Header Ads Widget

Responsive Advertisement

ನಿಶಾನೆ ಮೊಟ್ಟೆ ಅರಣ್ಯದಲ್ಲಿ ಬೀಜೋತ್ಸವ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ


ನಿಶಾನೆ ಮೊಟ್ಟೆ ಅರಣ್ಯದಲ್ಲಿ ಬೀಜೋತ್ಸವ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಮಡಿಕೇರಿ ಜೂ.06: ಪರಿಸರದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು ಭವಿಷ್ಯದ ದೃಷ್ಟಿಯಿಂದ ಅರಣ್ಯ ಸಂರಕ್ಷಣೆಗಾಗಿ ಅರಣ್ಯ ಪ್ರದೇಶದಲ್ಲಿ ಹಮ್ಮಿಕೊಂಡಿರುವ ಬೀಜೋತ್ಸವದ ಮೂಲಕ ಕಾಡು ಪ್ರದೇಶ ಹಾಗೂ ಖಾಲಿ ಜಾಗದಲ್ಲಿ ಅರಣ್ಯ ಬಿತ್ತನೆ ಬೀಜವನ್ನು ಬಿತ್ತಿ ಗಿಡ ಮರಗಳನ್ನು ಬೆಳೆಸುವ ಮೂಲಕ ಹೆಚ್ಚೆಚ್ಚು ಅರಣ್ಯ ಪ್ರದೇಶವನ್ನು ವೃದ್ಧಿಸುವ  ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ ಅವರು ಕರೆ ನೀಡಿದ್ದಾರೆ. 

ಜಿಲ್ಲಾಡಳಿತ, ಅರಣ್ಯ ಇಲಾಖೆ ವತಿಯಿಂದ ನಗರದ ಹೊರವಲಯದ ನಿಶಾನೆ ಮೊಟ್ಟೆ ಬೆಟ್ಟದ ಅರಣ್ಯದಲ್ಲಿ ಭಾನುವಾರ 'ಒಂದೇ ಒಂದು ಭೂಮಿ" : ಪ್ರಕೃತಿಯೊಂದಿಗೆ ಸುಸ್ಥಿರ ಸಹಬಾಳ್ವೆ' ಎಂಬ ಕೇಂದ್ರ ವಿಷಯದಡಿ ನಡೆದ 'ವಿಶ್ವ ಪರಿಸರ ದಿನಾಚರಣೆ" ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಿನೂತನ ಕಾರ್ಯಕ್ರಮವಾದ "ಬೀಜ ಬಿತ್ತೋಣ- ಅರಣ್ಯ ಬೆಳೆಸೋಣ”: ಬೀಜೋತ್ಸವ ಅಭಿಯಾನದಲ್ಲಿ ಬೀಜ ಬಿತ್ತನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. 

ನಾವು ಪಶ್ಚಿಮಘಟ್ಟದಲ್ಲಿನ ಜೀವ ವೈವಿಧ್ಯ, ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಸುಂದರ ಪ್ರಕೃತಿ ತಾಣವಾದ ಕೊಡಗಿನ ಅರಣ್ಯ, ಪರಿಸರ, ಜೀವ ವೈವಿಧ್ಯ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು. ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ತಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಸಂರಕ್ಷಿಸಬೇಕು ಎಂದರು.

ಶಾಲಾ ವಿದ್ಯಾರ್ಥಿಗಳು ತಮ್ಮ ಶಾಲಾ ಅಂಗಳ ಮತ್ತು ಸುತ್ತಲಿನ ಪರಿಸರದಲ್ಲಿ ವರ್ಷದಲ್ಲಿ ಕನಿಷ್ಠ ಎರಡು ಗಿಡಗಳನ್ನು ನೆಟ್ಟು ಅದನ್ನು ನಿರ್ವಹಣೆ ಮಾಡಿ ಪೆÇೀಷಿಸುವ ಗುರುತರ ಜವಾಬ್ದಾರಿಯನ್ನು ಶಾಲಾ ಶಿಕ್ಷಕ ವರ್ಗ ಹೊಂದಬೇಕು. ಗಿಡನೆಟ್ಟು ಬೆಳೆಸುವ ವಿದ್ಯಾರ್ಥಿಗಳ ಹೆಸರನ್ನು ಪ್ರಕಟಿಸುವ ಮೂಲಕ ಉತ್ತಮವಾಗಿ ಗಿಡ ಮರ ಬೆಳೆಸುವ ಮಕ್ಕಳನ್ನು ಗುರುತಿಸಿ ಪೆÇ್ರೀತ್ಸಾಹಿಸುವ ಕೆಲಸವನ್ನು ಶಿಕ್ಷಣ ಇಲಾಖೆಯು ಹೊಂದಬೇಕು ಎಂದು ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ಅವರು ತಿಳಿಸಿದರು. 

ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಪಿ.ಅನಿತಾ ಮಾತನಾಡಿ, ಮಕ್ಕಳು ತಮ್ಮನ್ನು ಪರಿಸರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಭವಿಷ್ಯದಲ್ಲಿ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು.

