Header Ads Widget

ಸರ್ಚ್ ಕೂರ್ಗ್ ಮೀಡಿಯ

ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ 

ಮಡಿಕೇರಿ ಆ.22: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಬೆಂಗಳೂರು, ಇವರು ವಿವಿಧ ವೃತ್ತಿಗಳಲ್ಲಿ ಐಟಿಐ ಪಾಸಾದ ಅರ್ಹ ಅಭ್ಯರ್ಥಿಗಳಿಂದ ‘ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 

ಈ ಅಪ್ರೆಂಟಿಷಿಪ್ ತರಬೇತಿಯ ಅರ್ಜಿ ನಮೂನೆಗಳನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇಲ್ಲಿಂದ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು www.hal-india.com ರಿಂದ ಪಡೆಯಬಹುದು. ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇಲ್ಲಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು  ಸೆಪ್ಟೆಂಬರ್, 05 ರೊಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇಲ್ಲಿಗೆ ಸಲ್ಲಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಅವರು ತಿಳಿಸಿದ್ದಾರೆ.