ಮಾಯಮುಡಿ ಕೋಲುಬಾಣೆ ಕಾವೇರಿ ಅಸೋಸಿಯೇಷನ್ ವತಿಯಿಂದ ನಡೆದ ಕೈಲ್ ಮುಹೂರ್ತ ಕ್ರೀಡಾಕೂಟ
ಮಾಯಮುಡಿ ಕೋಲುಬಾಣೆಯ ಕಾವೇರಿ ಅಸೋಸಿಯೇಷನ್ ವತಿಯಿಂದ ಕೈಲ್ ಪೊಳ್ದ್ ಹಬ್ಬದ ಪ್ರಯುಕ್ತ ಕ್ರೀಡಾಕೂಟ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.
ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಹೆಚ್ಚಾಗಲಿದೆ ಎಂದರು.
ಆರೋಗ್ಯ ವೃದ್ಧಿ ಹಾಗೂ ಶಿಸ್ತಿನ ಜೀವನಕ್ಕೆ ಕ್ರೀಡೆ ಸಹಕಾರಿಯಾಗಿದ್ದು, ಕೊಡಗಿನ ಮೂಲ ಸಂಸ್ಕೃತಿಯೊಂದಿಗೆ ಕ್ರೀಡಾಕೂಟಗಳು ಕೂಡ ಉನ್ನತ ಸ್ಥಾನವನ್ನು ಪಡೆದುಕೊಂಡಿರುವುದು ಹೆಮ್ಮೆಯ ವಿಚಾರವೆಂದು ತಿಳಿಸಿದರು.
ಮಹಿಳೆಯರ ವಿಭಾಗದಲ್ಲಿ ಎಸ್.ಎಂ.ಚಂದ್ರಿಕ ಮಂಜುನಾಥ್ ಪ್ರಥಮ, ಎಸ್.ಎಂ.ಪ್ರೇಕ್ಷ ದ್ವಿತೀಯ ಹಾಗೂ ಕಾಳಪಂಡ ಬಿ.ಲತಾ ಬಿದ್ದಪ್ಪ ತೃತೀಯ ಬಹುಮಾನ ಪಡೆದರು.
ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪ್ರತಿನಿಧಿಸಿ ಭಾರತ ತಂಡವನ್ನು ಮುನ್ನಡೆಸಿದ ಅರುಣ್ ಮಾಚಯ್ಯ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network