Header Ads Widget

ಸರ್ಚ್ ಕೂರ್ಗ್ ಮೀಡಿಯ

ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಮಡಿಕೇರಿ ಆ.22(ಕರ್ನಾಟಕ ವಾರ್ತೆ):-ಪ್ರಸಕ್ತ(2022-23) ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ಸ್ವಯಂ ಉದ್ಯೋಗ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ವೆಬ್‍ಸೈಟ್ ವಿಳಾಸ  https://suvidha.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. 

ಹೆಚ್ಚಿನ ಮಾಹಿತಿಗೆ ನಿಗಮಗಳ ವೆಬ್‍ಸೈಟ್ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ https://adcl.karnataka.gov.in, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ https://adijambava.karnataka.gov.in ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ https://www.kbdc.karnataka.gov.in  ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ https://ksskdc.kar.nic.in,ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ https://banjarathanda.kar.nic.in/ ನ್ನು ಸಂಪರ್ಕಿಸಬಹುದು. 

ಫಲಾಪೇಕ್ಷಿಗಳು ಆನ್‍ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾಂಶದ ವೆಬ್‍ಸೈಟ್ ವಿಳಾಸ https://suvidha.karnataka.gov.in  ಮೂಲಕ ಅಪ್‍ಲೋಡ್ ಮಾಡಲು ಆಗಸ್ಟ್, 31 ರವರೆಗೆ ಅವಧಿ ವಿಸ್ತರಿಸಲಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-571201 ದೂ.ಸಂ. 08272-228857 ನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಚಂದ್ರಶೇಖರ್ ತಿಳಿಸಿದ್ದಾರೆ.