ಮಡಿಕೇರಿ ನಗರದ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವಕರ್ಮ ಜಯಂತಿ ಆಚರಣೆ
ವಿಶ್ವಕರ್ಮರು ಭಾರತೀಯ ಸಂಸ್ಕøತಿಯ ಪ್ರತೀಕ: ಕೆ.ಜಿ.ಬೋಪಯ್ಯ
ಮಡಿಕೇರಿ ಸೆ.17: ವಿಶ್ವಕರ್ಮ ಎಂದರೆ ಸೃಷ್ಟಿಯ ಕರ್ತ. ಸೃಷ್ಟಿಯು ದೇವತೆಯ ಮುಹೂರ್ತ ರೂಪವಾಗಿದೆ. ಸೃಷ್ಟಿಕರ್ತ ಮೂಲ ವಿಶ್ವಕರ್ಮವಾಗಿದೆ. ಆ ನಿಟ್ಟಿನಲ್ಲಿ ವಿಶ್ವಕರ್ಮ ಭಾರತೀಯ ಸಂಸ್ಕøತಿಯ ಪ್ರತೀಕವಾಗಿದೆ ಎಂದು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವಕರ್ಮ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿಶ್ವಕರ್ಮ ಸಮಾಜಕ್ಕೆ ತನ್ನದೇ ಆದ ಚಾರಿತ್ರಿಕ ಹಿನ್ನೆಲೆ ಇದೆ. ವೇದ, ಋಗ್ವೇದ ಕಾಲದಿಂದಲೂ ಸಮಾಜಕ್ಕೆ ವಿಶ್ವಕರ್ಮರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು.
ವಿಶ್ವಕರ್ಮ ಸಮಾಜವು ಹಿಂದೂ ಸಮಾಜಕ್ಕೆ ಅನೇಕ ಕೊಡುಗೆ ನೀಡಿದೆ. ಅನೇಕತೆಯಲ್ಲಿ ಏಕತೆ ಹೊಂದಿರುವುದೇ ವೈಶಿಷ್ಟ್ಯವಾಗಿದೆ ಎಂದು ನುಡಿದರು.
ಸಮಾಜದಲ್ಲಿ ಅಭಿವೃದ್ಧಿ ಮತ್ತು ಬದಲಾವಣೆ ಅನಿವಾರ್ಯ. ಆ ನಿಟ್ಟಿನಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು. ನಿಗಮದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತಾಗಬೇಕು ಎಂದು ಶಾಸಕರು ಹೇಳಿದರು.
ನರೇಂದ್ರ ಮೋದಿ ಅವರು ಹುಟ್ಟಿದ ದಿನದಂದು ವಿಶ್ವಕರ್ಮ ಜಯಂತಿಯನ್ನು ಆಚರಿಸುತ್ತಿರುವುದು ವಿಶಿಷ್ಟವಾಗಿದೆ. ಇಡೀ ವಿಶ್ವದಲ್ಲಿ ಸಮರ್ಥ ಆಡಳಿತವನ್ನು ಪ್ರಧಾನಮಂತ್ರಿ ಅವರು ನೀಡುತ್ತಿದ್ದಾರೆ. ಸ್ವಾವಲಂಬಿ ಭಾರತ ಆಗಬೇಕು. ಆ ದಿಸೆಯಲ್ಲಿ ಪ್ರತಿಯೊಬ್ಬರೂ ಸ್ವಾವಲಂಬಿಯಾಗಿ ಬದುಕುವಂತಾಗಬೇಕು ಎಂದು ಕೆ.ಜಿ.ಬೋಪಯ್ಯ ಅವರು ವಿವರಿಸಿದರು.
ಕೋಟೇಕಾರು ಗೋಸೇವಾಶ್ರಮ ಟ್ರಸ್ಟ್‍ನ ಅಧ್ಯಕ್ಷರಾದ ಯೋಗಾಚಾರ್ಯ ಶ್ರೀ ಪುಂಡರೀಕಾಕ್ಷ ಬೆಳ್ಳೂರು ಅವರು ಮಾತನಾಡಿ ವಿಶ್ವ ಎಂದರೆ ಜಗತ್ತು, ಆದ್ದರಿಂದ ವಿಶ್ವಕರ್ಮ ಜಗತ್ತು, ಜಗತ್ತನ್ನು ಸೃಷ್ಟಿ ಮಾಡಿದವರೇ ವಿಶ್ವಕರ್ಮ. ಯುಗ ಯುಗ ಕಳೆದರೂ ಸಮಾಜ ಬದಲಾವಣೆ ಹೊಂದುತ್ತದೆ. ವಿಶ್ವಕರ್ಮವು ಒಂದು ಜಾತಿ ಸಮುದಾಯಕ್ಕೆ ಸೇರಿದಲ್ಲ. ಎಲ್ಲರೂ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತದ್ದು ಎಂದರು.
