ಗೃಹರಕ್ಷಕರ ದಿನಾಚರಣೆ ಕಾರ್ಯಕ್ರಮ; ಗೃಹರಕ್ಷಕರ ಕರ್ತವ್ಯಕ್ಕೆ ಗಣ್ಯರಿಂದ ಶ್ಲಾಘನೆ
ಮಡಿಕೇರಿ ಡಿ.20: ಕಾನೂನು ಸುವ್ಯವಸ್ಥೆ ಕಾಪಾಡುವುದು, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ತರನ್ನು ರಕ್ಷಣೆ ಮಾಡುವುದು, ವಾಹನ ಸಂಚಾರ ದಟ್ಟಣೆ ನಿಯಂತ್ರಣ ಮಾಡುವುದು, ಜಾತ್ರೆ ಸಂದರ್ಭದಲ್ಲಿ ಸೂಕ್ತ ಭದ್ರತೆ ಒದಗಿಸುವುದು ಹೀಗೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿರುವ ಗೃಹ ರಕ್ಷಕರ ಕರ್ತವ್ಯ ಪ್ರಶಂಸನೀಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೆಗೌಡ ಅವರು ತಿಳಿಸಿದ್ದಾರೆ.
ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಲ್ಲಿ ಕೊಡಗು ಗೃಹರಕ್ಷಕ ದಳ ವತಿಯಿಂದ ನಡೆದ ಗೃಹರಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ಮಡಿಕೇರಿ ತಾಲ್ಲೂಕು ಉಪ ಪೊಲೀಸ್ ವರಿಷ್ಠಾಧಿಕಾರಿ ಜಿ.ಎಸ್.ಗಜೇಂದ್ರ ಪ್ರಸಾದ್ ಅವರು ಮಾತನಾಡಿ ಗೃಹ ರಕ್ಷಕದಳದವರು ವಹಿಸಿದ ಕೆಲಸವನ್ನು ನಿಷ್ಠೆಯಿಂದ ನಿರ್ವಹಿಸುತ್ತಾರೆ. ಗುರುತರ ಜವಾಬ್ದಾರಿಯನ್ನು ನಿಭಾಯಿಸುತ್ತಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಗೃಹ ಇಲಾಖೆಯ ವ್ಯಾಪ್ತಿಯಲ್ಲಿ ಗೃಹರಕ್ಷಕ ದಳ ಕಾರ್ಯನಿರ್ವಹಿಸುತ್ತಿದೆ. ಗೃಹರಕ್ಷಕದಳದವರು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು. ಸರ್ಕಲ್ ಇನ್ಸ್‍ಪೆಕ್ಟರ್ ಶಿವಶಂಕರ ಇತರರು ಇದ್ದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network