ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಗತ್ಯ ಸಿದ್ಧತೆಗೆ ಡಾ.ಬಿ.ಸಿ.ಸತೀಶ ಸೂಚನೆ
ಮಡಿಕೇರಿ ಜೂ.07: ಇದೇ ಜೂನ್, 21 ರಂದು 8 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕೈಗೊಳ್ಳುವ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಳೆ ವಾತಾವರಣ ಇಲ್ಲದಿದ್ದಲ್ಲಿ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ), ಮಳೆ ಇದಲ್ಲಿ ಜಿಲ್ಲೆಯ ಕ್ರಿಸ್ಟಲ್ ಕೋರ್ಟ್ ಅಥವಾ ಕಾವೇರಿ ಹಾಲ್‍ನಲ್ಲಿ ಯೋಗ ದಿನಾಚರಣೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಲಹೆ ಮಾಡಿದರು.
ಯೋಗ ದಿನಾಚರಣೆ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳನ್ನು ಆಹ್ವಾನಿಸಿ ಯೋಗ ದಿನಾಚರಣೆ ಯಶಸ್ಸಿಗೆ ಸಹಕರಿಸುವಂತೆ ಕೋರಿದರು.
ಯೋಗ ದಿನಾಚರಣೆಯ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಜಾಥಾ ಹಮ್ಮಿಕೊಳ್ಳುವುದು, ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚಿನ ಪ್ರಚಾರ ಕೈಗೊಳ್ಳುವುದು ಮತ್ತಿತರ ಎಲ್ಲರ ಸಹಕಾರ ಪಡೆದು ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸುವಂತೆ ಜಿಲ್ಲಾ ಆಯುಷ್ ಅಧಿಕಾರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ರೇಣುಕಾದೇವಿ ಅವರು ಮಾಹಿತಿ ನೀಡಿ ಜೂನ್, 21 ರಂದು ಯೋಗ ದಿನಾಚರಣೆಯನ್ನು ಮೈತ್ರಿ ಹಾಲ್‍ನಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಅದಕ್ಕೂ ಮೊದಲು ಜೂನ್, 19 ರಂದು ಜಾಥಾ ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಸ್‍ಪಿ ಗಜೇಂದ್ರ ಪ್ರಸಾದ್ ಅವರು ಪ್ರಸಕ್ತ ವಾರವೇ ಎನ್‍ಡಿಆರ್‍ಎಫ್ ತಂಡ ಆಗಮಿಸಿ, ಮೈತ್ರಿ ಸಭಾಂಗಣದಲ್ಲಿ ವಾಸ್ತವ್ಯ ಹೂಡಲಿದೆ ಎಂದು ತಿಳಿಸಿದರು.
ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಅವರು ಜಾಥಾವನ್ನು ನಗರದ ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತಕ್ಕಾಗಿ ಕಾಲೇಜು ರಸ್ತೆ ಮೂಲಕ ಜಾಥಾ ಹಮ್ಮಿಕೊಳ್ಳಬಹುದಾಗಿದೆ ಎಂದು ಸಲಹೆ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‍ಎಸ್‍ಎಸ್, ಎನ್‍ಸಿಸಿ, ಯೋಗ ಸಂಸ್ಥೆಗಳ ಸಹಕಾರದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಯೋಗ ದಿನಾಚರಣೆಯಲ್ಲಿ ಸುಮಾರು 300 ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ರೇಣುಕಾದೇವಿ ಅವರು ಮಾಹಿತಿ ನೀಡಿದರು.
ಜಿಲ್ಲಾ ಮಟ್ಟದ ಎಲ್ಲಾ ಹಂತದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು. ತಾಲ್ಲೂಕು ಮಟ್ಟದಲ್ಲಿಯೂ ಸಹ ತಹಶೀಲ್ದಾರರು, ತಾ.ಪಂ.ಇಒ ಇತರರ ಸಮ್ಮುಖದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಪಿ.ಅನಿತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಡಿಡಿಪಿಐ ವೇದಮೂರ್ತಿ, ಜಿಲ್ಲಾ ಸರ್ಜನ್ ಡಾ.ವಿಶಾಲ್ ಕುಮಾರ್, ಸ್ಕೌಟ್ಸ್ ಮತ್ತು ಗೈಡ್ಸ್‍ನ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಪೌರಾಯುಕ್ತರಾದ ರಾಮದಾಸ್, ಸಹಕಾರ ಇಲಾಖೆಯ ಉಪ ನಿಬಂಧಕರಾದ ಎಚ್.ಎನ್.ರಮೇಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಾರಾಯಣ ರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ, ಟ್ರಾವೆಲ್ ಕೂರ್ಗ್‍ನ ಚೆಯ್ಯಂಡ ಸತ್ಯ, ಬಿ.ಕೆ.ರವೀಂದ್ರ ರೈ, ಡಾ.ರಾಜಾರಾಂ, ನಾನಾ ಇಲಾಖೆ ಅಧಿಕಾರಿಗಳು ಇತರರು ಇದ್ದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network