Header Ads Widget

ಸರ್ಚ್ ಕೂರ್ಗ್ ಮೀಡಿಯ

ಆ.25 ರಂದು ದೇಶಭಕ್ತಿ ಗೀತೆ ಸ್ಪರ್ಧೆ

ಆ.25 ರಂದು ದೇಶಭಕ್ತಿ ಗೀತೆ ಸ್ಪರ್ಧೆ

ಮಡಿಕೇರಿ ಆ.22: ಪ್ರಸಕ್ತ(2022-23) ಸಾಲಿನಲ್ಲಿ ಪೊನ್ನಂಪೇಟೆ ತಾಲ್ಲೂಕು ಬಾಲಭವನ ಸಮಿತಿ ಹಾಗೂ ಪೊನ್ನಂಪೇಟೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 75ನೇ ಸ್ವಾತಂತ್ರ್ಯ ಮಹೋತ್ಸವ ಪ್ರಯುಕ್ತ 5 ರಿಂದ 16 ವರ್ಷದ ಮಕ್ಕಳಿಗೆ ಆಗಸ್ಟ್, 25 ರಂದು ಬೆಳಗ್ಗೆ 10.30 ಗಂಟೆಗೆ ಪೊನ್ನಂಪೇಟೆ ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆ ನಡೆಯಲಿದೆ. 

ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ಮತ್ತು ಪ್ರಶಂಸನಾ ಪತ್ರ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಮಕ್ಕಳು ತಮ್ಮ ಹೆಸರನ್ನು ಅಂದು ಬೆಳಗ್ಗೆ 10 ಗಂಟೆಗೆ ಪೊನ್ನಂಪೇಟೆಯ ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೋಂದಾಯಿಸಿಕೊಳ್ಳಬಹುದು. ಮೊದಲು ಬಂದ 60 ಮಕ್ಕಳಿಗೆ ಮಾತ್ರ ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ.7795732287 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.