ಡಾ.ಬಾಬು ಜಗಜೀವನ್ ರಾಂ ಅವರ 116 ನೇ ಜನ್ಮ ದಿನಾಚರಣೆ
ಮಡಿಕೇರಿ ಏ.05: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ್ ರಾಂ ಅವರ 116 ನೇ ಜನ್ಮ ದಿನಾಚರಣೆಯನ್ನು ಬುಧವಾರ ಸರಳವಾಗಿ ಆಚರಿಸಲಾಯಿತು.
ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಇತರರು ಪುಷ್ಪನಮನ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ದೇಶದಲ್ಲಿ ತಲೆದೋರಿದ ಆಹಾರ ಸಮಸ್ಯೆ ಹೋಗಲಾಡಿಸಿದ ಕೀರ್ತಿ ಬಾಬು ಜಗಜೀವನ್ ರಾಂ ಅವರಿಗೆ ಸಲ್ಲುತ್ತದೆ ಎಂದರು.
ದಮನಿತರ ಪರವಾಗಿ ಹೋರಾಟ ನಡೆಸಿದ ಮಾಜಿ ಉಪ ಪ್ರಧಾನಮಂತ್ರಿ ಬಾಬು ಜಗಜೀವನ್ ರಾಂ ಅವರು ಕೃಷಿ, ರಕ್ಷಣಾ ಸಚಿವರಾಗಿ ಸಲ್ಲಿಸಿದ ಸೇವೆ ಸ್ಮರಣೀಯವಾದದ್ದು ಎಂದು ಅವರು ಹೇಳಿದರು.
‘ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಗೆ ಭಾರತವನ್ನು ಸೇರಿಸುವಲ್ಲಿ ಜಗಜೀವನ್ ರಾಂ ಅವರ ಪಾತ್ರ ಮಹತ್ವದ್ದಾಗಿದೆ. ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಅಲ್ಲದೇ ಇನ್ನೂ ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ’ ಎಂದು ಶೇಖರ್ ವಿವರಿಸಿದರು.’
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್, ಕೃಷಿ ಇಲಾಖೆಯ ಉಪ ನಿದೇಶಕರಾದ ಬಲರಾಜ್ ರಂಗರಾವ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ವ್ಯವಸ್ಥಾಪಕರಾದ ಕುಸುಮ, ಇತರರು ಇದ್ದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network