Header Ads Widget

Responsive Advertisement

ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ 80 ಲಕ್ಷ ವೆಚ್ಚದ 600 ಮೆಟ್ರಿಕ್ ಟನ್ ಸಾಮರ್ಥ್ಯದ ಬೃಹತ್ ಗೋದಾಮು ಉದ್ಘಾಟನೆ


ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ 80 ಲಕ್ಷ ವೆಚ್ಚದ 600 ಮೆಟ್ರಿಕ್ ಟನ್ ಸಾಮರ್ಥ್ಯದ ಬೃಹತ್ ಗೋದಾಮು ಉದ್ಘಾಟನೆ 
 

ಪೊನ್ನಂಪೇಟೆ  ಜ 16: ಇಂದು ಅಪರಾಹ್ನ ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನೂತನವಾಗಿ  ಎಂಬತ್ತು ಲಕ್ಷ ವೆಚ್ಚದ 600 ಮೆಟ್ರಿಕ್ ಟನ್ ಸಾಮರ್ಥ್ಯದ ಬೃಹತ್ ಗೋದಾಮನ್ನು ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ.ಜಿ. ಬೋಪಯ್ಯನವರು, ಭಾರತ ಕೃಷಿ ಪ್ರಧಾನ ದೇಶ. ಈ ದೇಶದ ಎಲ್ಲ ರೈತರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿಯಾದರೇ ಮಾತ್ರ ಈ ದೇಶವು ಅಭಿವೃದ್ಧಿಯ ಪಥದಲ್ಲಿ ಮುಂದುವರೆಯುತ್ತದೆ. ಈ ದಿಸೆಯಲ್ಲಿ ನಮ್ಮ ಕೇಂದ್ರ ಸರ್ಕಾರದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಯವರ ಮಹತ್ವಾಕಾಂಕ್ಷಿ ಯೋಜನೆಯಾದ ಆತ್ಮನಿರ್ಭರ ಯೋಜನೆಯಿಂದ ರೈತರಿಗೆ ತಮ್ಮ ಫಸಲನ್ನು ವೈಜ್ಞಾನಿಕವಾಗಿ ಶೇಖರಣೆ ಮಾಡಿ ಸೂಕ್ತ ಸಮಯದಲ್ಲಿ ಗರಿಷ್ಠ ಬೆಲೆಗೆ ಮಾರಾಟ ಮಾಡಲು ಸಹಕಾರಿಯಾಗಲಿದೆ ಎಂದು ನುಡಿದರು.  

ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಂಡೇಪಂಡ ಸುಜಾ ಕುಶಾಲಪ್ಪರವರು ನಮ್ಮ ಸರ್ಕಾರ ರೈತರಿಗೆ ಮಾನ್ಯ ಶ್ರೀ ನರೇಂದ್ರ ಮೋದಿ ಯವರ ಅಭಿಲಾಶೆಯಂತೆ  ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದು ರೈತರಿಗೆ ಆತ್ಮಬಲ ತುಂಬುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.               

ಸಮಾರಂಭದಲ್ಲಿ ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚೇಂದಿರ ರಘು ತಿಮ್ಮಯ್ಯ ಸೇರಿದಂತೆ ಆಡಳಿತ ಮಂಡಳಿ ನಿರ್ದೇಶಕರು, ಸದಸ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ: ✍️....ಕಿರಿಯಮಾಡ ರಾಜ್‌ ಕುಶಾಲಪ್ಪ