Header Ads Widget

ಸರ್ಚ್ ಕೂರ್ಗ್ ಮೀಡಿಯ

ಆ.25 ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ

ಆ.25 ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ

ಮಡಿಕೇರಿ ಆ.22: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್, 25 ರಂದು ಬೆಳಗ್ಗೆ 10.30 ಗಂಟೆಯಿಂದ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

      ಉದ್ಯೋಗ ಮೇಳದಲ್ಲಿ ಕ್ಲಬ್ ಮಹೀಂದ್ರ ರೆಸಾರ್ಟ್, ಮಡಿಕೇರಿ, ಪ್ಯಾಲೇಸ್ ಟೊಯೋಟಾ, ಮೈಸೂರು, ಕೂರ್ಗ್ ಗವದನ್ ರೆಸಾರ್ಟ್, ಮೇಕೇರಿ, ಎಸ್‍ಎಲ್‍ಎನ್ ಕಾಫಿ ಪ್ರೈ.ಲಿ., ಕೂಡಿಗೆ, ಎಲ್ ಅಂಡ್ ಟಿ ಟೆಕ್ನಾಲಜಿ ಸರ್ವೀಸಸ್, ಮೈಸೂರು, ಸಚಿನೆಡರ್ ಎಲೆಕ್ಟ್ರಿಕ್ ಇಂಡಿಯಾ ಪ್ರೈ ಲಿ., ಮೈಸೂರು ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. 

       ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಅವರು ತಿಳಿಸಿದ್ದಾರೆ.