Header Ads Widget

ಸರ್ಚ್ ಕೂರ್ಗ್ ಮೀಡಿಯ

ಡಿಸಿ ಕಛೇರಿ ತಡೆಗೋಡೆ ವಿವಾದ; ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತ್ತುಗೊಳಿಸಲು ಕರವೇ ಒತ್ತಾಯ


ಡಿಸಿ ಕಛೇರಿ ತಡೆಗೋಡೆ ವಿವಾದ; ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತ್ತುಗೊಳಿಸಲು ಕರವೇ ಒತ್ತಾಯ

ಕಳಪೆ ಕಾಮಗಾರಿಯಿಂದ ಡಿಸಿ ಕಛೇರಿ ತಡೆಗೋಡೆ  ಕುಸಿಯುವ ಆತಂಕ ಎದುರಾಗಿದ್ದು ಇದರ ನಿರ್ವಹಣೆ ಹೊತ್ತ ಅಧಿಕಾರಿಗಳನ್ನು ಕೂಡಲೇ ಅಮಾನತ್ತುಗೊಳಿಸಿ ತನಿಖೆ ನಡೆಸುವಂತೆ  ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಮಡಿಕೇರಿ ತಾಲ್ಲೂಕು ಅಧ್ಯಕ್ಷ ರವಿಗೌಡ ರವರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಜಿಲ್ಲೆಯ ಜನರ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ಮಳೆ ಹಾನಿ ವಿಶೇಷ ಪರಿಹಾರದ ಏಳೂವರೆ ಕೋಟಿ ರೂಗಳನ್ನು ಅಧಿಕಾರಿಗಳು ಮತ್ತು ಗುತ್ತಿಗೆದಾರರು ದುರುಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು ಇದರ  ನಿರ್ವಹಣೆ ಹೊತ್ತ ಅಧಿಕಾರಿಗಳು  ಸಾಕ್ಷ್ಯ ನಾಶ ಪಡಿಸುವ ಸಾಧ್ಯತೆ ಇದೆ ಹಾಗೂ ಸಾರ್ವಜನಿಕರಿಗೆ  ಹಾಗೂ ಈ ಭಾಗದ ವರ್ತಕರುಗಳಿಗೆ ತೊಂದರೆ  ಉಂಟಾಗಿದ್ದು, ಈ ನಿಟ್ಟಿನಲ್ಲಿ ಸಂಭಂದ ಪಟ್ಟ ಅಧಿಕಾರಿಗಳನ್ನು ಕೂಡಲೇ ಅಮಾನತ್ತುಗೊಳಿಸಿ ಅಥವಾ ವರ್ಗಾವಣೆ ಮಾಡಿ ಉನ್ನತ ಮಟ್ಟದ ತನಿಖೆಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ರವಿಗೌಡ ಎಚ್ಚರಿಸಿದ್ದಾರೆ .