ಹಾಡಿ ಜನರ ಆರೋಗ್ಯ ಸುಧಾರಣೆಗೆ ಶ್ರಮಿಸಿ: ಭಂವರ್ ಸಿಂಗ್ ಮೀನಾ
ಮಡಿಕೇರಿ ಜೂ.07: ಹಾಡಿ ಜನರ ಆರೋಗ್ಯ ಬಗ್ಗೆ ಗಮನಹರಿಸಿ ಹಾಗೂ ಮೂಲ ಸೌಕರ್ಯ ಕಲ್ಪಿಸುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗೆ ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ.
ಪೊನ್ನಂಪೇಟೆ ತಾಲ್ಲೂಕಿನ ನಾಲ್ಕೇರಿ ಹಾಗೂ ಕೆ.ಬಾಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮಾಡು ಮತ್ತು ಕೊಡಂಗೆ ಹಾಡಿಗಳಿಗೆ ಮಂಗಳವಾರ ಭೇಟಿ ನೀಡಿ, ಹಾಡಿ ಜನರ ಯೋಗಕ್ಷೇಮ ವಿಚಾರಿಸಿ, ಗರ್ಭಿಣಿಯರು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಲು ತಾಲ್ಲೂಕು ಆರೋಗ್ಯಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಬೊಮ್ಮಾಡು ಆಶ್ರಮ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಬಗ್ಗೆ ಮಾಹಿತಿ ಜಿ.ಪಂ.ಸಿಇಒ ಅವರು ಮಕ್ಕಳಿಗೆ ಮುಂದಿನ ದಿನಗಳಲ್ಲಿ ಪೆÇ್ರೀಟೀನ್ ಆಹಾರ ನೀಡುವಂತೆ ಶಿಶು ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಉತ್ತಮವಾದ ಪೌಷ್ಟಿಕಾಂಶವುಳ್ಳ ಆಹಾರ ನೀಡಿ, ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಅಂಗನವಾಡಿ ಆಶಾ ಕಾರ್ಯಕರ್ತೆಯರಿಗೆ ಸೂಚನೆ ನೀಡಿದರು.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಮಗ್ರ ಕೆರೆ ಅಭಿವೃದ್ಧಿ, ಅಮೃತ ಸರೋವರ, ಮೈದಾನ ಅಭಿವೃದ್ಧಿ ಸಂಬಂಧ ತಾಲ್ಲೂಕಿನ ಶ್ರೀಮಂಗಲ, ಹುದಿಕೇರಿ, ಕೆ.ಬಾಡಗ, ಪೊನ್ನಂಪೇಟೆ ಗ್ರಾಮ ಪಂಚಾಯಿತಿಗಳಿಗೆ ತೆರಳಿ ಸ್ಥಳ ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು, ವಿರಾಜಪೇಟೆ ತಾ.ಪಂ. ಅಧಿಕಾರಿ ಕೆ.ಸಿ.ಅಪ್ಪಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆರ್. ವೆಂಕಟೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಯತಿರಾಜ್, ಐಟಿಡಿಪಿ ತಾಲ್ಲೂಕು ಅಧಿಕಾರಿ ಗುರುಶಾಂತಪ್ಪ, ಸಿಡಿಪಿಒ ರಾಜೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ್, ರಾಜೇಶ್, ಪುಟ್ಟರಾಜು, ಪೂಣಚ್ಚ, ಸ್ಥಳೀಯ ವೈದ್ಯರು, ತಾಂತ್ರಿಕ ಸಂಯೋಜಕರಾದ ನಿರಂಜನ್, ತಾಂತ್ರಿಕ ಸಹಾಯಕ ಅಭಿಯಂತರರಾದ ಹೇಮಂತ್, ತಾಲ್ಲೂಕು ಐ.ಇ.ಸಿ.ಸಂಯೋಜಕರಾದ ನರೇಂದ್ರ ಇತರರು ಇದ್ದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network