Header Ads Widget

ಸರ್ಚ್ ಕೂರ್ಗ್ ಮೀಡಿಯ

ಡಯಾಲಿಸಿಸ್ ಸೇವೆ ಲಭ್ಯ

 ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಧೀನ ಬೋಧಕ ಆಸ್ಪತ್ರೆ ಮಡಿಕೇರಿಯಲ್ಲಿ ಸರ್ಕಾರಿ ಸ್ವಾಮ್ಯದ 4 ಡಯಾಲಿಸಿಸ್ ಉಪಕರಣಗಳು ಮತ್ತು ಖಾಸಗಿ ಸಹಭಾಗಿತ್ವದಲ್ಲಿ 7 ಉಪಕರಣಗಳು ಒಟ್ಟು 11 ಡಯಾಲಿಸಿಸ್ ಉಪಕರಣಗಳು ಕಾರ್ಯನಿರ್ವಹಿಸುತ್ತದೆ. ಅವುಗಳಲ್ಲಿ ಖಾಸಗಿ ಸಹಭಾಗಿತ್ವದ 4 ಉಪಕರಣಗಳು ದುರಸ್ತಿಯಾಗಿದ್ದು, ತುರ್ತು ರಿಪೇರಿ ಕ್ರಮವಹಿಸಲಾಗಿದೆ. ಅದಾಗ್ಯೂ ಒಟ್ಟು 7 ಉಪಕರಣಗಳಿಂದ ನಿರಂತರವಾಗಿ ಡಯಾಲಿಸಿಸ್ ಅನ್ನು ಸಾರ್ವಜನಿಕ ರೋಗಿಗಳಿಗೆ ಒದಗಿಸಲಾಗುತ್ತಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಕಾರ್ಯಪ್ಪ ಅವರು ತಿಳಿಸಿದ್ದಾರೆ.