Header Ads Widget

Responsive Advertisement

ಶಾಸಕರಾದ ಅಪ್ಪಚ್ಚು ರಂಜನ್ ಅವರಿಂದ ರಸ್ತೆ ಉದ್ಘಾಟನೆ

ಶಾಸಕರಾದ ಅಪ್ಪಚ್ಚು ರಂಜನ್ ಅವರಿಂದ ರಸ್ತೆ ಉದ್ಘಾಟನೆ

ಮಡಿಕೇರಿ: ನಗರೋತ್ಥಾನ ಯೋಜನೆಯಡಿ ನಗರದ ವಿವಿಧ ಕಡೆ ನಿರ್ಮಿಸಲಾಗಿರುವ ಕಾಂಕ್ರಿಟ್ ರಸ್ತೆಯನ್ನು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಂಗಳವಾರ ಉದ್ಘಾಟಿಸಿದರು. 

ನಗರದ ಹಲವು ಕಡೆಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಇನ್ನು ಹಲವು ಕಡೆಗಳಲ್ಲಿ ರಸ್ತೆ ನಿರ್ಮಿಸಬೇಕಿದ್ದು, ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಶಾಸಕರು ಹೇಳಿದರು. 

ಮಡಿಕೇರಿ ನಗರದ ಎಲ್ಲೆಡೆ ಸರ್ವಋತು ರಸ್ತೆ ನಿರ್ಮಿಸಲಾಗುತ್ತದೆ. ಆ ನಿಟ್ಟಿನಲ್ಲಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದು ಎಂ.ಪಿ.ಅಪ್ಪಚ್ಚುರಂಜನ್ ಅವರು ತಿಳಿಸಿದರು. 

ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮೇಶ್ ಸುಬ್ರಮಣಿ, ಪೌರಾಯುಕ್ತರಾದ ವಿಜಯ, ನಗರಸಭಾ ಸದಸ್ಯರು ಇತರರು ಇದ್ದರು.