ಗಾಳಿಬೀಡು ಗ್ರಾ.ಪಂ.ವ್ಯಾಪ್ತಿಯ ಕಾಡಂಚಿನ ಒಣಚಲು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಜಿ.ಪಂ.ಸಿಇಒ ಭೇಟಿ; ಪರಿಶೀಲನೆ
ಮಡಿಕೇರಿ ಜೂ.15: ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ನೀಡುವಲ್ಲಿ ಅಂಗನವಾಡಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಮಡಿಕೇರಿ ತಾಲೂಕು ಗಾಳಿಬೀಡು ಗ್ರಾ.ಪಂ.ವ್ಯಾಪ್ತಿಯ ಕಾಡಂಚಿನ ಒಣಚಲು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಗ್ರಾಮದಲ್ಲಿ ಒಟ್ಟು 115 ಜನಸಂಖ್ಯೆಯಿದ್ದು, 4 ವರ್ಷದ ಮಗು ಪ್ರತಿದಿನ ಅಂಗನವಾಡಿ ಕೇಂದ್ರಕ್ಕೆ ಹಾಜರಾಗಿ ಶಾಲಾ ಪೂರ್ವ ಶಿಕ್ಷಣವನ್ನು ಪಡೆಯುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡ ಮತ್ತು ಇಂಗ್ಲೀμï ವರ್ಣಮಾಲೆಯ ಎಲ್ಲಾ ಅಕ್ಷರಗಳನ್ನು ಕಲಿತಿರುವ ಮಗುವು, ಅಂಗನವಾಡಿ ಶಿಕ್ಷಕಿಯ ಸಹಕಾರದಿಂದ ಸಂಖ್ಯೆಗಳ ಬಗ್ಗೆಯೂ ಅರಿವನ್ನು ಹೊಂದಿದ್ದಾರೆ. ಈ ಬಗ್ಗೆ ಜಿ.ಪಂ.ಸಿಇಒ ಅವರು ಖುದ್ದು ವಿದ್ಯಾರ್ಥಿನಿಯೊಂದಿಗೆ ಮಾತನಾಡಿ, ಸಂತಸ ವ್ಯಕ್ತಪಡಿಸಿದರು.
ಶಾಲಾಪೂರ್ವ ಶಿಕ್ಷಣ ನೀಡುವಲ್ಲಿ ಜಿಲ್ಲೆಯ ಅಂಗನವಾಡಿಗಳು ಉತ್ತಮ ಕಾರ್ಯನಿರ್ವಹಿಸುತ್ತಿವೆ. ಯಾವೊಬ್ಬ ಮಗುವೂ ಶಾಲಾ ಪೂರ್ವ ಶಿಕ್ಷಣದಿಂದ ವಂಚಿತರಾಗಬಾರದು. ಸರ್ಕಾರದ ಉದ್ದೇಶ ಸಾಕಾರಗೊಳಿಸುವ ನಿಟ್ಟಿನಲ್ಲಿ ವಣಚಲು ಅಂಗನವಾಡಿ ಕೇಂದ್ರ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಈ ಅಂಗನವಾಡಿ ಕೇಂದ್ರದಲ್ಲಿ ಕೇವಲ ಒಂದು ವಿದ್ಯಾರ್ಥಿ ದಾಖಲಾಗಿದ್ದರೂ ಸಹ ಶಾಲಾಪೂರ್ವ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರವನ್ನು ನಡೆಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಸರ್ಕಾರದಿಂದ ನೀಡಲಾಗುವ ಸವಲತ್ತುಗಳನ್ನು ಸೂಕ್ತ ರೀತಿಯಲ್ಲಿ ಮಕ್ಕಳಿಗೆ ತಲುಪಿಸುವಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ದೊಡ್ಡದು ಎಂದು ಜಿ.ಪಂ.ಸಿಇಒ ಅವರು ಹೇಳಿದರು.
ಇದೇ ವೇಳೆ ಮಡಿಕೇರಿ ತಾ.ಪಂ.ಇಒ ಶೇಖರ್, ಗಾಳಿಬೀಡು ಗ್ರಾ.ಪಂ.ಉಪಾಧ್ಯಕ್ಷರಾದ ಉಡುದೋಳಿ ಗಿರೀಶ್, ಗ್ರಾ.ಪಂ.ಪಿಡಿಒ ಶಶಿಕಿರಣ್ ಇತರರು ಇದ್ದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network