Header Ads Widget

ಸರ್ಚ್ ಕೂರ್ಗ್ ಮೀಡಿಯ

ಶ್ರಮಿಕ್ ಸಂಜೀವಿನಿ ಸಂಚಾರಿ ಆರೋಗ್ಯ ಘಟಕ ವಾಹನಕ್ಕೆ ಕೆ.ಜಿ.ಬೋಪಯ್ಯ ಚಾಲನೆ


ಶ್ರಮಿಕ್ ಸಂಜೀವಿನಿ ಸಂಚಾರಿ ಆರೋಗ್ಯ ಘಟಕ ವಾಹನಕ್ಕೆ ಕೆ.ಜಿ.ಬೋಪಯ್ಯ ಚಾಲನೆ

ಮಡಿಕೇರಿ ಅ.01: ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮಹತ್ವಾಕಾಂಕ್ಷಿ ಯೋಜನೆಯಾದ ಶ್ರಮಿಕ್ ಸಂಜೀವಿನಿ ಸಂಚಾರಿ ಆರೋಗ್ಯ ಘಟಕ ವಾಹನವನ್ನು ಶಾಸಕರಾದ ಕೆ.ಜಿ.ಬೋಪಯ್ಯ ಅವರು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮೇಕೇರಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಚಾಲನೆ ನೀಡಿದರು.  

ಬಳಿಕ ಮಾತನಾಡಿ ಪ್ರತಿಯೊಬ್ಬ ನೋಂದಾಯಿತ ಕಾರ್ಮಿಕರು ತಮ್ಮ ಅವಲಂಬಿತರ ಸಮೇತ ಬಂದು ಶ್ರಮಿಕ್ ಸಂಜೀವಿನಿ ಸಂಚಾರಿ ಆರೋಗ್ಯ ಘಟಕದ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು. 

ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ, ಇಲಾಖೆಯ ಸಿಬ್ಬಂದಿಗಳಾದ ಜರೀನಾ, ಪ್ರಸನ್ನ, ರಕ್ಷಿತ ಮತ್ತು ಸಂಚಾರಿ ಆರೋಗ್ಯ ಘಟಕದ ನಿರ್ವಹಣಾ ಸಂಸ್ಥೆಯಾದ ಬ್ಲೋಸಮ್ ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ಸಿಬ್ಬಂದಿಗಳು, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವರ ಅವಲಂಬಿತರು ಹಾಜರಿದ್ದರು.