Header Ads Widget

ಸರ್ಚ್ ಕೂರ್ಗ್ ಮೀಡಿಯ

‘ವೀಕ್ಷಣಾ ಸಭಾಂಗಣ (ಗ್ಯಾಲರಿ)’ ನಿರ್ಮಾಣದ ಕಾಮಗಾರಿ ಕೈಗೊಳ್ಳುವ ಸಂಬಂಧ ಶಾಸಕರಿಂದ ಸ್ಥಳ ಪರಿಶೀಲನೆ


‘ವೀಕ್ಷಣಾ ಸಭಾಂಗಣ (ಗ್ಯಾಲರಿ)’ ನಿರ್ಮಾಣದ ಕಾಮಗಾರಿ ಕೈಗೊಳ್ಳುವ ಸಂಬಂಧ ಶಾಸಕರಿಂದ ಸ್ಥಳ ಪರಿಶೀಲನೆ

ಮಡಿಕೇರಿ ಆ.26: ನಗರದ ಗಾಂಧಿ ಮೈದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಭೆ ಸಮಾರಂಭಗಳಲ್ಲಿ ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಲು ‘ವೀಕ್ಷಣಾ ಸಭಾಂಗಣ (ಗ್ಯಾಲರಿ)’ ನಿರ್ಮಾಣದ ಕಾಮಗಾರಿ ಕೈಗೊಳ್ಳುವ ಸಂಬಂಧ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಶುಕ್ರವಾರ ಪರಿಶೀಲಿಸಿದರು. ಕಾಮಗಾರಿ ಸಂಬಂಧ ಹಲವು ಸಲಹೆ ಸೂಚನೆ ನೀಡಿದರು.  

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮೇಶ್ ಸುಬ್ರಮಣಿ, ಮಹೇಶ್ ಜೈನಿ, ಸತೀಶ್, ಅಪ್ಪಣ್ಣ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಇತರರು ಇದ್ದರು.