ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಿಗೆ ಬೀಳ್ಕೊಡುಗೆ
ಮಡಿಕೇರಿ ಜು.08: ಮಡಿಕೇರಿ ವಕೀಲರ ಸಂಘದ ವತಿಯಿಂದ ಜಿಲ್ಲೆಯಿಂದ ವರ್ಗಾವಣೆಗೊಂಡ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿನರಾಳ್ಕರ್ ಭೀಮರಾವ್ ಲಗಮಪ್ಪ ಅವರಿಗೆ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ವಕೀಲರ ಸಂಘದ ಅಧ್ಯಕ್ಷರಾದ ಕೆ.ಡಿ.ದಯಾನಂದ ಅವರು ಅಧ್ಯಕ್ಷತೆ ವಹಿಸಿ ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಅವರ ಸೇವೆಯನ್ನು ಸ್ಮರಿಸಿಕೊಂಡು ಶುಭ ಹಾರೈಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಕೋರ್ಟ್ ಕಲಾಪ ಹಾಗೂ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ವಕೀಲರು ಸಕ್ರೀಯ ಪಾತ್ರ ವಹಿಸಿದ್ದಾರೆ ಎಂದು ಮೆಚ್ಚುಗೆಯ ಮಾತನಾಡಿದರು.
ಸಮಾರಂಭದಲ್ಲಿ ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿ.ಪ್ರಶಾಂತಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎನ್.ಬಿ.ಜಯಲಕ್ಷ್ಮಿ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಕೆ.ಬಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಮುನಿರತ್ನಮ್ಮ ಸಿ.ಎನ್, ಅಪರ ಸಿವಿಲ್ ನ್ಯಾಯಾಧೀಶರಾದ ನಾಗೇಶ್ ಎನ್.ಎ. ಸಂಘದ ಖಜಾಂಚಿ ಬಿ.ಸಿ. ದೇವಿಪ್ರಸಾದ್, ಜಂಟಿ ಕಾರ್ಯದರ್ಶಿ ಎಂ.ವಿ.ಸಂಜಯ್ ರಾಜ್, ಪದಾಧಿಕಾರಿಗಳಾದ ಭಾನುಪ್ರಕಾಶ್. ಡಿ.ಕೆ.ರಾಜೇಶ್, ಸುದಯ್ ನಾಣಯ್ಯ, ಡಿ.ಎನ್.ಡೊಮಿನಿಕ್, ದಿವ್ಯಾ ನಂಜಪ್ಪ, ತಾಹ ಯಾಸೀನ್, ಚಂದನ್.ಪಿ.ಆರ್, ಲತಾಕುಮಾರಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಎಂ.ಕೆ.ಅರುಣಕುಮಾರ್ ಸ್ವಾಗತಿಸಿ, ಉಪಾಧ್ಯಕ್ಷರಾದ ಕೆ.ಎಸ್.ತಮ್ಮಯ್ಯ ಸರ್ವರನ್ನು ವಂದಿಸಿದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network