Header Ads Widget

ಸರ್ಚ್ ಕೂರ್ಗ್ ಮೀಡಿಯ

ಸುಸ್ಸಜ್ಜಿತ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಮಿನಿ ತಾರಾಲಯ ನಿರ್ಮಿಸುವ ಕುರಿತು ಸಭೆ

ಸುಸ್ಸಜ್ಜಿತ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಮಿನಿ ತಾರಾಲಯ ನಿರ್ಮಿಸುವ ಕುರಿತು ಸಭೆ

ಉತ್ತಮ ವಿನ್ಯಾಸದೊಂದಿಗೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣ: ಜಿಲ್ಲಾಧಿಕಾರಿ 

ಮಡಿಕೇರಿ ಜು.11: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪೆÇ್ರೀತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) ವತಿಯಿಂದ ಸರ್ಕಾರದ ನಿರ್ದೇಶನದಂತೆ ಕೊಡಗು ಜಿಲ್ಲಾಡಳಿತದ ಸಹಯೋಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಉದ್ದೇಶಿತ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಮಿನಿ ತಾರಾಲಯ ನಿರ್ಮಾಣ ಕಾರ್ಯ ಕೈಗೊಳ್ಳುವ ನಿಟ್ಟಿನಲ್ಲಿ ಉತ್ತಮ ವಾಸ್ತುಶಿಲ್ಪಿ ವಿನ್ಯಾಸದೊಂದಿಗೆ ಕೊಡಗಿನ ಭೌಗೋಳಿಕ ಪರಿಸರ ಹಾಗೂ ಹವಾಮಾನಕ್ಕೆ ಅನುಗುಣವಾಗಿ ಕಟ್ಟಡದ ವಿನ್ಯಾಸ ರೂಪಿಸಿ ಸುಸ್ಸಜ್ಜಿತ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು ಎಂದು ಜಿಲ್ಲಾ ವಿಜ್ಞಾನ ಕೇಂದ್ರದ ಸಮಿತಿ ಅಧ್ಯಕ್ಷರೂ ಆದ  ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.  

ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಮಿನಿ ತಾರಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ರೂಪುರೇμÉಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚಿಸಲು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ವಿಜ್ಞಾನ ಕೇಂದ್ರದ ಸಮಿತಿ ಸದಸ್ಯರೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಸರ್ಕಾರದ ಯೋಜನೆಯಂತೆ ಕೆಸ್ಟೆಪ್ಸ್ ವತಿಯಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ರೂ.4 ಕೋಟಿ ಹಾಗೂ ಮಿನಿ ತಾರಾಲಯ  ಸ್ಥಾಪನೆಗೆ  5.75 ಕೋಟಿ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ. ವಿಜ್ಞಾನ ಕೇಂದ್ರಕ್ಕೆ ನಗರದ ಹೊರಭಾಗದ ಕಣರ್ಂಗೇರಿ ಗ್ರಾಮದ ಬಳಿ ವಿಜ್ಞಾನ ಕೇಂದ್ರ ಸ್ಥಾಪಿಸಲು ಜಾಗವನ್ನು ಈಗಾಗಲೇ ಮಂಜೂರುಗೊಳಿಸಲಾಗಿದ್ದು, ಸ್ಥಳವನ್ನು ಮತ್ತೊಮ್ಮೆ ಪರಿಶೀಲಿಸಿ, ಅಂತಿಮಗೊಳಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.   

ಉದ್ದೇಶಿತ ವಿಜ್ಞಾನ ಕೇಂದ್ರವನ್ನು ಸುಸಜ್ಜಿತವಾಗಿ ನಿರ್ಮಿಸಿ, ಈ ಕೇಂದ್ರದ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳ ವಿಜ್ಞಾನ ಕಲಿಕೆಗೆ ಪೂರಕವಾಗಿ ವಿವಿಧ ವೈಜ್ಞಾನಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಮಿತಿಯ ಎಲ್ಲಾ ಸದಸ್ಯರು ಅಗತ್ಯ ಸಲಹೆಗಳನ್ನು ನೀಡಬೇಕು ಎಂದು  ವೆಂಕಟ್ ರಾಜಾ ಅವರು ತಿಳಿಸಿದರು.

ಉದ್ದೇಶಿತ ಈ ವಿಜ್ಞಾನ ಕೇಂದ್ರವನ್ನು ಉತ್ತಮ ತಾಂತ್ರಿಕ ವ್ಯವಸ್ಥೆಯೊಂದಿಗೆ ವಿಜ್ಞಾನ ಪ್ರಯೋಗಾಲಯ ಸೇರಿದಂತೆ ವಿಜ್ಞಾನದ ವಿವಿಧ ಚಟುವಟಿಕೆಗಳನ್ನು ಉತ್ತಮವಾಗಿ ಕೈಗೊಳ್ಳುವ  ಕುರಿತು ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು.

