ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ
ಯುವಜನರು ದುಶ್ಚಟಕ್ಕೆ ಬಲಿಯಾಗದಿರಿ: ಕೆ.ಬಿ.ಪ್ರಸಾದ್
ಮಡಿಕೇರಿ ಜು.05: ಮಾದಕ ವಸ್ತುಗಳಿಗೆ ಯುವಜನರು ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಆ ದಿಸೆಯಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ಕಟ್ಟಿಕೊಳ್ಳುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಸಲಹೆ ಮಾಡಿದರು.
ಮುರ್ನಾಡು ವಿದ್ಯಾ ಸಂಸ್ಥೆಯಲ್ಲಿ ನಡೆದ ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆಯ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರ ಮಾತನಾಡಿದರು.
ಮನೆಯಲ್ಲಿ ಪೆÇೀಷಕರು ಮಾದಕ ವ್ಯಸನಗಳಿಗೆ ಮಕ್ಕಳು ಒಳಗಾಗುವುದರ ಬಗ್ಗೆ ಗಮನ ಹರಿಸಬೇಕು. ಮಾದಕ ವಸ್ತುಗಳ ಬಗ್ಗೆ ಕಾನೂನಿನಲ್ಲಿ ಎಲ್‍ಡಿಪಿಎಸ್ ಕಾಯ್ದೆ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸಲಾಗುತ್ತದೆ. ಮಾದಕ ವ್ಯಸನವು ವ್ಯಕ್ತಿಯನ್ನು ಹಾಳು ಮಾಡುವುದಲ್ಲದೆ ವಿವಿಧ ರೀತಿಯ ಕಾನೂನು ಬಾಹಿರ ಕೆಲಸಕ್ಕೆ ತೊಡಗಿಸಿಕೊಳ್ಳುವಂತೆ ಪ್ರಚೋದಿಸಿ ಸಮಾಜ ವಿರೋಧಿಯಂತೆ ಮಾಡುತ್ತದೆ ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಮಾತನಾಡಿ ಧೂಮಪಾನ, ಗಾಂಜಾ ಮುಂತಾದವುಗಳನ್ನು ಸೇದುವುದು, ಇಂಜೆಕ್ಷನ್ ಚುಚ್ಚಿಕೊಳ್ಳುವುದು, ಮದ್ಯ ಸೇವನೆ ಮುಂತಾದ ಅನೇಕ ಬಗೆಯ ಮಾದಕ ದ್ರವ್ಯಗಳನ್ನು ಬಳಸಲಾಗುತ್ತದೆ ಎಂದು ಅವರು ಹೇಳಿದರು.
ಒತ್ತಡಕ್ಕೆ ಒಳಗಾಗಿ, ಶೈಕ್ಷಣಿಕ ಅಥವಾ ಕ್ರೀಡೆಯಲ್ಲಿ ಹೆಚ್ಚಿನ ಸಾಧನೆ ಮಾಡಬೇಕೆಂಬ ಒಲವಿನಿಂದಲೂ ಅಥವಾ ಅವರಲ್ಲಿನ ಒತ್ತಡ ಹಾಗೂ ಸಮಸ್ಯೆಗಳನ್ನು ಮರೆಯಲೆಂದು ಮಾದಕ ದ್ರವ್ಯಗಳನ್ನು ಉಪಯೋಗಿಸಲು ಪ್ರಾರಂಭಿಸುತ್ತಾರೆ. ಇದನ್ನು ಸೇವಿಸಿದರೆ ಮಾತ್ರ ಸ್ವಾಭಾವಿಕವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಇದರ ಹೊರತಾಗಿ ಬದುಕಲು ಸಾಧ್ಯವೇ ಇಲ್ಲ ಎಂಬಷ್ಟರ ಮಟ್ಟಿಗೆ ಮಾದಕ ವಸ್ತುಗಳ ಚಟಕ್ಕೆ ಅವಲಂಬಿತರಾಗಿರುತ್ತಾರೆ ಎಂದರು.
‘ಕ್ರಮೇಣ ಡ್ರಗ್ಸ್ ಬಳಕೆಯಿಂದ ಮೆದುಳಿನ ಕ್ರಿಯೆಗಳಾದ ಕಲಿಕೆ, ತೀರ್ಪು, ನಿರ್ಧಾರ, ವರ್ತನೆ, ನಿಯಂತ್ರಣ ಮುಂತಾದವುಗಳ ನಿರ್ವಹಣೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಇದರೊಂದಿಗೆ ವ್ಯಕ್ತಿಗಳು ಕಾಲಕ್ರಮೇಣ ದುರ್ಬಲರಾಗಿ ಖಿನ್ನತೆ ಮತ್ತು ಬೇರೆ ರೀತಿಯ ಮಾನಸಿಕ ಅಸ್ವಸ್ಥತೆಗೆ ಒಳಗಾಗಬಹುದು ಎಂದು ಅವರು ಹೇಳಿದರು.’
ಮೂರ್ನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಬಾಚೇಟ್ಟಿರ ಜಿ.ಮಾದಪ್ಪ ಅವರ ಮಾತನಾಡಿ ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್ ಅವರು ಪ್ರಾಸ್ತವಿಕವಾಗಿ ಮಾತನಾಡಿದರು. ಮನೋವೈದ್ಯರಾದ ಡಾ.ಡೇವಿನ್ ಲಿನೇಕರ್ ಕರ್ಕಡ ಅವರು ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟದ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಗೋಪಿನಾಥ್, ಕಾರ್ಯದರ್ಶಿ ವೇಣು ಅಪ್ಪಣ್ಣ, ಮೂರ್ನಾಡು ವಿದ್ಯಾಸಂಸ್ಥೆ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗ ಇತರರು ಇದ್ದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network