ಹುದಿಕೇರಿ ಲಿಟಲ್ ಫ್ಲವರ್ ಹಿರಿಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ
ಹುದಿಕೇರಿ: ಹುದಿಕೇರಿಯ ಲಿಟಲ್ ಫ್ಲವರ್ ಹಿರಿಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಕಿರಿಯಮಾಡ ರಾಜ್ ಕುಶಾಲಪ್ಪ ಪೋಷಕರು ತಮ್ಮ ಮಕ್ಕಳನ್ನು ಉತ್ತಮ ಮಾನವೀಯತೆಯ ಗುಣಗಳನ್ನು ಕಲಿಸಿ, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪಿಸಿ ಸಮಾಜಕ್ಕೆ ಹೊರೆಯಾಗದಂತೆ ಮಾಡುವುದು ಪೋಷಕರ ಮುಖ್ಯ ಜವಾಬ್ದಾರಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ತಹಶಿಲ್ದಾರ್ ಸ್ವಾತಿ ಮಾತನಾಡಿ ಶಿಕ್ಷಣವು ವ್ಯಾಪರಿಕರಣವಾಗದೆ ಈ ಭಾಗದ ಜನರಿಗೆ ಲಿಟಲ್ ಫ್ಲವರ್ ಶಾಲೆ ಸಲ್ಲಿಸುತ್ತಿರುವ ಸೇವೆ ಪ್ರಶಂಸಿಸಿದರು. ಶ್ರೀಮಂಗಲ ಆರಕ್ಷಕ ಠಾಣೆಯ ಸಹಾಯಕ ಉಪನಿರೀಕ್ಷಕ ಸಾಲ್ಡಾನ ವಿದ್ಯಾರ್ಥಿಗಳು ವಿದ್ಯಾವಂತರಾಗುವುದರ ಜೊತೆಗೆ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುವುದು ಅವಶ್ಯಕತೆ ಇದೆ ಹಾಗೆ ಆಪರಾಧ ಜಗತ್ತಿನಿಂದ ಹೊರಗಿದ್ದು, ಸಮಾಜದ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ರೂಢಿಸಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಶಾಲೆಯ ಅಭಿವೃದ್ಧಿಗೆ ಸಹಕರಿಸಿದ ಬಿ.ಎನ್. ಫೂವಯ್ಯರವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network