Header Ads Widget

ಸರ್ಚ್ ಕೂರ್ಗ್ ಮೀಡಿಯ

ಶಿಕ್ಷಕಿಯರಿಗೆ ಬೀಳ್ಕೊಡುಗೆ ಸಮಾರಂಭ

ನಿವೃತ ಮುಖ್ಯ ಶಿಕ್ಷಕಿ ಮೀನಾಗೆ ಸನ್ಮಾನ ಸಂದರ್ಭ
ಸಹ ಶಿಕ್ಷಕಿ ಆರ್ಶಿಯ ಗೆ ಸನ್ಮಾನ

ಚೆಯ್ಯಂಡಾಣೆ, ಜು 3: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕಿ ಮೀನಾ ಹಾಗೂ ದಶಕಗಳ ಕಾಲ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಚೇಲಾವರ ಪೊನ್ನೋಲ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಆರ್ಶಿಯರವರನ್ನು ಶಾಲಾ ಆಡಳಿತ ಮಂಡಳಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪೋಷಕರು, ಶಾಲಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಿರು ಕಾಣಿಕೆ ನೀಡಿ ಸನ್ಮಾನಿಸಿ ಆತ್ಮೀಯವಾಗಿ ಬೀಲ್ಕೊಟ್ಟರು.

ಈ ಸಂದರ್ಭ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ರತ್ನಾ, ಮುಖ್ಯ ಶಿಕ್ಷಕಿ ಪ್ರೇಮಾ ಕುಮಾರಿ,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಗ್ರಾ.ಪಂ. ಸದಸ್ಯೆ ಮಂಜುಳಾ, ಪೆಮ್ಮಂಡ ಕಾವೇರಮ್ಮ, ಅಂಗನವಾಡಿ ಕಾರ್ಯಕರ್ತೆ ತಾರ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ:  ಸಿ.ಎ. ಅಶ್ರಫ್, ಚೆಯ್ಯಂಡಾಣೆ