(2022-23) ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಗೆ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳು ಸೇವಾಸಿಂದು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ಫಲಾಪೇಕ್ಷಿಗಳು ‘ಗ್ರಾಮ ಒನ್’ ‘ಬೆಂಗಳೂರು ಒನ್’ ಅಥವಾ ‘ಕರ್ನಾಟಕ ಒನ್’ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು.
ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ವಿದ್ಯುತ್ ಚಾಲಿತ ಮತ್ತು ಅಲ್ಲದ ದ್ವಿ-ಚಕ್ರ/ ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನ ಖರೀದಿಸಲು ಗರಿಷ್ಠ ರೂ.50 ಸಾವಿರ ಸಹಾಯಧನ, ಉಳಿದ ಮೊತ್ತ ಸಾಲ.
ಪೋಟೋ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ರೇಷನ್‍ಕಾರ್ಡ್, ಗುರುತಿನ ಚೀಟಿ, ಆಧಾರ ಕಾರ್ಡ್ (ದೂರವಾಣಿ ಸಂಖ್ಯೆ ಜೋಡಣೆಯಾಗಿರಬೇಕು), ಬ್ಯಾಂಕ್ ಪಾಸ್ ಪುಸ್ತಕ, ಡಿಎಲ್(2 ವೀಲರ್) ಈ ದಾಖಲಾತಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜನವರಿ, 16 ಕೊನೆಯ ದಿನವಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಿ ಎರಡು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-571201 ದೂರವಾಣಿ ಸಂಖ್ಯೆ: 08272-228857 ನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಚಂದ್ರಶೇಖರ್ ತಿಳಿಸಿದ್ದಾರೆ.
*ಕೊಡಗಿನ ಸಮಗ್ರ ಸುದ್ದಿ ಮಾಹಿತಿಯನ್ನು ಪಡೆಯಲು ಈಗಲೇ JOIN ಆಗಿ ಸರ್ಚ್ ಕೂರ್ಗ್ ಮೀಡಿಯಾ ನ್ಯೂಸ್ ಅಪ್ಡೇಟ್ಸ್ ವಾಟ್ಸಾಪ್ ಕಮ್ಯೂನಿಟಿಗೆ*
https://chat.whatsapp.com/KwaaZ7ZCQ18FRRNqiqJHPG