ಅರಣ್ಯದಲ್ಲಿ ಕೈಗೊಂಡಿರುವ ಬೀಜೋತ್ಸವದ ಮಹತ್ವದ ಕುರಿತು ಮಾಹಿತಿ ನೀಡಿದ ಕೊಡಗು ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್.ಮೂರ್ತಿ ಪ್ರಸಕ್ತ ಪರಿಸರ ದಿನಾಚರಣೆ ಸಂದರ್ಭದಲ್ಲಿ ಅರಣ್ಯ ಇಲಾಖೆ ಈ ಬಾರಿ ಬೀಜೋತ್ಸವ ಆರಂಭಿಸಿದ್ದು, ಅತ್ಯಮೂಲ್ಯ ಮರಗಳ ಬೀಜ ಸಂಗ್ರಹಿಸಿ, 'ಬೀಜ ಬಿತ್ತೋಣ, ಅರಣ್ಯ ಬೆಳೆಸೋಣ' ಎಂಬ ಮಹತ್ವದ  ಬೀಜೋತ್ಸವದ ಅಭಿಯಾನ ಆರಂಭಿಸಿದೆ. ಬೀಜೋತ್ಸವ ಕಾರ್ಯಕ್ರಮವು ಜೂ. 12 ರ ವರೆಗೆ ನಡೆಯಲಿದ್ದು, ಈ  ಅಭಿಯಾನದಲ್ಲಿ ಶಾಲಾ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ನಾಗರಿಕರು ಸಾಧ್ಯವಾದಷ್ಟು ಎಲ್ಲರೂ ಅರಣ್ಯ ಸಂರಕ್ಷಣೆಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಬೀಜೋತ್ಸವದ ಮಹತ್ವ ತಿಳಿಸಿದ ಮಡಿಕೇರಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ,  ಕಾಡಿನಲ್ಲಿ ಹೇಗೆ ಅರಣ್ಯ ಬಿತ್ತನೆ ಬೀಜ ಬಿತ್ತುವುದು ಮತ್ತು ಮಳೆ ಸಂದರ್ಭದಲ್ಲಿ ಆ ಬೀಜಗಳು ಹೇಗೆ ಮೊಳಕೆ ಬಂದು ಗಿಡವಾಗಿ ಬೆಳೆಯುತ್ತವೆ. ನಾವು ನೈಸರ್ಗಿಕ ಅರಣ್ಯ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಅರಣ್ಯ ಇಲಾಖೆಯ ವತಿಯಿಂದ ಅರಣ್ಯ ಪ್ರದೇಶದಲ್ಲಿ ಮತ್ತಿ, ತಾರೆ, ಮಹಾಗಣಿ, ಅಳಲೆ, ನೆಲ್ಲಿ, ಬೇವು, ಮಾವು  ಮೊದಲಾದ ಬಿತ್ತನೆ ಬೀಜಗಳನ್ನು ಬಿತ್ತನೆ ಮಾಡಲಾಗುತ್ತಿದೆ ಎಂದು ಪೂವಯ್ಯ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ ನಂಜುಂಡೇಗೌಡ, ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮಾಥ್ಯೂ, ಡಿಎಫ್‍ಒ ಪೂರ್ಣಿಮ, ಶಿವರಾಮ್ ಬಾಬು, ಡಿಡಿಪಿಐ ವೇದಮೂರ್ತಿ, ನಗರಸಭೆಯ ಪೌರಾಯುಕ್ತರಾದ ರಾಮದಾಸ್, ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಆರ್‍ಎಫ್‍ಓ ಮಧುಸೂದನ್, ಮಯೂರ್ ಕಾರವೇಕರ್, ಡಿಆರ್‍ಎಫ್ ಗಳಾದ ದರ್ಶಿನಿ, ರಾಥೋಡ್, ಕ್ಲಬ್ ಮಹೀಂದ್ರ ರೆಸಾರ್ಟ್ ನ ಸ್ವಯಂ ಸೇವಕರು, ಅರಣ್ಯ ರಕ್ಷಕರು ಮತ್ತು ಅರಣ್ಯ ವೀಕ್ಷಕರು ಇದ್ದರು. ಸ್ಕೌಟ್ಸ್ ಮತ್ತು ಗೈಡ್ಸ್  ಸಂಸ್ಥೆಯ ಸಂಘಟಕಿ ದಮಯಂತಿ ಪ್ರತಿಜ್ಞಾ ವಿಧಿ ಬೋಧಿಸಿದರು. 

ಮದೆನಾಡು ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು, ವಿಜ್ಞಾನ ಪರಿಷತ್ತಿನ ಪದಾಧಿಕಾರಿಗಳಾದ ಎಂ.ಎನ್.ವೆಂಕಟನಾಯಕ್,  ಎಂ.ಎಚ್.ಹರೀಶ್, ಇತರರು ಇದ್ದರು.   

ಅರಣ್ಯ , ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ನೌಕರರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಸ್ವಯಂ ಸೇವಕರು ಜತೆಗೂಡಿ  ನಿಶಾನೆ ಮೊಟ್ಟೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿನ ತಾಜ್ ರೆಸಾರ್ಟ್ ಸಮೀಪದ ಬೆಟ್ಟದಲ್ಲಿ ವಿವಿಧ ಜಾತಿಯ ಬೀಜಗಳನ್ನು ಬಿತ್ತನೆ ಮಾಡಿದರು.

 ಬೀಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮತ್ತು  ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ನಗರದ ಸಂತ ಜೋಸೆಫರ ಬಾಲಕಿಯರ  ಬುಲ್‍ಬುಲ್ಸ್ ತಂಡ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಾಲಕಿಯರ ರೇಂಜರ್ಸ್ ತಂಡದ ವಿದ್ಯಾರ್ಥಿಗಳು, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್ ನ ವಿದ್ಯಾರ್ಥಿಗಳ ಹಸಿರು ಪಡೆ ತಂಡ, ಸ್ಕೌಟ್ಸ್-ಗೈಡ್ಸ್ ನ ಸ್ವಯಂ ಸೇವಕರು ಮತ್ತು ಅರಣ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಜತೆಗೂಡಿ ನಿಶಾನೆ ಮೊಟ್ಟೆ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತನೆ ಮಾಡಿದರು. 

ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕದ ಪದಾಧಿಕಾರಿಗಳು ಬೀಜೋತ್ಸವದಲ್ಲಿ ಭಾಗವಹಿಸಿದ್ದರು.