Header Ads Widget

ಸರ್ಚ್ ಕೂರ್ಗ್ ಮೀಡಿಯ

ರಾಜಸ್ಥಾನದ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದು ಜಾಗರಣ ವೇದಿಕೆ-ವಿಶ್ವ ಹಿಂದು ಪರಿಷತ್-ಬಜರಂಗದಳ ಕೊಡಗು ಇವರುಗಳ ನೇತೃತ್ವದಲ್ಲಿ ಮಡಿಕೇರಿಯಲ್ಲಿಂದು ಬೃಹತ್ ಪ್ರತಿಭಟನೆ


ರಾಜಸ್ಥಾನದ 
ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದು ಜಾಗರಣ ವೇದಿಕೆ-ವಿಶ್ವ ಹಿಂದು ಪರಿಷತ್-ಬಜರಂಗದಳ ಕೊಡಗು ಇವರುಗಳ ನೇತೃತ್ವದಲ್ಲಿ ಮಡಿಕೇರಿಯಲ್ಲಿಂದು ಬೃಹತ್ ಪ್ರತಿಭಟನೆ

ರಾಜಸ್ಥಾನದ ಕನ್ನಯ್ಯಲಾಲ್  ಹತ್ಯೆ ಖಂಡಿಸಿ ಹಿಂದು ಜಾಗರಣ ವೇದಿಕೆ - ವಿಶ್ವ ಹಿಂದು ಪರಿಷತ್ -ಬಜರಂಗದಳ ನೇತೃತ್ವದಲ್ಲಿ ಮಡಿಕೇರಿಯಲ್ಲಿ  ಬೃಹತ್ ಪ್ರತಿಭಟನೆ ಸುರಿವ ಮಳೆಯನ್ನೂ ಲೆಕ್ಕಿಸದೇ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿ.


ರಾಜಸ್ಥಾನದ ಉದಯಪುರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಟೈಲರ್ ಕನ್ನಯ ಲಾಲ್ ಎಂಬವರನ್ನು  ಐಸಿಸ್ ರೀತಿಯಲ್ಲಿ ಕೊಂದು ಶಿರಚ್ಛೇದ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಿದ ಮತಾಂಧ ಕಿರಾತಕರ ಈ ಹತ್ಯೆಯನ್ನು  ಖಂಡಿಸಿ ಹಿಂದು ಜಾಗರಣ ವೇದಿಕೆ  - ವಿಶ್ವ ಹಿಂದು ಪರಿಷತ್ - ಬಜರಂಗದಳ ನೇತೃತ್ವದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಆನಂತರ ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಆಗ್ರಹ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಪಕ್ಷದ ಮುಖಂಡರುಗಳು  ಭಾಗವಹಿಸಿದ್ದರು.