ಸಭೆಯಲ್ಲಿ ವಿಜ್ಞಾನ ಕೇಂದ್ರದ ರೂಪುರೇಷೆ ಚಟುವಟಿಕೆಗಳ ಕುರಿತು ಸಮಿತಿಯ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಉದ್ದೇಶಿತ ವಿಜ್ಞಾನ ಕೇಂದ್ರವನ್ನು ಸುಸಜ್ಜಿತವಾಗಿ ನಿರ್ಮಿಸುವ ಮೂಲಕ ಈ ಕೇಂದ್ರದ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳ ವಿಜ್ಞಾನ ಕಲಿಕೆಗೆ ಪೂರಕವಾಗಿ ವಿವಿಧ ವೈಜ್ಞಾನಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಮಿತಿಯ ಎಲ್ಲಾ ಸದಸ್ಯರು ಅಗತ್ಯ ಸಲಹೆ ನೀಡಬೇಕು ಎಂದು ತಿಳಿಸಿದರು.

ಉದ್ದೇಶಿತ ವಿಜ್ಞಾನ ಕೇಂದ್ರದ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ರಾಜ್ಯದ ವಿವಿಧೆಡೆ ಈಗಾಗಲೇ ನಿರ್ಮಾಣಗೊಂಡಿರುವ ಧಾರವಾಡ ಮತ್ತು ಮಂಗಳೂರು ಪ್ರಾದೇಶಿಕ ವಿಜ್ಞಾನ ಕೇಂದ್ರ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಉತ್ತಮವಾಗಿ ರೂಪುಗೊಂಡಿರುವ ವಿಜ್ಞಾನ ಕೇಂದ್ರಗಳ ಮಾದರಿಯಲ್ಲಿ ಜಿಲ್ಲೆಯಲ್ಲಿಯೂ ವಿಜ್ಞಾನ ಕೇಂದ್ರ ನಿರ್ಮಿಸುವ ಕುರಿತು ಚರ್ಚಿಸಿದರು.

ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಮಾದರಿ ಹಾಗೂ ವಿನ್ಯಾಸಗಳ ಬಗ್ಗೆ ಸೂಕ್ತ ಮಾಹಿತಿ ಪಡೆದು ಉತ್ತಮ ಮಾದರಿಯಲ್ಲಿ ಕೊಡಗಿನ ಭೌಗೋಳಿಕ ಪ್ರದೇಶಕ್ಕೆ ಅನುಗುಣವಾಗಿ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಕಾರ್ಯೋನ್ಮುಖವಾಗುವಂತೆ ಜಿಲ್ಲಾಧಿಕಾರಿ  ತಿಳಿಸಿದರು. 

ಸಭೆಯಲ್ಲಿ ವಿಜ್ಞಾನ ಕೇಂದ್ರ ಹಾಗೂ ಮಿನಿ ತಾರಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಅಂದಾಜು ವೆಚ್ಚ ಮತ್ತು ಕಾರ್ಯಯೋಜನೆಗಳು ಹಾಗೂ ತಾಂತ್ರಿಕ ಮಾಹಿತಿ ನೀಡಿದರು.

ಈ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ಮಾಣಕ್ಕೆ ಬೇಕಾದ ಅನುದಾನವನ್ನು ಪಡೆಯಲು ಕೆ-ಸ್ಟೆಪ್ಸ್  ಗೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಯಿತು. ಕಣರ್ಂಗೇರಿಯಲ್ಲಿ ನಿರ್ಮಿಸಲು ಉದ್ದೇಶಿರುವ ಉದ್ದೇಶಿತ ವಿಜ್ಞಾನ ಕೇಂದ್ರದ ಸ್ಥಳದ ಮಣ್ಣು ಪರೀಕ್ಷೆಯೊಂದಿಗೆ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಈ ಸ್ಥಳವು ಸೂಕ್ತವಾಗಿದೆಯೇ ಎಂದು ಸ್ಥಳ ಪರಿಶೀಲನೆ ನಡೆಸಿ ತಕ್ಷಣದಲ್ಲಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ ಅವರಿಗೆ ಸೂಚನೆ ನೀಡಿದರು. 

ಈ ಸ್ಥಳ ಪರಿಶೀಲನೆಗೆ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾಗೂ ಪೆÇನ್ನಂಪೇಟೆ ಸಿಐಟಿ ಎಂಜಿನಿಯರಿಂಗ್  ಕಾಲೇಜಿನ  ಸಿವಿಲ್ ಎಂಜಿನಿಯರಿಂಗ್ ವಿಭಾಗ ತಜ್ಞ ಉಪನ್ಯಾಸಕರು ಸೇರಿದಂತೆ ಭೂ ವಿಜ್ಞಾನ ಕೇಂದ್ರದ ವತಿಯಿಂದ ಮಣ್ಣು ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. 

