Header Ads Widget

Responsive Advertisement

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ 

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. 

ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದು ಅದರಲ್ಲಿ, ”ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನಮಾನ ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.