Header Ads Widget

ಸರ್ಚ್ ಕೂರ್ಗ್ ಮೀಡಿಯ

ಚುನಾವಣಾ ಆಯೋಗದ ನಿರ್ದೇಶನವನ್ನು ಎಲ್ಲರೂ ಪಾಲಿಸಿ: ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ

ಚುನಾವಣಾ ಆಯೋಗದ ನಿರ್ದೇಶನವನ್ನು ಎಲ್ಲರೂ ಪಾಲಿಸಿ: ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ 

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ: 

ಮಡಿಕೇರಿ ಮಾ.29: ಭಾರತ ಚುನಾವಣಾ ಆಯೋಗವು ವಿಧಾನಸಭಾ ಸಾರ್ವತ್ರಿಕ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದು, ಆ ನಿಟ್ಟಿನಲ್ಲಿ ಮಾರ್ಚ್, 29 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.  

ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ವಿಧಾನಸಭಾ ಚುನಾವಣೆಯು ಮೇ, 10 ರಂದು ಮತದಾನ ನಡೆಯಲಿದೆ. ಮೇ, 13 ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. 

ಏಪ್ರಿಲ್, 13 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಏಪ್ರಿಲ್, 20 ಕೊನೆಯ ದಿನವಾಗಿದೆ. ಏಪ್ರಿಲ್, 21 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಏಪ್ರಿಲ್, 24 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾಹಿತಿ ನೀಡಿದರು. 

ಚುನಾವಣಾ ಆಯೋಗದ ನಿರ್ದೇಶನದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ವಿವಿಧ ತಂಡಗಳನ್ನು ನೇಮಕ ಮಾಡಲಾಗಿದೆ. ಎಂಸಿಸಿ ಇಬ್ಬರು ನೋಡಲ್ ಅಧಿಕಾರಿಗಳು, 41 ಸೆಕ್ಟರ್ ಅಧಿಕಾರಿಗಳು, 14 ಪ್ಲೈಯಿಂಗ್ ಸ್ಕ್ವಾಡ್, 42 ಸ್ಟಾಟಿಕ್ ಸರ್ವೆಲೆನ್ಸ್ ತಂಡ ರಚಿಸಲಾಗಿದೆ ಎಂದು ಡಾ.ಬಿ.ಸಿ.ಸತೀಶ ಅವರು ವಿವರಿಸಿದರು.  

ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ 40 ಲಕ್ಷ ರೂ. ವರೆಗೆ ಖರ್ಚು ಮಾಡಬಹುದಾಗಿದೆ. ಈ ಹಿನ್ನೆಲೆ ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾ ವಹಿಸಲು ವಿವಿಧ ವೆಚ್ಚ ತಂಡಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಕ್ಕೆ ತಲಾ ಒಬ್ಬರಂತೆ ಇಬ್ಬರು ಸಹಾಯಕ ವೆಚ್ಚ ವೀಕ್ಷಕರು, ಇಬ್ಬರು ಲೆಕ್ಕ ತಂಡದವರು, ನಾಲ್ಕು ಮಂದಿ ವೀಡಿಯೋ ಸರ್ವಿಲೆನ್ಸ್ ತಂಡ, ಹಾಗೆಯೇ ಇಬ್ಬರು ವಿಡಿಯೋ ವಿವಿಂಗ್ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.  

ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಒಬ್ಬ ವ್ಯಕ್ತಿ 50 ಸಾವಿರ ಮೊತ್ತ ತೆಗೆದುಕೊಂಡು ತೆರಳಬಹುದು. ಆದರೆ ಪೂರಕ ದಾಖಲೆ ಇಟ್ಟುಕೊಂಡಿರಬೇಕು. ತಪ್ಪಿದ್ದಲ್ಲಿ ತಪಾಸಣಾ ಅವಧಿಯಲ್ಲಿ ಮುಟ್ಟುಗೋಲು ಹಾಕಲಾಗುತ್ತದೆ ಎಚ್ಚರಿಸಿದರು.  

50 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ದಾಖಲೆಯೊಂದಿಗೆ ಇಟ್ಟುಕೊಂಡು ತೆರಳಿದ ಸಂದರ್ಭ ತಪಾಸಣಾ ಅವಧಿಯಲ್ಲಿ ಅನುಮಾನಾಸ್ಪದವಾಗಿ ಕಂಡುಬಂದಲ್ಲಿ ಮೊತ್ತವನ್ನು ಮುಟ್ಟುಗೋಲು ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು. 

