Header Ads Widget

ಸರ್ಚ್ ಕೂರ್ಗ್ ಮೀಡಿಯ

ಜಿಲ್ಲಾ ಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವದ ವಸ್ತು ಪ್ರದರ್ಶನ; ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಪಾರಾಣೆ ಪ್ರೌಢಶಾಲೆಯ ವಿದ್ಯಾರ್ಥಿಗಳು

ಜಿಲ್ಲಾ ಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವದ ವಸ್ತು ಪ್ರದರ್ಶನ; ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಪಾರಾಣೆ ಪ್ರೌಢಶಾಲೆಯ ವಿದ್ಯಾರ್ಥಿಗಳು 

ಮೂರ್ನಾಡು : ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೊಡಗು ಜಿಲ್ಲಾ ವೃತ್ತಿ ಶಿಕ್ಷಣ ಶಿಕ್ಷಕ ಸಂಘದ ವತಿಯಿಂದ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವದ ವಸ್ತು ಪ್ರದರ್ಶನದಲ್ಲಿ ಪಾರಾಣೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ವೃತ್ತಿ ಶಿಕ್ಷಣ ಶಿಕ್ಷಕ ಎಚ್. ಎಲ್. ಬೈರ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಸ್ತು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು.