Header Ads Widget

Responsive Advertisement

ಜಿಲ್ಲಾ ಸರ್ಕಾರಿ ಗೋಶಾಲೆಗೆ ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಭೇಟಿ


ಜಿಲ್ಲಾ ಸರ್ಕಾರಿ ಗೋಶಾಲೆಗೆ ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಭೇಟಿ

ಮಡಿಕೇರಿ: ಪಶುಸಂಗೋಪನಾ ಸಚಿವರು ಕೊಡಗು ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿದ ನಿರ್ದೇಶನದಂತೆ ಕೊಡಗು ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಶುಕ್ರವಾರ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣದ ಹಂತದಲ್ಲಿರುವ ಸರ್ಕಾರಿ ಗೋಶಾಲೆಯ ಕಾಮಗಾರಿ ಪರಿಶೀಲಿಸಿದರು.  

       ಜಿಲ್ಲಾ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಡಾ. ಸುರೇಶ್ ಭಟ್ ಹಾಗೂ ಮಡಿಕೇರಿ ತಾಲ್ಲೂಕಿನ ಪಶುಪಾಲನಾ ಇಲಾಖೆಯ  ಸಹಾಯಕ ನಿರ್ದೇಶಕರಾದ ಡಾ.ಪ್ರಸನ್ನ ಮತ್ತು ಸ್ಧಳೀಯ ಕೆ.ನಿಡುಗಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡೀನ್ ಬೋಪಣ್ಣ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇದ್ದರು.  

       ಜಿಲ್ಲಾ ಪಂಚಾಯತ್ ವತಿಯಿಂದ ಗೋಶಾಲೆಯ 8 ಎಕರೆ ಜಾಗಕ್ಕೆ ಬೇಲಿ ಹಾಕಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕ್ರಿಯಾಯೋಜನೆ ತಯಾರಿಸಿ ಅನುಮೋದಗೆ ಸಲ್ಲಿಸುವಂತೆ ಸೂಚಿಸಿದರು. 

       ಒಂದು ಲಕ್ಷ ರೂ. ಮೊತ್ತದಲ್ಲಿ ಹುಲ್ಲುಗಾವಲು ಅಭಿವೃದ್ಧಿ ಪಡಿಸಲು ಗ್ರಾಮ ಪಂಚಾಯತ್ ವತಿಯಿಂದ ನರೇಗಾ ಯೋಜನೆಯಲ್ಲಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

       ಗೋಶಾಲೆಗೆ ಸಂಪರ್ಕ ರಸ್ತೆಯನ್ನು ಪಂಚಾಯ್ತಿ ನಿಧಿಯಿಂದ ಮಾಡಿಸಿಕೊಡುವುದಾಗಿ ಗ್ರಾಮ ಪಂಚಾಯತ್ ಆಧ್ಯಕ್ಷರು ತಿಳಿಸಿದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರು ಮುಂದಿನ ಹಂತದಲ್ಲಿ ಗೋಶಾಲೆಯಲ್ಲಿ ಉತ್ಪತ್ತಿಯಾಗುವ ತ್ಯಾಜ ವಸ್ತುಗಳನ್ನು ಮೌಲ್ಯವರ್ದಿತ ಉತ್ಪನ್ನಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು ಹಾಗೂ ಗೋಶಾಲೆಯ ಸುರಕ್ಷತೆಯ ದೃಷ್ಟಿಯಿಂದ ಸಿ.ಸಿ.ಕ್ಯಾಮರಾ ಅಳವಡಿಸುವಂತೆ ಇಲಾಖೆ ಅಧಿಕಾರಿಗೆ ಸೂಚಿಸಿದರು.