ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು ಸೇರಿದಂತೆ ಎಲ್ಲರೂ ಯೋಜನೆಗಳು ಮತ್ತು ಅವುಗಳ ಅಪೇಕ್ಷಣೀಯತೆ ಅರ್ಥಮಾಡಿಕೊಳ್ಳಲು ಈ ಕೈಪಿಡಿ ಸಹಾಯ ಮಾಡುತ್ತದೆ, ಅಲ್ಲದೆ ಇದು ಪಾರದರ್ಶಕತೆ ಮತ್ತು ಸಾರ್ವಜನಿಕ ಭಾಗವಹಿಸುವಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ: ಶ್ರೀ ಗಿರಿರಾಜ್ ಸಿಂಗ್
ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಶ್ರೀ ಗಿರಿರಾಜ್ ಸಿಂಗ್ ಅವರು "ಗ್ರಾಮೀಣಾಭಿವೃದ್ಧಿಗಾಗಿ ಪಂಚಾಯತ್ ರಾಜ್ ಸಂಸ್ಥೆಗಳ ಸದಸ್ಯರಿಗೆ ಕಾರ್ಯಸೂಚಿ" ಎಂಬ ಕೈಪಿಡಿಯನ್ನು ಅನಾವರಣಗೊಳಿಸಿದರು. ಈ ಕೈಪಿಡಿಯ ಮೂಲಕ, MGNREGA, ದೀನ್ ದಯಾಳ್ ಅಂತ್ಯೋದಯ ಯೋಜನೆ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್, ಮುಂತಾದ ಯೋಜನೆಗಳ ಬಗ್ಗೆ ಮಾಹಿತಿ, ಪ್ರಧಾನಮಂತ್ರಿ ಆವಾಸ್ ಯೋಜನೆ- ಗ್ರಾಮೀಣ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಇತ್ಯಾದಿಗಳ ಬಗ್ಗೆ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರಿಗೆ ಮಾಹಿತಿ ಲಭ್ಯವಾಗುತ್ತದೆ. ಈ ಕೈಪಿಡಿಯನ್ನು ಶೀಘ್ರದಲ್ಲೇ ಪ್ರಾದೇಶಿಕ ಭಾಷೆಗಳಲ್ಲಿ ತರ್ಜುಮೆಗೊಳಿಸಲಾಗುವುದು.
ದೇಶದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಈ ಕೈಪಿಡಿ ಲಭ್ಯವಾಗಲಿದ್ದು, ಗ್ರಾಮ ಪಂಚಾಯಿತಿಗಳ ಸದಸ್ಯರ ಮಧ್ಯೆ ಗ್ರಾಮೀಣಾಭಿವೃದ್ಧಿ ಸಚಿವಾಲಯದ ವಿವಿಧ ಯೋಜನೆಗಳ ಕುರಿತು ಅರ್ಥಪೂರ್ಣ ಚರ್ಚೆಗೆ ಇದು ಅವಕಾಶ ಕಲ್ಪಿಸಲಿದೆ ಎಂದು ಸಚಿವರು ತಿಳಿಸಿದರು. ಈ ಕೈಪಿಡಿ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರು ಸೇರಿದಂತೆ ಪ್ರತಿಯೊಬ್ಬರಿಗೂ ಯೋಜನೆಗಳು ಮತ್ತು ಅವರ ಕಾರ್ಯಕ್ಷಮತೆ ಬಗ್ಗೆ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ, ಇದು ಪಾರದರ್ಶಕತೆ ಮತ್ತು ಸಾರ್ವಜನಿಕ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದರು.
ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತ ಸರ್ಕಾರದ ಅಧಿಕಾರಿಗಳಿಗೆ ಈ ಕೈಪಿಡಿ ಸಹಕಾರಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ಕಾರ್ಯದರ್ಶಿ, ಶೇ. ಎನ್.ಎನ್.ಸಿನ್ಹಾ ಹೇಳಿದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network