ವಾಹನಗಳಲ್ಲಿ 10 ಲಕ್ಷಕ್ಕಿಂತ ಹೆಚ್ಚು ನಗದು ಇರುವುದು ತಪಾಸಣಾ ಅವಧಿಯಲ್ಲಿ ಕಂಡುಬಂದಲ್ಲಿ ಈ ಮೊತ್ತವನ್ನು ಆದಾಯ ತೆರಿಗೆ ಇಲಾಖೆ ವಶಕ್ಕೆ ನೀಡಲಾಗುವುದು. ವಾಹನಗಳಲ್ಲಿ ಅನುಮಾನಾಸ್ಪದ ಸಾಮಗ್ರಿಗಳಾದ ಗೃಹ ಉಪಯೋಗಿ ವಸ್ತುಗಳು, ಮದ್ಯ, ಮಾದಕ ದ್ರವ್ಯಗಳು ಮತ್ತು ಆಯುಧಗಳನ್ನು ಸಾಗಿಸುವುದು ತಪಾಸಣಾ ಅವಧಿಯಲ್ಲಿ ಕಂಡುಬಂದಲ್ಲಿ ಈ  ವಸ್ತುಗಳನ್ನು ಮುಟ್ಟುಗೋಲು ಮಾಡಲಾಗುವುದು ಎಂದು ಡಾ.ಬಿ.ಸಿ.ಸತೀಶ ಅವರು ನುಡಿದರು. 

ಜಿಲ್ಲೆಯಲ್ಲಿ ಒಟ್ಟು 542 ಮತಗಟ್ಟೆಗಳಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 269 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳು ಇವೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಕೊಡಗು ಜಿಲ್ಲೆಯಲ್ಲಿ ಒಟ್ಟು 4,52,642 ಮತದಾರರಿದ್ದು, 4,51,216 ಸಾಮಾನ್ಯ ಮತದಾರರು ಮತ್ತು 1,426 ಸೇವಾ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2,30,359 ಮತದಾರರು ಇದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 2,22,283 ಮಂದಿ ಮತದಾರರಿದ್ದಾರೆ ಎಂದರು. 

ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್‍ರಾದ ಕಿರಣ್ ಜಿ.ಗೌರಯ್ಯ (ಮಡಿಕೇರಿ), ಎಸ್.ಎನ್.ನರಗುಂದ(ಸೋಮವಾರಪೇಟೆ), ಟಿ.ಎಂ.ಪ್ರಕಾಶ್(ಕುಶಾಲನಗರ),  ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದರು. 

     ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ಅವರು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಸಹಾಯಕ ಚುನಾವಣಾಧಿಕಾರಿಯಾಗಿ ಕಿರಣ್ ಜಿ.ಗೌರಯ್ಯ(ಮಡಿಕೇರಿ), ಎಚ್.ಎನ್.ರಾಮಚಂದ್ರ(ವಿರಾಜಪೇಟೆ), ಎಸ್.ಎನ್.ಪ್ರಶಾಂತ್(ಪೊನ್ನಂಪೇಟೆ) ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.        

      ಮತದಾರರ ಸಹಾಯವಾಣಿ: ಚುನಾವಣೆಯ ಅಕ್ರಮಗಳ ಬಗ್ಗೆ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಯಾಗಿರುವ ಬಗ್ಗೆ, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯಲು ಹಾಗೂ ಇತರೆ ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು/ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕರೆ ಮಾಡಬಹುದಾಗಿದೆ. ವೋಟರ್ ಸಹಾಯವಾಣಿಯು 24*7 ಕಾರ್ಯನಿರ್ವಹಿಸುವುದು. (ಹೊರ ಜಿಲ್ಲೆಯಿಂದ ಕರೆ ಮಾಡುವವರು 08272-1950ಗೆ ಕರೆ ಮಾಡುವುದು) ಎಂದರು. 

      ವಿವಿಧ ಕಾರ್ಯಕ್ರಮಗಳಿಗೆ ಅನುಮತಿ ನೀಡುವ ಬಗ್ಗೆ. ನಿಶ್ಚಿತಾರ್ಥ, ಮದುವೆ, ನಾಮಕರಣ ಮತ್ತಿತರ ಖಾಸಗಿ ಸಮಾರಂಭಗಳಿಗೆ ಯಾವುದೇ ನಿರ್ಬಂಧ ಇಲ್ಲ, ಆದರೆ ಈ ಸಮಾರಂಭಗಳು ರಾಜಕೀಯ ಪ್ರೇರಿತವಾಗಿರಬಾರದು ಮತ್ತು ಯಾವುದೇ ಪಕ್ಷದ ಪ್ರಚಾರಕ್ಕೆ ವೇದಿಕೆಯಾಗಿರಬಾರದು.  ಮೆರವಣಿಗೆ, ವಾರ್ಷಿಕೋತ್ಸವ, ಜಾತ್ರೆ, ಸಾಮೂಹಿಕ ವಿವಾಹ ಮತ್ತಿತರ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಲು ಸಂಬಂಧಿಸಿದ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಅನುಮತಿ ಕಡ್ಡಾಯವಾಗಿದೆ. ಚುನಾವಣಾಧಿಕಾರಿಗಳು ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು 24 ಗಂಟೆಯೊಳಗೆ ಅನುಮತಿ ನೀಡಲಿದ್ದಾರೆ ಎಂದರು. 

