Ad Code

Responsive Advertisement

ರಾಜ್ಯಪಾಲರನ್ನು ಭೇಟಿ ಮಾಡಿ ಅಭಿನಂದಿಸಿದ ಶಾಸಕರು


ರಾಜ್ಯಪಾಲರನ್ನು ಭೇಟಿ ಮಾಡಿ ಅಭಿನಂದಿಸಿದ ಶಾಸಕರು

ಮಡಿಕೇರಿ: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚುರಂಜನ್ ನಗರದ ಹೋಟೆಲ್ ವ್ಯಾಲಿ ವ್ಯೂನಲ್ಲಿ ಶುಕ್ರವಾರ ಭೇಟಿ ಮಾಡಿ ಅಭಿನಂದಿಸಿದರು.  

ಕೊಡಗು ಜಿಲ್ಲೆಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆ ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕರಾದ ಕೆ.ಜಿ.ಬೋಪಯ್ಯ ಅವರು ರಾಜ್ಯಪಾಲರಿಗೆ ಶಾಲೂ ಹೊದಿಸಿ ಅಭಿನಂದಿಸಿದರು.  


ಹಾಗೆಯೇ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಕೊಡಗಿನ ಜೇನು, ಕಾಫಿ ಪುಡಿ, ಕರಿಮೆಣಸು, ಏಲಕ್ಕಿ ನೀಡಿ, ಅಭಿನಂದಿಸಿದರು.