Header Ads Widget

ಸರ್ಚ್ ಕೂರ್ಗ್ ಮೀಡಿಯ

ಡಾ.ಬಾಬು ಜಗಜೀವನ್ ರಾಂ ಅವರ 36ನೇ ಪರಿನಿರ್ವಾಣ ದಿನ


ಡಾ.ಬಾಬು ಜಗಜೀವನ್ ರಾಂ ಅವರ 36ನೇ ಪರಿನಿರ್ವಾಣ ದಿನ

ಮಡಿಕೇರಿ ಜು.06: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತೀಯ ಹರಿಕಾರ ಡಾ.ಬಾಬು ಜಗಜೀವನ್‍ರಾಂ ಅವರ 36ನೇ ಪರಿನಿರ್ವಾಣ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. 

       ನಗರದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. 

       ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶೇಖರ್, ಡಿಡಿಪಿಐ ವೇದಮೂರ್ತಿ ಇತರರು ಇದ್ದರು.