ವಿಷ್ಣು ಪುರಾಣದಲ್ಲಿ ವಿಶ್ವಕರ್ಮರ ಬಗ್ಗೆ ವಿವರಿಸಲಾಗಿದೆ. ಸಮಾಜದ ಬಗ್ಗೆ ತಿಳಿಯಬೇಕಾದರೆ ಜಕಣಾಚಾರ್ಯ ಶಿಲ್ಪಿ ಅವರನ್ನು ಮರೆಯುವಂತಿಲ್ಲ ಎಂದರು.
ಜಗತ್ತಿಗೆ ಎಲ್ಲವನ್ನೂ ನೀಡಿದ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ. ವಿಶ್ವಕರ್ಮರು ಕುಲಕಸುಬು ಮಾಡುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು. ಸ್ವಾವಲಂಬಿ ಬದುಕು ನಡೆಸುವಂತಾಗಬೇಕು ಎಂದು ಅವರು ಹೇಳಿದರು.
ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ ಅವರು ಮಾತನಾಡಿ ವಿಶ್ವಕರ್ಮರು ದೇವಲೋಕದ ಶಿಲ್ಪಿ ಎಂದರೆ ತಪ್ಪಾಗಲಾರದು. ಆ ನಿಟ್ಟಿನಲ್ಲಿ ವಿಶ್ವಕರ್ಮ ಸಮಾಜದ ಬಂದುಗಳು ಮುಖ್ಯವಾಹಿನಿಗೆ ಬರಬೇಕು ಎಂದು ಅವರು ಕರೆ ನೀಡಿದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಕಲೆ, ಸಂಸ್ಕøತಿಗೆ ವಿಶ್ವಕರ್ಮ ಸಮಾಜ ತಮ್ಮದೇ ಆದ ಕೊಡುಗೆ ನೀಡಿರುವುದನ್ನು ಮರೆಯುವಂತಿಲ್ಲ ಎಂದರು.
ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ದೇವದಾಸ್ ಅವರು ಮಾತನಾಡಿ ವಿಶ್ವಕರ್ಮ ಅಭಿವೃದ್ಧಿ ನಿಗಮದಿಂದ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಕೋರಿದರು.
ವಿಶ್ವಕರ್ಮ ಸಮುದಾಯದ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕರಾದ ಎಚ್.ಎನ್.ಸುಬ್ರಮಣಿ ಅವರು ಮಾತನಾಡಿ ನಿಗಮದಿಂದ ಸಮಾಜದ ಯುವಜನರು ಹಲವು ಸೌಲಭ್ಯ ಪಡೆಯಲು ಅವಕಾಶವಿದ್ದು, ಅದನ್ನು ಬಳಸಿಕೊಳ್ಳುವಂತೆ ಕೋರಿದರು.
ತಹಶೀಲ್ದಾರ್ ಪಿ.ಎಸ್.ಮಹೇಶ್, ವಿಶ್ವಕರ್ಮ ಸಮಾಜ ಸೇವಾ ಸಂಘದ ತಾಲ್ಲೂಕು ಅಧ್ಯಕ್ಷರಾದ ಬಿ.ಜಗದೀಶ್ ಆಚಾರ್ಯ, ವಿಶ್ವಕರ್ಮ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಾಗರಾಜು, ವಿಶ್ವಕರ್ಮ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ವಿದ್ಯಾಲತಾ ಇತರರು ಇದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಸ್ವಾಗತಿಸಿದರು, ವಿಶ್ವಕರ್ಮ ಮಹಿಳಾ ಒಕ್ಕೂಟದ ಸದಸ್ಯರು ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿದರು. ಪ್ರಕಾಶ್ ಆಚಾರ್ಯ ವಂದಿಸಿದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network