Header Ads Widget

Responsive Advertisement

ಸಾಮಾನ್ಯ ಪದವಿ ಕೋರ್ಸಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಾಮಾನ್ಯ ಪದವಿ ಕೋರ್ಸಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ ಆ.22: ಪ್ರಸಕ್ತ (2022-23) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಇತರೆ ಜನಾಂಗಕ್ಕೆ ಸೇರಿದ ಸಾಮಾನ್ಯ ಪದವಿ ಕೋರ್ಸಿನ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 12 ಕೊನೆಯ ದಿನವಾಗಿದೆ. ಅರ್ಜಿ www.bcwd.karnataka.gov.in ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ & ಎಸ್.ಟಿ. ರೂ.2.50 ಲಕ್ಷ, ಪ್ರವರ್ಗ-2ಎ,2ಬಿ,3ಎ,3ಬಿ,ಇತರೆ ಹಿಂದುಳಿದ ವರ್ಗ ರೂ.1 ಲಕ್ಷ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಮಡಿಕೇರಿ ತಾಲ್ಲೂಕು ಕಚೇರಿ ಮೊ.ಸಂ. 8762476790, ವಿರಾಜಪೇಟೆ ತಾಲ್ಲೂಕು ಕಚೇರಿ ಮೊ.ಸಂ.9844531040, ಸೋಮವಾರಪೇಟೆ ತಾಲ್ಲೂಕು ಕಚೇರಿ ಮೊ.ಸಂ.9481772143 ಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.