡ್‌ನ 6 ಫಲಾನುಭವಿಗಳಿಗೆ ಬಸವ ವಸತಿ ಯೋಜನೆಯಡಿಯಲ್ಲಿ ಮನೆ ನಿರ್ಮಿಸಲು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ. ಬೋಪ್ಪಯ್ಯನವರು ಅಧೀಕೃತವಾಗಿ ಚಾಲನೆ ನೀಡಿದರು.
ಸಮಾರಂಭದಲ್ಲಿ ಹಾತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗುಮ್ಮಟ್ಟಿರ ದರ್ಶನ್ ನಂಜಪ್ಪ, ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷರಾದ ಕಾಡ್ಯಾಮಾಡ ಗಿರೀಶ್ ಗಣಪತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸರ್ವಸದಸ್ಯರು, ಗ್ರಾಮಸ್ಥರು ಹಾಗೂ ಪಿ.ಡಿ.ಒ ಹಾಜರಿದ್ದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network