Header Ads Widget

Responsive Advertisement

ಜಿಲ್ಲಾಮಟ್ಟದ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ: ಮಣ್ಣಿನ ಗಣೇಶ ಮೂರ್ತಿ ತಯಾರಿಸಿ ಸಂಭ್ರಮಿಸಿದ ಮಕ್ಕಳು


ಜಿಲ್ಲಾಮಟ್ಟದ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ: ಮಣ್ಣಿನ ಗಣೇಶ ಮೂರ್ತಿ ತಯಾರಿಸಿ ಸಂಭ್ರಮಿಸಿದ ಮಕ್ಕಳು

ಮಡಿಕೇರಿ ಆ.29: ಗೌರಿ, ಗಣೇಶ ಹಬ್ಬದ ಸಂದರ್ಭದಲ್ಲಿ ನಾಗರಿಕರು ರಾಸಾಯನಿಕ ಬಣ್ಣ ಮುಕ್ತ  ಪರಿಸರ ಸ್ನೇಹಿ ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿμÁ್ಠಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿಯ ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್ ಮನವಿ ಮಾಡಿದರು. 

ಆ.31 ರಂದು ನಡೆಯಲಿರುವ ಗೌರಿ-ಗಣೇಶ ಹಬ್ಬಕ್ಕೆ ಪೂರ್ವಭಾವಿಯಾಗಿ ಸೋಮವಾರ ಮಡಿಕೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ಇಕೋ ಕ್ಲಬ್ ಆಶ್ರಯದಲ್ಲಿ ಕೊಡಗು ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ ವತಿಯಿಂದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ ಹಾಗೂ ಮಡಿಕೇರಿ ನಗರದ ರೋಟರಿ ಮಿಸ್ಟಿಹಿಲ್ಸ್‍ನ ಸಂಯುಕ್ತಾಶ್ರಯದಲ್ಲಿ 'ನಮ್ಮ ನಡೆ ಹಸಿರೆಡೆಗೆ'- ಗೋ ಗ್ರೀನ್ ಅಭಿಯಾನದಡಿ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಯ ಜನಜಾಗೃತಿ ಅಭಿಯಾನ-2022 ದಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ನದಿ, ಕೆರೆ ಮತ್ತಿತರ ಜಲಮೂಲಗಳಿಗೆ ವಿಸರ್ಜಿಸುವುದರಿಂದ ಜಲಚರಗಳು ಸೇರಿದಂತೆ ನೀರು ಮತ್ತು ಪರಿಸರ ಮಾಲಿನ್ಯ ಉಂಟಾಗುವುದನ್ನು ತಡೆಗಟ್ಟುವ ದಿಸೆಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಸಿ ಪ್ರತಿμÁ್ಠಪಿಸಲು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಪ್ರತಿಯೊಬ್ಬರೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿμÁ್ಠಪಿಸುವ ಮೂಲಕ ಮಾಲಿನ್ಯ ತಡೆಗೆ ಸಹಕರಿಸಬೇಕು. ಗಣೇಶ ಮೂರ್ತಿಗಳನ್ನು ಆಕರ್ಷಣೀಯವಾಗಿಸಲು ಅರಿಶಿನ ಮತ್ತು ನೈಸರ್ಗಿಕ ಬಣ್ಣಗಳನ್ನು ಬಳಸಬಹುದು ಎಂದು ಪರಿಸರ ಅಧಿಕಾರಿ ರಘುರಾಮ್ ಹೇಳಿದರು.

ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್‍ನ ಜಿಲ್ಲಾ ನೋಡಲ್ ಅಧಿಕಾರಿ ಆದ ಪರಿಸರ ಕಾರ್ಯಕ್ರಮ ಸಂಘಟಕರೂ ಆದ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕøತ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಗಣೇಶ ಹಬ್ಬದ ಸಂದರ್ಭದಲ್ಲಿ ಪಿಒಪಿ ಹಾಗೂ ರಾಸಾಯನಿಕ ಮಿಶ್ರಿತ ಗಣೇಶ ಮೂರ್ತಿಯನ್ನು ಬಳಸದೇ ಪರಿಸರ ಸ್ನೇಹಿ ಹಾಗೂ ನೈಸರ್ಗಿಕವಾಗಿ ಮಣ್ಣಿನ ಮೂರ್ತಿ ತಯಾರಿಸಿ ಪ್ರತಿμÁ್ಠಪಿಸುವ ಮೂಲಕ ಮಾಲಿನ್ಯ ತಡೆಗಟ್ಟಲು ಶಾಲೆಗಳ ಇಕೋ ಕ್ಲಬ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

       ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರದೊಂದಿಗೆ ಕಳೆದ 11 ವರ್ಷಗಳಿಂದ ನಿರಂತರವಾಗಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಲಾಗುತ್ತಿದೆ ಎಂದರು.

 ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ ಮಕ್ಕಳು ಮನೆಯಲ್ಲೇ ಅರಿಶಿಣ ಗಣೇಶ ಮೂರ್ತಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ತಯಾರಿಸುವ ಮೂಲಕ ರಾಜ್ಯದ ಗಮನ ಸೆಳೆಯಲಾಗಿತ್ತು ಎಂದು ಪ್ರೇಮಕುಮಾರ್ ತಿಳಿಸಿದರು.

ಗಣೇಶೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ನಗರದ ರೋಟರಿ ಮಿಸ್ಟಿ ಹಿಲ್ಸ್‍ನ ಅಧ್ಯಕ್ಷ ಪ್ರಸಾದ್ ಗೌಡ ಮಾತನಾಡಿ, ಮಾಲಿನ್ಯ ಮುಕ್ತ ಗಣೇಶ ಹಬ್ಬ ಆಚರಣೆಗೆ ಎಲ್ಲರೂ ಪಣತೊಡಬೇಕು. ಆ ದಿಸೆಯಲ್ಲಿ ಜಿಲ್ಲೆಯಲ್ಲಿ ಪರಿಸರ ಸಂಘಟಕರಾದ ಟಿ.ಜಿ.ಪ್ರೇಮಕುಮಾರ್ ಮತ್ತು ತಂಡದವರು ಇಂತಹ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುತ್ತಿರುವುದು ಸಂತಸದ ಸಂಗತಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ ಪ್ರಾಂಶುಪಾಲರಾದ ಪಿ.ಕೆ.ನಳಿನಿ ಮಾತನಾಡಿ ಗಣೇಶೋತ್ಸವವು ನಾಡಿನ ಸಂಸ್ಕೃತಿ ಹಾಗೂ ಭಾವೈಕ್ಯತೆ ಬೆಳೆಸಲು ಸಹಕಾರಿಯಾಗಿದೆ ಎಂದರು.

ಮಕ್ಕಳು ಮನೆಯಲ್ಲಿ ಸಂಭ್ರಮದಿಂದ ಸ್ವತಃ ಮಣ್ಣಿನಿಂದ ಉತ್ತಮವಾಗಿ ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಪರಿಸರ ಸಂರಕ್ಷಣೆಗೆ ಸಹಕಾರಿಯಾಗಿದೆ ಎಂದರು.

ನಂತರ ನಡೆದ ಗಣೇಶ ಮೂರ್ತಿಗಳ ಪ್ರದರ್ಶನದಲ್ಲಿ ಮಕ್ಕಳೊಂದಿಗೆ ಪಾಲ್ಗೊಂಡು ಮಾತನಾಡಿದ ಡಿಡಿಪಿಐ ವೇದಮೂರ್ತಿ, ಈ ಬಾರಿ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಮಕ್ಕಳು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರು ಮಾಡುವ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸುತ್ತಿರುವುದು ಸಂತಸ ತಂದಿದೆ ಎಂದರು.

ಇಕೋ ಕ್ಲಬ್‍ನ ಉಸ್ತುವಾರಿ ಶಿಕ್ಷಕಿ ಐ.ಜೆ. ಜನೆಟ್, ಮಕ್ಕಳು ಗಣೇಶ ಮೂರ್ತಿ ತಯಾರಿಸಿದ ಕುರಿತು ಮಾಹಿತಿ ನೀಡಿದರು. ರೋಟರಿ ಮಿಸ್ಟಿ ಹಿಲ್ಸ್ ನ ಕಾರ್ಯದರ್ಶಿ ಪ್ರಮೋದ್ ಕುಮಾರ್ ರೈ ಹಾಗೂ ಸ್ಕೌಟ್ಸ್ ಸಂಸ್ಥೆಯ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ ಬಹುಮಾನ ವಿತರಿಸಿದರು.

ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಇಕೋ ಕ್ಲಬ್‍ನ ಶಿಕ್ಷಕಿ ಐ.ಜೆ. ಜನೆಟ್, ಎನ್‍ಸಿಸಿ ಅಧಿಕಾರಿ ಎಂ.ಎಸ್ ಚಂದ್ರಿಕಾ, ಪರಿಸರ ಕಾರ್ಯಕರ್ತ ಸಾಗರ್ ತೊರೆನೂರು, ಶಿಕ್ಷಕಿಯರಾದ ಐರಿನ್ ಉμÁ, ಸೌಮ್ಯಲತಾ, ಬಿ.ಪಿ.ಮಂದಾಕಿನಿ, ಸುಜಾತ, ಮಕ್ಕಳು ಗಣೇಶ ಮೂರ್ತಿ ತಯಾರಿಸಲು ಸಹಕರಿಸಿದರು.

ವಿದ್ಯಾರ್ಥಿನಿ ಮಮತ ಕಾಳು ಮಿಶ್ರಣದೊಂದಿಗೆ ಜೇಡಿಮಣ್ಣಿನಿಂದ ತಯಾರಿಸಿದ್ದ ಗಣೇಶ ಮೂರ್ತಿ ಗಮನ ಸೆಳೆಯಿತು. ವಿದ್ಯಾರ್ಥಿಗಳು ಅರಿಶಿಣ ಮತ್ತು ಜೇಡಿಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳು ಪ್ರೇಕ್ಷಕರ ಗಮನ ಸೆಳೆದವು.