Header Ads Widget

Responsive Advertisement

ಅಂಭಾಭವಾನಿ ಯುವಕ, ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದಿಂದ ಗ್ರಾಮೀಣ ಕ್ರೀಡಾಕೂಟ


ಅಂಭಾಭವಾನಿ ಯುವಕ, ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದಿಂದ ಗ್ರಾಮೀಣ ಕ್ರೀಡಾಕೂಟ

ಮಡಿಕೇರಿ:  ಕೊಡಗು ಜಿಲ್ಲಾ ಅಂಭಾಭವಾನಿ ಯುವಕ, ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘ ತಾಳತ್ತಮನೆ ವತಿಯಿಂದ ಜ.1 ರಂದು 8ನೇ ವಾರ್ಷಿಕ ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ, ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 9 ಗಂಟೆಗೆ ಮಡಿಕೇರಿಯ ಫೀ.ಮಾ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.

ಪುರುಷರಿಗೆ ಕಬ್ಬಡ್ಡಿ, ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್, ಪುರುಷರು ಹಾಗೂ ಮಹಿಳೆಯರಿಗೆ ಹಗ್ಗಜಗ್ಗಾಟ, ಬಾರದಗುಂಡು ಎಸೆತ, 100 ಮೀ. ಓಟ, ಬಾಂಬ್ ಇನ್ ದ ಸಿಟಿ, ಗೋಣಿಚೀಲದ ಓಟ, ಬಾಟಲಿಗೆ ನೀರು ತುಂಬಿಸುವ ಸ್ಪರ್ಧೆ, ಮಹಿಳೆಯರಿಗೆ ಹಾಗೂ ಹೆಣ್ಣುಮಕ್ಕಳಿಗೆ ನಿಂಬೆ ಚಮಚ, ಸೂಜಿ ನೂಲು ಓಟ, 5 ರಿಂದ 7 ವರ್ಷದ ಬಾಲಕ, ಬಾಲಕಿಯರಿಗೆ 50 ಮೀಟರ್ ಓಟ, 8 ರಿಂದ 10 ವರ್ಷದ ಬಾಲಕ, ಬಾಲಕಿಯರಿಗೆ 50 ಮೀ. ಓಟ, 11 ರಿಂದ 15 ವರ್ಷದ ಬಾಲಕ, ಬಾಲಕಿಯರಿಗೆ 100 ಮೀ. ಓಟದ ಸ್ಪರ್ಧೆ ನಡೆಯಲಿದೆ.

50 ವರ್ಷ ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ 100 ಮೀ. ಓಟ, 16 ರಿಂದ 20 ವರ್ಷದ ಬಾಲಕ, ಬಾಲಕಿಯರಿಗೆ 200 ಮೀ. ಓಟ, 21 ವರ್ಷ ಮೇಲ್ಪಟ್ಟ ಯುವತಿಯರಿಗೆ 200 ಮೀ ಓಟ, ಯುವಕರಿಗೆ 400 ಮೀ ಓಟದ ಸ್ಪರ್ಧೆ ನಡೆಯಲಿದ್ದು, 8 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಕಪ್ಪೆಜಿಗಿತ, 50 ಮೀ. ಓಟ, 5 ವರ್ಷ ಕೆಳಗಿನ ಮಕ್ಕಳಿಗೆ ಕಾಳು ಹೆಕ್ಕುವುದು, ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಹಾಗೂ ಹಿರಿಯ ನಾಗರೀಕರಿಗೆ ಬಕೆಟ್‍ಗೆ ಬಾಲ್ ಹಾಕುವ ಸ್ಪರ್ಧೆ ನಡೆಯಲಿದೆ.

ಸಂಘದ ಸದಸ್ಯತ್ವ ಪಡೆದವರಿಗೆ ಮಾತ್ರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರು ಸ್ವಜಾತಿ ಎಂಬುದನ್ನು ದೃಢಪಡಿಸಬೇಕು. ಕಬ್ಬಡ್ಡಿ, ವಾಲಿಬಾಲ್, ಥ್ರೋಬಾಲ್ ಮತ್ತು ಹಗ್ಗಜಗ್ಗಾಟ ಸ್ಪರ್ಧೆಗೆ ಶುಲ್ಕ ವಿಧಿಸಲಾಗಿದೆ. ಕಬ್ಬಡ್ಡಿ ಪಂದ್ಯಾವಳಿಗೆ ರೂ.800 ಮೈದಾನ ಶುಲ್ಕ ನಿಗಧಿಪಡಿಸಲಾಗಿದ್ದು, ಡಿ.30 ರೊಳಗೆ ನೋಂದಾಯಿಸಿಕೊಳ್ಳುವಂತೆ ಆಡಳಿತ ಮಂಡಳಿ ಕೋರಿದೆ.

ಕ್ರೀಡಾಕೂಟಕ್ಕೆ ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ಕೋಶಾಧಿಕಾರಿ ಎಂ.ಎಸ್.ಕಾಂತಿ ಚಾಲನೆ ನೀಡಲಿದ್ದಾರೆ.

ಮರಾಠ, ಮರಾಟಿ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಘದ ಸ್ಥಾಪನಾ ಕಾರ್ಯದರ್ಶಿ ಬಿ.ಎ.ಗಣೇಶ್, ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಎಂ.ಟಿ.ಗುರುವಪ್ಪ, ಉಪಾಧ್ಯಕ್ಷರಾದ ಜಿ.ಆರ್.ದೇವಕ್ಕಿ ನಾಯ್ಕ್, ಅಂಬಾಭವಾನಿ ಯುವಕ, ಯುವತಿ ಕ್ರೀಡಾ ಮತ್ತು ಮನೋರಂಜನ ಸಂಘದ ಅಧ್ಯಕ್ಷ ಎಂ.ಆರ್.ಮೋಹನ್, ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ಮಹಿಳಾ ಅಧ್ಯಕ್ಷರಾದ ರತ್ನಮಂಜರಿ, ಮಾಜಿ ಕಾರ್ಯದರ್ಶಿ ಕೆ.ಪಿ.ಗಂಗಾಧರ, ವಿರಾಜಪೇಟೆ ತಾಲ್ಲೂಕು ಮಾಜಿ ಸಂಘಟನಾ ಕಾರ್ಯದರ್ಶಿ ಎಂ.ಟಿ.ಸುನಿತಾ, ಜಿಲ್ಲಾ ಮಾಜಿ ಸಂಘಟನಾ ಕಾರ್ಯದರ್ಶಿ ಎನ್.ಎಸ್.ವಸಂತ, ಮಾಜಿ ಉಪಾಧ್ಯಕ್ಷೆ ಡಿ.ಎಸ್.ತಾಯಮ್ಮ ಪಾಲ್ಗೊಳ್ಳಲಿದ್ದಾರೆ.

ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ:  ಎಂ.ಆರ್.ಮೋಹನ್: 7090327684, ಎಂ.ಎಸ್.ಯೋಗೇಂದ್ರ: 94498 55345, ಎಂ.ಡಿ.ಗುರುಪ್ರಸಾದ್:  99452 40121,  ಸಂತೋಷ್: 9686317062 ಸಂಪರ್ಕಿಸಬಹುದಾಗಿದೆ.