Header Ads Widget

ಸರ್ಚ್ ಕೂರ್ಗ್ ಮೀಡಿಯ

ಡಿಸೆಂಬರ್‌ 7 ರಂದು ಮಡಿಕೇರಿಯ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಆವರಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಡಿಸೆಂಬರ್‌ 7 ರಂದು ಮಡಿಕೇರಿಯ ಹೆಚ್.ಡಿ.ಎಫ್.ಸಿ. ಬ್ಯಾಂಕ್  ಆವರಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹೆಚ್.ಡಿ.ಎಫ್.ಸಿ. ಬ್ಯಾಂಕ್ ಮಡಿಕೇರಿ ಹಾಗೂ ಕೊಡಗು ಜಿಲ್ಲಾ ರಕ್ತ ನಿಧಿ ಕೇಂದ್ರ ಮಡಿಕೇರಿ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 07-12-2022ರ ಬುಧವಾರದಂದು ಮಡಿಕೇರಿಯ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಆವರಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.

ಬೆಳ್ಳಿಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯುವ ಈ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಲಿಚ್ಚಿಸುವ ದಾನಿಗಳು ಭಾಗವಹಿಸಿ ರಕ್ತದಾನ ಮಾಡಬಹುದಾಗಿದೆ ಎಂದು ಹೆಚ್.ಡಿ.ಎಫ್.ಸಿ. ಬ್ಯಾಂಕ್ ಮಡಿಕೇರಿ ಇವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಪರಿಣಮಿಸುತ್ತಿರುವ ಅಪಘಾತಗಳು ಹಾಗೂ ಉದ್ಭವಿಸುತ್ತಿರುವ ಕಾಯಿಲೆಗಳನ್ನು ಪರಿಗಣಿಸಿದಾಗ ರಕ್ತದ ಅವಶ್ಯಕತೆ ಹೆಚ್ಚಾಗಿರುವುದು ಕಂಡು ಬರುತ್ತದೆ. ರಕ್ತದ ಬೇಡಿಕೆಯೂ ಹೆಚ್ಚಿರುತ್ತದೆ. ಅಂತಹ ಸಂದರ್ಭದಲ್ಲಿ ಸಂಗ್ರಹಿಸಿಟ್ಟ ರಕ್ತದಿಂದ ರೋಗಿಯ ಜೀವ ಉಳಿಸಲು ಸಾಧ್ಯವಾಗುತ್ತದೆ

"ರಕ್ತದಾನವೇ ಎಲ್ಲಾ ದಾನಗಳಿಗಿಂತಲೂ ಶ್ರೇಷ್ಠದಾನವಾಗಿದೆ. ಇದು ಅನೇಕ ಜೀವಗಳನ್ನು ಉಳಿಸಲು ಸಹಾಯಕವಾಗಿದೆ. ಜೀವ ಇದ್ದರೆ ನಾವು ಎಲ್ಲ ದಾನಗಳನ್ನು ಮಾಡಲು ಸಾಧ್ಯ."