ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈಧ್ಯಕೀಯ/ ಎಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2022-23ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ, 28 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಕಾರ್ಮಿಕರ ಮಾಸಿಕ ವೇತನ ರೂ.35 ಸಾವಿರ ಮೀರಿರಬಾರದು. (ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು). ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್ಸೈಟ್ನಲ್ಲಿ WWW.klwbapps.karnataka.gov.in ಅರ್ಜಿ ಸಲ್ಲಿಸಬಹುದು(ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಪ.ಜಾ/ಪ.ಪಂ. ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು).
ಹೆಚ್ಚಿನ ಮಾಹಿತಿಗೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 080-23475188, 8277291175, 8277120505, 9141585402, 9141602562 ಮೂಲಕ ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ತಿಳಿಸಿದ್ದಾರೆ.
*ಕೊಡಗಿನ ಸಮಗ್ರ ಸುದ್ದಿ ಮಾಹಿತಿಯನ್ನು ಪಡೆಯಲು ಈಗಲೇ JOIN ಆಗಿ ಸರ್ಚ್ ಕೂರ್ಗ್ ಮೀಡಿಯಾ ನ್ಯೂಸ್ ಅಪ್ಡೇಟ್ಸ್ ವಾಟ್ಸಾಪ್ ಕಮ್ಯೂನಿಟಿಗೆ*
https://chat.whatsapp.com/KwaaZ7ZCQ18FRRNqiqJHPG