        ಸಿ-ವಿಜಿಲ್: ಭಾರತ ಚುನಾವಣಾ ಆಯೋಗವು ಛಿ-ಗಿigiಟ ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿಪಡಿಸಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಅನುಷ್ಠಾನಗೊಳಿಸುತ್ತಿದೆ. ಈ ಅಪ್ಲಿಕೇಷನ್‍ನ್ನು ಗೂಗಲ್ ಪ್ಲೇ ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಂಡು, ಚುನಾವಣೆಯಲ್ಲಿ ಮತದಾರರಿಗೆ ಅಕ್ರಮವಾಗಿ ಹಣ, ಗೃಹ ಬಳಕೆ ಸಾಮಗ್ರಿಗಳನ್ನು, ಮದ್ಯವನ್ನು ಹಂಚಿಕೆ ಮಾಡುವ ಬಗ್ಗೆ ಹಾಗೂ ಯಾವುದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಅಪ್ಲಿಕೇಷನ್‍ನಲ್ಲಿ ವಿಡಿಯೋ ಮತ್ತು ಪೋಟೊಗಳ ಮೂಲಕ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. 

ಜಿಲ್ಲೆಯ 151 ಹಾಡಿಗಳಿಗೆ ಎರಡು ಬಾರಿ ಭೇಟಿ ನೀಡಿ ಸುಮಾರು 1002 ಮಂದಿ ಆದಿವಾಸಿಗಳ ಹೆಸರನ್ನು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಕ್ರಮವಹಿಸಲಾಗಿದೆ ಎಂದು ವಿವರಿಸಿದರು. 

ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಸಾರ್ವಜನಿಕ/ ಖಾಸಗಿ ಸ್ಥಳಗಳಲ್ಲಿ ಅಳವಡಿಸಲಾಗಿರುವ ಹೆದ್ದಾರಿ ಫಲಕಗಳ ಪ್ರಚಾರದ ಮಾಹಿತಿಯನ್ನು ತೆರವುಗೊಳಿಸಲು ಕ್ರಮವಹಿಸಲಾಗಿದೆ ಎಂದರು.  

‘ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟ/ ಪ್ರಸಾರ ಸಂಬಂಧ ಪೂರ್ವಾನುಮತಿ ಪಡೆಯಬೇಕಿದ್ದು, ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಭವನದ ಮೂರನೇ ಮಹಡಿಯಲ್ಲಿ ‘ಎಂಸಿಎಂಸಿ’ ಕಚೇರಿ ಆರಂಭಿಸಲಾಗಿದ್ದು, ಪೂರ್ವಾನುಮತಿ ಪಡೆಯಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. 

      ಚುನಾವಣೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳನ್ನು ಭಾರತ ಚುನಾವಣಾ ಆಯೋಗದ ವೆಬ್‍ಸೈಟ್ ತಿತಿತಿ.eಛಿi.ಟಿiಛಿ.iಟಿ ಮತ್ತು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್ ತಿತಿತಿ.ಛಿeoಞಚಿಡಿಟಿಚಿಣಚಿಞಚಿ.ಞಚಿಡಿ.ಟಿiಛಿ.iಟಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ವೆಬ್‍ಸೈಟ್: ತಿತಿತಿ.ಞoಜಚಿgu.ಟಿiಛಿ.iಟಿ ನಲ್ಲಿ ಮಾಹಿತಿಯನ್ನು ಪಡೆಯಬಹುದು.

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಕುಟ್ಟ, ಮಾಕುಟ,್ಟ ಕರಿಕೆ ಸೇರಿ 3 ಅಂತರ ರಾಜ್ಯ ಚೆಕ್‍ಪೋಸ್ಟ್‍ಗಳನ್ನು ತೆರೆಯಲಾಗಿದೆ. ಹಾಗೆಯೇ 11 ಅಂತರ್ ಜಿಲ್ಲಾ ಚೆಕ್ ಪೋಸ್ಟ್‍ಗಳನ್ನು ತೆರೆಯಲಾಗಿದೆ ಎಂದರು. 

      ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋ ಬಸ್ತ್ ನಿಯೋಜಿಸಲಾಗುತ್ತದೆ. ಶಾಂತಿಯುತ ಚುನಾವಣೆಗೆ ಪೊಲೀಸ್ ಇಲಾಖೆ ಎಲ್ಲಾ ರೀತಿಯ ಕ್ರಮವಹಿಸಲಾಗಿದೆ ಎಂದರು.  

      ಸ್ವೀಪ್ ಹಾಗೂ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ.ಎಸ್.ಆಕಾಶ್ ಅವರು ಮಾತನಾಡಿ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಶಿಕ್ಷಣ ಮತ್ತು ಜಾಗೃತಿ ಸಮಿತಿ ವತಿಯಿಂದ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. 

      ಕೊಡಗು ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಡಿಮೆ ಮತದಾನವಾಗಿದ್ದ 65 ಮತಗಟ್ಟೆಗಳಲ್ಲಿ ಹೆಚ್ಚಿನ ಮತದಾನಕ್ಕೆ ಶ್ರಮಿಸಲಾಗಿದೆ. ವೋಟರ್ ಹೆಲ್ಫ್‍ಲೈನ್ ಆ್ಯಪ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬಹುದಾಗಿದೆ ಎಂದರು. 

      ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಅಬಕಾರಿ ಇಲಾಖೆಯ ಜಿಲ್ಲಾ ಆಯುಕ್ತರಾದ ಜಗದೀಶ್, ಇತರರು ಇದ್ದರು.