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರೂ ಆದ ಬೋಸರಾಜು ಅವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ನಮ್ಮ ಜಿಲ್ಲೆಯಲ್ಲಿ ಸುಸಜ್ಜಿತ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.

ವಿಜ್ಞಾನ ಕೇಂದ್ರದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎಲ್ಲಾ ಪೂರ್ವ ತಯಾರಿ ಮಾಡಿಕೊಂಡು ಸರ್ಕಾರದಿಂದ ಅನುಮತಿ ಪಡೆದು ಸೆಪ್ಟೆಂಬರ್ ವೇಳೆಗೆ ವಿಜ್ಞಾನ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾನೆ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ತಮ್ಮ ಸೂಕ್ತ ಸಲಹೆಗಳನ್ನು ಡಿಡಿಪಿಐ ಅವರ ಮೂಲಕ ಸಲ್ಲಿಸಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಡಿಡಿಪಿಐ ಸಿ.ರಂಗಧಾಮಯ್ಯ ಮಾತನಾಡಿ, ವಿಜ್ಞಾನ ಕೇಂದ್ರದ ರೂಪುರೇμÉ ಹಾಗೂ ಈ ತನಕ ಆಗಿರುವ ಬೆಳವಣಿಗೆಗಳ ಕುರಿತು ಸಭೆಯ ಗಮನಕ್ಕೆ ತಂದರು.

ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ವಿಜ್ಞಾನ ಕೇಂದ್ರದ ಕುರಿತು ಮಾಹಿತಿ ನೀಡಿದರು. ಕೊಡಗು ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಜಿ.ಕಣ್ಣನ್ ವಿಜ್ಞಾನ ಕೇಂದ್ರದ ವಿನ್ಯಾಸಕ್ಕೆ ಸಂಬಂಧಿಸಿದಂತೆ ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ ನಂಜುಂಡೇಗೌಡ, ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಎಸ್.ಸತೀಶ್, ಚೆಟ್ಟಳ್ಳಿ ಕಾಫಿ ಉಪ ಸಂಶೋಧನಾ ಕೇಂದ್ರದ ಮುಖ್ಯಸ್ಥ ಚಂದ್ರಪ್ಪ, ಜಂಟಿ ಕೃಷಿ ನಿರ್ದೇಶಕಿ ಶಬನಾ ಎಂ.ಶೇಖ್, ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ಸಿ.ಎಂ.ಪ್ರಮೋದ್, ಪೆÇನ್ನಂಪೇಟೆ ಹಳ್ಳಿಗಟ್ಟು ಸಿಐಟಿ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥ ಡಾ.ಪ್ರಣೀತ್ ಗಣಪತಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ.ಬಿ.ರಾಘವ, ರಾಸಾಯನಶಾಸ್ತ್ರದ ಮುಖ್ಯಸ್ಥ ಡಾ.ಮಂಜುನಾಥ್, ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ ರವಿಶಂಕರ್, ಪರಿಸರ ಅಧಿಕಾರಿ ಎಂ.ಜಿ ರಘುರಾಂ, ವಿಜ್ಞಾನ ಕಾರ್ಯಕರ್ತ ಜಿ.ಶ್ರೀನಾಥ್, ವಿವಿಧ ಇಲಾಖೆಯ ಪ್ರಮುಖರು ಇದ್ದರು.

ವಿಜ್ಞಾನ ಕೇಂದ್ರದ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ನಲ್ಲಿ ಪ್ರತ್ಯೇಕವಾಗಿ ಖಾತೆಯನ್ನು ತೆರೆಯುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು. ಉದ್ದೇಶಿತ ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳು ಅನುಕೂಲವಾಗುವಂತೆ ಪೂರಕ ವಿಜ್ಞಾನ ಚಟುವಟಿಕೆಗಳು, ಪ್ರಾತ್ಯಕ್ಷಿಕೆಗಳು, ವಸ್ತು ಪ್ರದರ್ಶನ, ಖಗೋಳ ವಿಜ್ಞಾನ ಸೇರಿದಂತೆ ವಿವಿಧ ವಿಜ್ಞಾನ ಚಟುವಟಿಕೆಗಳನ್ನು ಸಂಘಟಿಸುವುದು ಹಾಗೂ ವಿಜ್ಞಾನ ಆಸಕ್ತರಿಗೆ  ಪೂರಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಕುರಿತು ನಿರ್ಣಯಿಸಲಾಯಿತು.